ಮೈಸೂರು, ಫೆ.01: ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್(SA Ramadas) ಹೇಳಿದ್ದಾರೆ. ಮೈಸೂರಿ(Mysore)ನಲ್ಲಿ ಮಾತನಾಡಿದ ಅವರು ‘ಈ ಬಗ್ಗೆ ಪಕ್ಷದ ಹೈಕಮಾಂಡ್ಗೆ ತಿಳಿಸಿದ್ದೇನೆ. ನಮ್ಮ ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ಯಾವತ್ತೂ ಹೋಗಿಲ್ಲ. 4 ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆ ಇದೆ. ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧ ಎಂದರು.
ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನಲೆ ಲೋಕಸಭೆಯಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಅವರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಇದೀಗ ಎಲ್ಲಾ ಊಹಾಪೋಹಗಳಿಗೆ ಮಾಜಿ ಸಚಿವ ಎಸ್ಎ ರಾಮದಾಸ್ ಸ್ಪಷ್ಟನೆ ನೀಡಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಲೋಕಸಭೆಗಳಿಗೆ ನನ್ನನ್ನು ಕ್ಲಸ್ಟರ್ ಮಾಡಿದ್ದಾರೆ. ನಾಲ್ಕು ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಮಾತ್ರ ನನ್ನದು, ಈ ಬಾರಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವ ಗುರಿ ಹೊಂದಿದೆ. ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ವೇಳೆ ಎಲ್ಲಾ ಅಂಶವನ್ನು ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ ಎಂಬ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿಕೆ ವಿಚಾರ ‘ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಎಐಸಿಸಿ ಹಾಗೂ ಕೆಪಿಸಿಸಿ ಎರಡೂ ದುರ್ಬಲವಾಗಿವೆ. ಹಾಗಾಗಿ ಸಂಸದ ಡಿ.ಕೆ.ಸುರೇಶ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಇದೇ ಮಾತನ್ನು ರಾಹುಲ್ ಗಾಂಧಿಯಿಂದ ಹೇಳಿಸಲಿ ನೋಡೋಣ. ಎಐಸಿಸಿ, ಕೆಪಿಸಿಸಿ ಕೂಡಲೇ ಡಿ.ಕೆ.ಸುರೇಶ್ಗೆ ನೋಟಿಸ್ ನೀಡಬೇಕು. ಒಂದೆಡೆ ಯಾತ್ರೆ ಮೂಲಕ ರಾಹುಲ್ ಭಾರತ್ ಜೋಡೋ ಅಂತಾರೆ,
ಮತ್ತೊಂದೆಡೆ ಕಾಂಗ್ರೆಸ್ ಸಂಸದ ದೇಶ ಇಬ್ಭಾಗ ಬಗ್ಗೆ ಮಾತಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಹುಲ್ ಗಾಂಧಿ ಚೀನಾ ಜೊತೆ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಹಿಂದೆ ಚೀನಾ ಭೇಟಿ ವೇಳೆ ರಾಹುಲ್ ಗಾಂಧಿ ತಮ್ಮ ಸಂಸ್ಥೆಗೆ ಸಂಬಂಧಿಸಿದ ವಿಚಾರದಲ್ಲಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಯಾರಿಗೂ ಗೊತ್ತಾಗದಂತೆ ವಿಮಾನದಿಂದ ಮತ್ತೊಂದು ವಿಮಾನಕ್ಕೆ ರಹಸ್ಯವಾಗಿ ತೆರಳಿ ಒಪ್ಪಂದಗಳಿಗೆ ರಾಹುಲ್ ಗಾಂಧಿ ಸಹಿ ಹಾಕಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ