Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರಾ ಮೋದಿ? ಹೀಗಂದ್ರು ಅಣ್ಣಾಮಲೈ

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.

2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರಾ ಮೋದಿ? ಹೀಗಂದ್ರು ಅಣ್ಣಾಮಲೈ
ನರೇಂದ್ರ ಮೋದಿ
Follow us
Ganapathi Sharma
|

Updated on: Jan 28, 2023 | 12:50 PM

ಚೆನ್ನೈ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಹೇಳಿದ್ದಾರೆ. ತಮಿಳುನಾಡಿನ ರಾಮನಾಥಪುರಂ ಕ್ಷೇತ್ರದಿಂದ ಮೋದಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹ ಇತ್ತೀಚೆಗೆ ಹರಿದಾಡಿತ್ತು. ಇದರ ಅರ್ಥ ಮೋದಿಯವರು ಪ್ರಾದೇಶಿಕ ಅಡೆತಡೆಗಳನ್ನು ಮೀರಿದ ನಾಯಕ ಎಂದು ಅಣ್ಣಾಮಲೈ ಬಣ್ಣಿಸಿದ್ದಾರೆ.

ಮೋದಿ ಜೀ ಇಲ್ಲಿನವರೇ. ಕಳೆದ ಒಂದು ತಿಂಗಳಿನಲ್ಲಿ ನೀವು ತಮಿಳುನಾಡಿನ ಸುದ್ದಿಗಳನ್ನು ಗಮನಿಸಿದರೆ, ಮೋದಿ ಅವರು ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿಯನ್ನು ಯಾರೋ ಹರಿಯಬಿಟ್ಟಿರುವುದು ಗಮನಕ್ಕೆ ಬರಲಿದೆ. ಎಲ್ಲೇ ಹೋದರೂ, ಮೋದಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರೆಯೇ ಎಂಬುದಾಗಿ ಜನ ಪ್ರಶ್ನಿಸುತ್ತಿದ್ದಾರೆ ಎಂದು ‘ಎಎನ್​ಐ’ ಸುದ್ದಿ ಸಂಸ್ಥೆಗೆ ಅಣ್ಣಾಮಲೈ ತಿಳಿಸಿದ್ದಾರೆ.

ಇದನ್ನೂ ಓದಿ: Karnataka News Live Updates: ಯುವಕರು ಎಲ್ಲ ಕ್ಷೇತ್ರಗಳಲ್ಲಿ ಧೈರ್ಯದಿಂದ ಮುನ್ನುಗ್ಗಬೇಕು: ಅಮಿತ ಶಾ

2014ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ವಾರಾಣಸಿ ಮತ್ತು ಗುಜರಾತ್​​ನ ವಡೋದರದಿಂದ ಮೋದಿ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಅವರು ವಾರಾಣಸಿಯನ್ನು ಉಳಿಸಿಕೊಂಡಿದ್ದರು. 2019ರಲ್ಲಿಯೂ ವಾರಾಣಸಿಯಿಂದ ಮರು ಆಯ್ಕೆಯಾಗಿದ್ದರು.

ರಾಮನಾಥಪುರದಿಂದ ಮೋದಿ ಚುನಾವಣೆ ಸ್ಪರ್ಧಿಸಲಿದ್ದಾರೆ ಎಂಬುದು ಊಹಾಪೋಹವಷ್ಟೆ. ಜನ ಈ ವದಂತಿಯನ್ನು ಹರಿಯಬಿಟ್ಟಿದ್ದಾರೆ. ಅವರು ಮಾತನಾಡುತ್ತಿದ್ದಾರೆ. ಮೋದಿ ಅವರು ಇಲ್ಲಿಂದ ಸ್ಪರ್ಧಿಸಬೇಕೆಂದು ಜನರು ಬಯಸುತ್ತಿದ್ದಾರೆ. ಮೋದಿ ಅವರನ್ನು ಹೊರಗಿನವರಲ್ಲ, ಇಲ್ಲಿನವರೇ ಎಂಬಂತೆ ಜನ ಪರಿಗಣಿಸಿರುವುದು ಇದರಿಂದ ಸ್ಪಷ್ಟವಾಗಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್