ಎಸ್​ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಚುರುಕಾದ ಜೆಡಿಎಸ್; ಕಾರಣವೇನು?

Karnataka Politics; ಕರ್ನಾಟಕ ರಾಜಕೀಯದಲ್ಲಿ ಆಪರೇಷನ್ ಹಸ್ತದ ಗಾಳಿ ಜೋರಾಗಿದೆ. ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಕಾಂಗ್ರೆಸ್​ಗೆ ಸೇರುವ ಬಗ್ಗೆ ಗುಸುಗುಸು ಜೋರಾಗಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ರಾಜಕೀಯ​ ಚಟುವಟಿಕೆಗಳು ಗರಿಗೆದರಿವೆ. ಇದಕ್ಕೆ ಕಾರಣವೇನು? ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು? ಇಲ್ಲಿದೆ ವಿವರ.

ಎಸ್​ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಚುರುಕಾದ ಜೆಡಿಎಸ್; ಕಾರಣವೇನು?
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Aug 22, 2023 | 7:13 PM

ಬೆಂಗಳೂರು, ಆಗಸ್ಟ್ 22: ಕರ್ನಾಟಕ ರಾಜಕೀಯದಲ್ಲೀಗ (Karnataka Politics) ‘ಆಪರೇಷನ್ ಹಸ್ತ’ದ ವದಂತಿ. ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ (BJP) ಸೇರಿದ್ದ ಕೆಲವು ಪ್ರಮುಖ ನಾಯಕರು ಮತ್ತೆ ‘ಕೈ’ ಹಿಡಿಯಲಿದ್ದಾರೆ ಎಂಬ ವರದಿಗಳಿಗೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳು ಪುಷ್ಟಿ ನೀಡಿವೆ. ಈ ಮಧ್ಯೆ, ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ (ST Somashekhar) ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಇದ್ದು, ಜೆಡಿಎಸ್ ನಾಯಕರು ಅಲರ್ಟ್ ಆಗಿದ್ದಾರೆ! ಒಂದು ವೇಳೆ ಎಸ್​​ಟಿ ಸೋಮಶೇಖರ್ ಕಾಂಗ್ರೆಸ್​​ಗೆ ಸೇರಿದ್ದೇ ಆದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯ ನಡೆಯಬೇಕಾಗುತ್ತದೆ. ಹೀಗಾಗಿ ಅದಕ್ಕೆ ಜೆಡಿಎಸ್ ಈಗಲೇ ಸಿದ್ಧತೆ ಆರಂಭಿಸಿದೆ.

ಜೆಡಿಎಸ್​​​ನಿಂದ ಉಪ ಚುನಾವಣೆಗೆ ಸಿದ್ಧತೆ ಶುರುವಾಗಿದ್ದು, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಮಹತ್ವದ ಸಭೆ ನಡೆಸಲಾಗಿದೆ. ಪರಾಜಿತ ಅಭ್ಯರ್ಥಿ ಜವರಾಯಿಗೌಡ ಸೇರಿ ಹಲವು ಮುಖಂಡರು ಸಭೆಯಲ್ಲಿ ಭಾಗಿ‌ಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಜವರಾಯಿಗೌಡ ಸೋತಿದ್ದರು.

ಸೋಮಶೇಖರ್ ಕ್ಷೇತ್ರಕ್ಕೆ ಭರ್ಜರಿ ಅನುದಾನ

ಎಸ್​ಟಿ ಸೋಮಶೇಖರ್ ಅವರ ಕೆಲವು ಮಂದಿ ಬೆಂಬಲಿಗರು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಅವರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ಭರ್ಜರಿ ಅನುದಾನ ಮಂಜೂರು ಮಾಡಿದೆ. ಇದು ಸೋಮಶೇಖರ್ ಸಹ ಕಾಂಗ್ರೆಸ್ ಹಾದಿ ಹಿಡಿಯುವ ಎಲ್ಲ ಸುಳಿವನ್ನೂ ನೀಡಿದೆ ಎಂದೇ ವಿಶ್ಲೇಷಿಸಲಾಗಿದೆ. ಆದಾಗ್ಯೂ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅವರಿನ್ನೂ ದೃಢವಾದ ಹೇಳಿಕೆ ನೀಡಿಲ್ಲ.

ಜೆಡಿಎಸ್ ಸಭೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?

ಯಶವಂತಪುರ ಕ್ಷೇತ್ರದ ಜೆಡಿಎಸ್​ ಪ್ರಮುಖರ ಸಭೆ ಕರೆದ ವಿಚಾರವಾಗಿ ಬೆಂಗಳೂರಿನಲ್ಲಿ ಹೆಚ್​​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಪ್ರಮುಖ ಕಾರ್ಯಕರ್ತರನ್ನು ತಮ್ಮ ಕಡೆ ಸೆಳೆಯಲು ಕಾಂಗ್ರೆಸ್​ನವರು ಆರಂಭಿಸಿದ್ದಾರೆ. ಅನುಕೂಲಸಿಂಧು ರಾಜಕಾರಣ ಮಾಡಲು ಆಪರೇಷನ್ ಮಾಡಬೇಕು ಎಂದು ತಮ್ಮ ಕಾರ್ಯಕರ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಈ ಕ್ಷೇತ್ರದ ಜನರು ಜೆಡಿಎಸ್ ಹಾಗೂ ದೇವೇಗೌಡರ ಪರ ಇದ್ದಾರೆ. ಯಶವಂತಪುರ ಕ್ಷೇತ್ರದಲ್ಲಿ ಕೆಲ‌ ಬೆಳೆವಣಿಗೆ ನಡೆಯುತ್ತಿದೆ. ಯಶವಂತಪುರ ಜನರು ಅತ್ಯಂತ ಸಂಕಷ್ಟದಲ್ಲಿ ಪಕ್ಷವನ್ನು ಉಳಿಸಿದ್ದಾರೆ. ಮುಂದಿನ ಚುನಾವಣೆಗೆ ಸನ್ನದ್ಧರಾಗಲು ಕರೆ ನೀಡಲು ಬಂದಿದ್ದೇನೆ. ವಿಧಾನಸಭೆ, ಜಿ.ಪಂ, ತಾ.ಪಂ, ಚುನಾವಣೆಗೆ ಸನ್ನದ್ಧರಾಗಲು ಕರೆ ನೀಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.

ಜೆಡಿಎಸ್​​​ನವರು ಕಾಂಗ್ರೆಸ್ ಸೇರಲ್ಲ; ಕುಮಾರಸ್ವಾಮಿ

ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಸೆಳೆಯುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ತಿಳುವಳಿಕೆ ಮಟ್ಟಿಗೆ ನನ್ನ ಪಕ್ಷದ ಶಾಸಕರು ಪಕ್ಷ ಬಿಡುವ ಸಾಧ್ಯತೆ ಇಲ್ಲ. ಕಾಂಗ್ರೆಸ್ ನವರು ಯಾಕೆ ಈ ರೀತಿಯ ಚರ್ಚೆ ಹುಟ್ಟುಹಾಕಿದ್ದಾರೆ ಎಂದರೆ, ಕಾಂಗ್ರೆಸ್​​ನ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ. ಬಿಜೆಪಿ, ಜೆಡಿಎಸ್ ನಿಂದ ಬರಲಿದ್ದಾರೆ ಎಂದು ಹೇಳುತ್ತಾ ಇದ್ದಾರೆ. ಕಾಂಗ್ರೆಸ್ ಶಾಸಕರು ಪಕ್ಷ ಬಿಡುವುದನ್ನು ತಡೆಯಲು ಹಾಗೆ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನು ಕಾಂಗ್ರೆಸ್ ಬಿಡುವಾಗ ಬಿಜೆಪಿಗೆ ಅಗತ್ಯ ಇತ್ತು, ಕಾಂಗ್ರೆಸ್​ಗೆ ಅಂತಹ ಅಗತ್ಯವಿಲ್ಲ; ಸೋಮಶೇಖರ್ ಹೇಳಿಕೆಯ ಮರ್ಮವೇನು?

ಅಗತ್ಯ ಸಂಖ್ಯೆಯ ಶಾಸಕರು ಸಿಕ್ಕರೆ ಜೆಡಿಎಸ್ ವಿಲೀನಗೊಳಿಸಲು ಕಾಂಗ್ರೆಸ್ ಪ್ಲ್ಯಾನ್

ಬಿಜೆಪಿಗೆ ಮಾತ್ರವಲ್ಲ, ಜೆಡಿಎಸ್​​ಗೂ ಮರ್ಮಾಘಾತ ನೀಡಲು ಕಾಂಗ್ರೆಸ್ ಯೋಜನೆ ಹಾಕಿಕೊಡಿದೆ ಎನ್ನಲಾಗಿದೆ. ಜೆಡಿಎಸ್​ನ ಶಾಸಕರ ಸೆಳೆಯುವ ಪ್ರಯತ್ನ ಮುಂದುವರಿದಿದ್ದು, ಜೆಡಿಎಸ್​​ನ ಹಲವು ಶಾಸಕರು ಕಾಂಗ್ರೆಸ್ ಕಡೆ ಮುಖ ಮಾಡಲು ತೆರೆ ಮರೆಯಲ್ಲಿ ಸಿದ್ದತೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದಿರುವ ಕಾಂಗ್ರೆಸ್ ಶಾಸಕರು, ಅಗತ್ಯ ಸಂಖ್ಯೆಯ ಶಾಸಕರು ಸಿಕ್ಕಿದರೆ ತಾಂತ್ರಿಕವಾಗಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ. ಅಗತ್ಯ ಸಂಖ್ಯೆಯ ಶಾಸಕರು ಸಿಕ್ಕಿದರೆ ಕಾಂಗ್ರೆಸ್ ಜೊತೆಗೆ ಪಕ್ಷವನ್ನೇ ವಿಲೀನಗೊಳಿಸುವ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗಿದೆ. ಕಾಂಗ್ರೆಸ್ ಶಾಸಕರ ವಲಯದಲ್ಲಿಯೇ ಈ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದೆ. ಆದರೆ ಪಕ್ಷ ಸೇರ್ಪಡೆ ಸಮಯದ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಇನ್ನೂ ಸ್ಪಷ್ಟತೆ ದೊರೆತಿಲ್ಲ ಎನ್ನಲಾಗಿದೆ. ಹಳೆ ಮೈಸೂರು ಭಾಗದ ಶಾಸಕರೊಬ್ಬರ ನೇತೃತ್ವದಲ್ಲಿ ಮಾತುಕತೆ ನಡೆದಿದೆ. ಈ ಮಧ್ಯೆ, ತಾವು ಹೇಳುವ ತನಕ ಯಾವುದೇ ನಿರ್ಧಾರ ಬೇಡ. ಸೂಕ್ತ ಸಮಯ ಬರುವವರೆಗೆ ಕಾಯೋಣ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ ಎನ್ನಲಾಗಿದೆ.

ರಾಜಕೀಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:06 pm, Tue, 22 August 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ