ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಆರ್ವಿ ದೇಶಪಾಂಡೆ (rv deshpande) ಅತ್ಯಾಪ್ತ ಆಗಿರುವ ಎಸ್ ಎಲ್ ಘೋಟ್ನೇಕರ್ (S.L. Ghotnekar) ಇಂದು(ಫೆ. 19) ಜೆಡಿಎಸ್ ಸೇರ್ಪಡೆ ಆಗಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸೇರ್ಪಡೆಯಾಗಿರುವ S.L.ಘೋಟ್ನೇಕರ್ ಹಳಿಯಾಳ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ರೈತರು, ಜನರು ಹೇಳಿದ ಮೇಲೆ ಜೆಡಿಎಸ್ ಪಕ್ಷ ಸೇರ್ಪಡೆಯಾದೆ. ಹೆಚ್.ಡಿ.ಕುಮಾರಸ್ವಾಮಿ ನುಡಿದಂತೆ ನಡೆಯುತ್ತಾರೆ. ನಮ್ಮ ಪಕ್ಷ ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ. ನಮ್ಮ ಮೇಲೆ ಕರುಣೆ ಇರಲಿ ಎಂದು ಕೇಳುತ್ತೇನೆ ಎಂದು ಹೇಳಿದರು. 40 ವರ್ಷದಿಂದ ದೇಶಪಾಂಡೆ ಜೊತೆ ಕೆಲಸ ಮಾಡಿದ್ದೇನೆ. ನನಗೆ ಮುಂದಿನ ಭಾರೀ ಅವಕಾಶ ಕೊಡಿಸುತ್ತೇನೆ ಎಂದು ಹೇಳಿದ್ರು ಎಂದು ಆರ್.ವಿ.ದೇಶಪಾಂಡೆ ವಿರುದ್ಧ ಘೋಟ್ನೇಕರ್ ಅಸಮಾಧಾನ ಹೊರಹಾಕಿದರು.
ಇನ್ನು ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ ಹಾಗೂ ಬಂಗಾರಪೇಟೆ ಕ್ಷೇತ್ರದ ಹರೀಶ್ ಗೌಡ ಕೂಡ ಜೆಡಿಎಸ್ ಸೇರ್ಪಡೆ ಆಗಿದ್ದಾರೆ. ಬೆಂಗಳೂರಿನ ಜೆಪಿ ಭವನದ ಜೆಡಿಎಸ್ ಕಚೇರಿಯಲ್ಲಿ ಇಬ್ಬರು ನಾಯಕರಿಗೆ ಜೆಡಿಎಸ್ ಶಾಲು ಹೊದಿಸಿವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಪಕ್ಷಕ್ಕೆ ಬರಮಾಡಿಕೊಂಡರು.
ಇದನ್ನೂ ಓದಿ: ಚಿಕ್ಕಮಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಚಿಕ್ಕಮಗಳೂರು ಲಿಂಗಾಯತ ಮುಖಂಡ; ಸಿಟಿ ರವಿಗೆ ತಲೆ ಬಿಸಿ
ಜೆಡಿಎಸ್ ಪಕ್ಷ ಸೇರ್ಪಡೆ ನಂತರ ಡಿವಿ ಹರೀಶ್ ಮಾತನಾಡಿ, ಮಹಾಶಿವರಾತ್ರಿ ಹಬ್ಬದ ಅರ್ಥಪೂರ್ಣವಾದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆ ಯಾಗುತ್ತಿದ್ದೇನೆ. ಈ ಮೂಲಕ ಜೆಡಿಎಸ್ ಪಕ್ಷ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಹಲವಾರು ಹುದ್ದೆಗಳಲ್ಲಿ ಕಾರ್ಯ ನಿರ್ವಾಹಣೆ ಮಾಡಿದ್ದೇನೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಲು ಬಿಜೆಪಿ ಸರ್ಕಾರ ಕಾರಣ. ಧರ್ಮದ ಧರ್ಮಗಳ ನಡುವೆ ತಂದಿಕ್ಕುವ ಕೆಲಸ ಮಾಡುತ್ತಿದ್ದಾರೆ. ಜನಪರ ಸರ್ಕಾರ ಬರಬೇಕಾದ್ರೆ ಜೆಡಿಎಸ್ ಪಕ್ಷ ಮಾತ್ರ ಎಂದು ಹೇಳಿದರು.
ರೈತರ ಸಾಲಮನ್ನಾ ಮಾಡಿದ್ದು ಕುಮಾರಸ್ವಾಮಿ. ನಾನು ಯಾವುದೇ ಕಂಡಿಷನ್ ಇಟ್ಟು ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ಕುಮಾರಸ್ವಾಮಿ ನಾಯಕತ್ವದಲ್ಲಿ ನಂಬಿಕೆ ಇಟ್ಟು ಪಕ್ಷ ಸೇರ್ಪಡೆ ಯಾಗುತ್ತಿದ್ದೇನೆ. ಧರ್ಮದ ಧರ್ಮದ ನಡುವೆ ಗಲಾಟೆ ಮಾಡಿಸುವ ಸರ್ಕಾರಗಳು ಆಡಳಿತ ನಡೆಸುತ್ತಿದ್ದಾವೆ. ಪಂಚರತ್ನ ಕಾರ್ಯಕ್ರಮದ ಉದ್ದೇಶವನ್ನು ನೋಡಿ ಪಕ್ಷ ಸೇರುತ್ತಿದ್ದೇನೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಬೇಕು. ರಾಷ್ಟ್ರೀಯ ಪಕ್ಷಗಳು ರಾಜ್ಯ ಬಿಟ್ಟುಹೋಗುವಂತೆ ಮಾಡಬೇಕು. ಕೋಲಾರ ಜಿಲ್ಲೆಯ ಎಲ್ಲಾ ಅಭಿವೃದ್ಧಿಗಳನ್ನು ಗೆಲ್ಲಿಸಲು ಪ್ರಾಮಾಣಿಕ ಕೆಲಸ ಮಾಡುತ್ತೇವೆ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷದಲ್ಲಿ ಇರುವ ಅಸುರರ ಪಟ್ಟಿ ಬಹಳ ದೊಡ್ಡದಿದೆ: ಸಿಎಂ ಬೊಮ್ಮಾಯಿ
ಪಕ್ಷ ಸೇರ್ಪಡೆ ಬಳಿಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ನಮ್ಮ ಪಕ್ಷ ಸ್ವತಃ ಬಲದಿಂದ ಅಧಿಕಾರಕ್ಕೆ ಬರಬೇಕು. ಕೊನೆಯ ಹಂತದಲ್ಲಿ ಮೈಸೂರು, ಮಂಡ್ಯ ಭಾಗದಲ್ಲಿ ಕಾರ್ಯಕ್ರಮ ಮಾಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ 6 ಸ್ಥಾನಗಳಲ್ಲಿ 4 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಘೋಟ್ನೇಕರ್ ಕೂಡ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ಭವಿಷ್ಯದ ಬಗ್ಗೆ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.
ಹಾಲರವಿ ಜೆಡಿಎಸ್ ಸೇರ್ಪಡೆ ಬಗ್ಗೆ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. ಹರೀಶ್ ಕ್ಷೇತ್ರದಲ್ಲಿ ಮಾಡಿರುವ ಕೆಲಸದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಮುಳಬಾಗಿಲಿನಿಂದ ಪಂಚರತ್ನ ಆರಂಭಿ 70 ಕ್ಷೇತ್ರಗಳನ್ನು ಮುಗಿಸಿದ್ದೇನೆ. ಕೋಲಾರದ ಮುಳಬಾಗಿಲಿನಿಂದ ಪಂಚರತ್ನ ರಥಯಾತ್ರೆ ಆರಂಭಿಸಿದ್ದೆ. ನವಲಗುಂದ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಬಹಳ ಪ್ರತಿಕ್ರಿಯೆ ಸಿಕ್ಕಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:06 pm, Sun, 19 February 23