AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಕಿರಿಕ್​

ಟಿಕೆಟ್ ವಿಚಾರವಾಗಿ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲಾ ಕಾಂಗ್ರೆಸ್​ ಕಚೇರಿಯಲ್ಲಿ ನಡೆದಿದೆ. ಯಾರಿಗೆ ಟಿಕೆಟ್ ಕೊಟ್ಟರು ಕೆಲಸ ಮಾಡೋಣ ಎಂದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಕಿರಿಕ್​
ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಗಂಗಾಧರ​ ಬ. ಸಾಬೋಜಿ
|

Updated on:Apr 01, 2023 | 3:31 PM

Share

ಚಿಕ್ಕಮಗಳೂರು: ಟಿಕೆಟ್ ವಿಚಾರವಾಗಿ ಕಾಂಗ್ರೆಸ್ (Congress) ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲಾ ಕಾಂಗ್ರೆಸ್​ ಕಚೇರಿಯಲ್ಲಿ ನಡೆದಿದೆ. ಯಾರಿಗೆ ಟಿಕೆಟ್ ಕೊಟ್ಟರು ಕೆಲಸ ಮಾಡೋಣ ಎಂದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಸಂಯೋಜಕ ಪವನ್ ಮೇಲೆ ವಿರೋಧಿ ಬಣ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಎಲ್ಲರೂ ಒಗ್ಗಟ್ಟಾಗಿ ಇರುವಂತೆ ಹೇಳಿದ್ದಕ್ಕೆ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ವಿರುದ್ಧವೂ ಕಿಡಿಕಾರಲಾಗಿದೆ. ಅರ್ಜಿ ಸಲ್ಲಿಸಿರುವವರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ತಮ್ಮಯ್ಯಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಒತ್ತಾಯಸಿದ್ದು, ಈ ವೇಳೆ ಸಭೆಯಲ್ಲಿ ಕಾಂಗ್ರೆಸ್​ ಮುಖಂಡರು, ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ದಂಗಲ್ ಶುರುವಾಗಿದ್ದು, ಹೈಕಮಾಂಡ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದಾರೆ.

ವಲಸಿಗರಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಪಟ್ಟು ಹಿಡಿದಿದ್ದು, 6 ಟಿಕೆಟ್ ಆಕಾಂಕ್ಷಿಗಳ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ಮಾಡಲಾಗಿದೆ. ಎಚ್​ಡಿ ತಮ್ಮಯ್ಯನಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Congress: ಸಿಟಿ ರವಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗಕ್ಕೆ ಮುಂದಾದ ಕಾಂಗ್ರೆಸ್ ಹೈಕಮಾಂಡ್​​ಗೆ ಸ್ವಪಕ್ಷದಿಂದಲೇ ವಿರೋಧ!

ಸಿಟಿ ರವಿಗೆ ಟಕ್ಕರ್ ನೀಡಲು ಮುಂದಾಗಿದ್ದ ಕಾಂಗ್ರೆಸ್​ ಹೈಕಮಾಂಡ್

ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ತಮ್ಮಯ್ಯಗೆ ಟಿಕೆಟ್ ನೀಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ ಟಕ್ಕರ್ ನೀಡಲು ಮುಂದಾಗಿದ್ದ ಕಾಂಗ್ರೆಸ್​ ಹೈಕಮಾಂಡ್​ಗೆ ಇದೀಗ ಪ್ರತಿರೋಧದ ಬಿಸಿ ತಟ್ಟಿದೆ. ಮೂಲ ಕಾಂಗ್ರೆಸ್ಸಿಗರನ್ನು ಬಿಟ್ಟು ವಲಸಿಗರಿಗೆ ಟಿಕೆಟ್ ನೀಡದಂತೆ ಪಕ್ಷದೊಳಗೆ ಆಗ್ರಹ ವ್ಯಕ್ತವಾಗಿದೆ. ಇದರೊಂದಿಗೆ ಟಿಕೆಟ್ ನಿರ್ಧಾರ ಕೈಗೊಳ್ಳುವ ವಿಚಾರದಲ್ಲಿ ಹೈಕಮಾಂಡ್​ ಇಕ್ಕಟ್ಟಿಗೆ ಸಿಲುಕಿದೆ.

ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ ಹಾಗೂ ವಲಸೆ ಕಾಂಗ್ರೆಸಿಗರ ನಡುವೆ ಟಿಕೆಟ್​ಗಾಗಿ ಪೈಪೋಟಿ ತೀವ್ರಗೊಂಡಿದೆ. ಹಿಂದೆ ಸಿಟಿ ರವಿ ಅವರ ಆಪ್ತರಾಗಿದ್ದ ತಮ್ಮಯ್ಯ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದಲ್ಲದೆ, ರವಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

ವಲಸಿಗರು ಮತ್ತು ಮೂಲ ಕಾಂಗ್ರೆಸ್ಸಿಗರ ನಡುವೆ ಟಿಕೆಟ್ ಫೈಟ್

ಶಾಸಕ ಸಿಟಿ ರವಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗಕ್ಕೆ ಯೋಜನೆ ಸಿದ್ದಪಡಿಸಿದ್ದ ಕಾಂಗ್ರೆಸ್ ಹೈಕಮಾಂಡ್, ರವಿ ಅವರ ಮಾಜಿ ಆಪ್ತನನ್ನೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ತಮ್ಮಯ್ಯ ಟಿಕೆಟ್​ಗೆ ಅರ್ಜಿ ಸಲ್ಲಿಸದಿದ್ದರೂ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್‌ಐಆರ್

ಈ ಮಧ್ಯೆ, ವಲಸಿಗರು ಮತ್ತು ಮೂಲ ಕಾಂಗ್ರೆಸ್ಸಿಗರ ನಡುವೆ ಟಿಕೆಟ್ ಫೈಟ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. 6 ಮಂದಿ ಟಿಕೆಟ್ ಆಕಾಂಕ್ಷಿಗಳ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಲಾಗಿತ್ತು. ವಲಸಿಗರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಕಾರ್ಯಕರ್ತರು ಸಭೆಯಲ್ಲಿ ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:31 pm, Sat, 1 April 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!