ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ; ಎಸ್​ಎ ರಾಮದಾಸ್

ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಕೈ ತಪ್ಪಿದ ಹಿನ್ನಲೆ ಲೋಕಸಭೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಇದೀಗ ಎಲ್ಲಾ ಊಹಾಪೋಹಗಳಿಗೆ ಮಾಜಿ ಸಚಿವ ಎಸ್​ಎ ರಾಮದಾಸ್ ಸ್ಪಷ್ಟನೆ ನೀಡಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಲೋಕಸಭೆಗಳಿಗೆ ನನ್ನನ್ನು ಕ್ಲಸ್ಟರ್ ಮಾಡಿದ್ದಾರೆ. ನಾಲ್ಕು ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಮಾತ್ರ ನನ್ನದು ಎಂದರು.

ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ; ಎಸ್​ಎ ರಾಮದಾಸ್
ಎಸ್​ ಎ ರಾಮದಾಸ್​
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 01, 2024 | 7:58 PM

ಮೈಸೂರು, ಫೆ.01: ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಎಸ್​.ಎ.ರಾಮದಾಸ್​(SA Ramadas) ಹೇಳಿದ್ದಾರೆ. ಮೈಸೂರಿ(Mysore)ನಲ್ಲಿ ಮಾತನಾಡಿದ ಅವರು ‘ಈ ಬಗ್ಗೆ ಪಕ್ಷದ ಹೈಕಮಾಂಡ್​​ಗೆ ತಿಳಿಸಿದ್ದೇನೆ. ನಮ್ಮ ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ಯಾವತ್ತೂ ಹೋಗಿಲ್ಲ. 4 ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆ ಇದೆ. ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಕೈ ತಪ್ಪಿದ ಹಿನ್ನಲೆ ಲೋಕಸಭೆಯಲ್ಲಿ ಹಾಲಿ ಸಂಸದ ಪ್ರತಾಪ್​ ಸಿಂಹ ಅವರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಇದೀಗ ಎಲ್ಲಾ ಊಹಾಪೋಹಗಳಿಗೆ ಮಾಜಿ ಸಚಿವ ಎಸ್​ಎ ರಾಮದಾಸ್ ಸ್ಪಷ್ಟನೆ ನೀಡಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಲೋಕಸಭೆಗಳಿಗೆ ನನ್ನನ್ನು ಕ್ಲಸ್ಟರ್ ಮಾಡಿದ್ದಾರೆ. ನಾಲ್ಕು ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಮಾತ್ರ ನನ್ನದು, ಈ ಬಾರಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವ ಗುರಿ ಹೊಂದಿದೆ. ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ವೇಳೆ ಎಲ್ಲಾ ಅಂಶವನ್ನು ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ:ಲೋಕಸಭಾ ಚುನಾವಣೆ ನಂತರ ಸಿದ್ದರಾಮಯ್ಯ ಸರ್ಕಾರ ಉರುಳದಿರಲು ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ಮಾಡುತ್ತಿದ್ದಾರೆ: ಆರ್ ಅಶೋಕ, ಶಾಸಕ

ಇದೇ ವೇಳೆ ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ ಎಂಬ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿಕೆ ವಿಚಾರ ‘ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಎಐಸಿಸಿ ಹಾಗೂ ಕೆಪಿಸಿಸಿ ಎರಡೂ ದುರ್ಬಲವಾಗಿವೆ. ಹಾಗಾಗಿ ಸಂಸದ ಡಿ.ಕೆ.ಸುರೇಶ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಇದೇ ಮಾತನ್ನು ರಾಹುಲ್ ಗಾಂಧಿಯಿಂದ ಹೇಳಿಸಲಿ ನೋಡೋಣ. ಎಐಸಿಸಿ, ಕೆಪಿಸಿಸಿ ಕೂಡಲೇ ಡಿ.ಕೆ.ಸುರೇಶ್​ಗೆ ನೋಟಿಸ್ ನೀಡಬೇಕು. ಒಂದೆಡೆ ಯಾತ್ರೆ ಮೂಲಕ ರಾಹುಲ್ ಭಾರತ್ ಜೋಡೋ ಅಂತಾರೆ, ಮತ್ತೊಂದೆಡೆ ಕಾಂಗ್ರೆಸ್ ಸಂಸದ ದೇಶ ಇಬ್ಭಾಗ ಬಗ್ಗೆ ಮಾತಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಹುಲ್ ಗಾಂಧಿ ಚೀನಾ ಜೊತೆ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಹಿಂದೆ ಚೀನಾ ಭೇಟಿ ವೇಳೆ ರಾಹುಲ್​ ಗಾಂಧಿ ತಮ್ಮ ಸಂಸ್ಥೆಗೆ ಸಂಬಂಧಿಸಿದ ವಿಚಾರದಲ್ಲಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಯಾರಿಗೂ ಗೊತ್ತಾಗದಂತೆ ವಿಮಾನದಿಂದ ಮತ್ತೊಂದು ವಿಮಾನಕ್ಕೆ ರಹಸ್ಯವಾಗಿ ತೆರಳಿ ಒಪ್ಪಂದಗಳಿಗೆ ರಾಹುಲ್ ಗಾಂಧಿ ಸಹಿ ಹಾಕಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್