ಪ್ರಿಯಾಂಕ್ ಖರ್ಗೆ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ, ರಾಜೀನಾಮೆ ಯಾಕೆ ಕೊಡಬೇಕು: ಸಿಎಂ ಪ್ರಶ್ನೆ

ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರದ ಬಗ್ಗೆ ಬಿಜೆಪಿ ಆರೋಪ ಮಾಡುತ್ತಿದೆ. ಖರ್ಗೆ ಅವರು ತಮ್ಮ ಪಾತ್ರವಿಲ್ಲ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಯಾವುದೇ ಸಾಕ್ಷಿ ಇಲ್ಲದೆ ರಾಜೀನಾಮೆಗೆ ಒತ್ತಾಯಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ, ರಾಜೀನಾಮೆ ಯಾಕೆ ಕೊಡಬೇಕು: ಸಿಎಂ ಪ್ರಶ್ನೆ
ಪ್ರಿಯಾಂಕ್ ಖರ್ಗೆ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ, ರಾಜೀನಾಮೆ ಯಾಕೆ ಕೊಡಬೇಕು: ಸಿಎಂ ಪ್ರಶ್ನೆ
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on:Jan 01, 2025 | 7:12 PM

ಬೆಂಗಳೂರು, ಜನವರಿ 01: ಈಶ್ವರಪ್ಪ ಪ್ರಕರಣದಲ್ಲಿ ಡೆತ್ ನೋಟ್​ನಲ್ಲಿ ಅವರ ಹೆಸರು ಇತ್ತು. ಸಚಿನ್ ಆತ್ಮಹತ್ಯೆ ಕೇಸ್​ನಲ್ಲಿ ಪ್ರಿಯಾಂಕ್ ಖರ್ಗೆ​ ಹೆಸರು ಎಲ್ಲೂ ಇಲ್ಲ. ಯಾವುದೇ ಸಾಕ್ಷಿ ಇಲ್ಲ. ಹಾಗಾಗಿ ರಾಜೀನಾಮೆ ಯಾಕೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಗುಡುಗಿದ್ದಾರೆ. ಪ್ರಿಯಾಂಕ್ ‌ಖರ್ಗೆ ರಾಜೀನಾಮೆಗೆ ಒತ್ತಾಯ ವಿಚಾರವಾಗಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ದಾಖಲೆ ಇಟ್ಟುಕೊಂಡು ಹೋರಾಟ ಮಾಡಬೇಕಲ್ವಾ? ಡೆತ್​ನೋಟ್​ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಇದೆಯಾ? ಡೆತ್​ನೋಟ್​ನಲ್ಲಿ ಅವರ ಹೆಸರು ಇಲ್ಲ, ಅವರದ್ದೇನು ಪಾತ್ರ ಇಲ್ಲ ಯಾವುದೇ ಸಾಕ್ಷಿ ಇಲ್ಲ, ರಾಜೀನಾಮೆ ಯಾಕೆ ಕೊಡಬೇಕು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಚಿನ್ ಪ್ರಕರಣದಲ್ಲಿ ಎಲ್ಲೂ ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖವಾಗಿಲ್ಲ, ರಾಜೀನಾಮೆ ಯಾಕೆ ನೀಡಬೇಕು? ಸಿದ್ದರಾಮಯ್ಯ

ರಾಜಕೀಯ ದ್ವೇಷದಿಂದ ಪ್ರಿಯಾಂಕ್ ವಿರುದ್ಧ ಆರೋಪ ಮಾಡಲಾಗುತ್ತಿದೆ. ರಾಜೀನಾಮೆ ಪಡೆಯಲು ಏನಾದ್ರೂ ಸಾಕ್ಷಿ ಇರಬೇಕಲ್ವಾ? ಪ್ರಿಯಾಂಕ್ ಖರ್ಗೆ​ ಯಾವುದೇ ತನಿಖೆಗೆ ಸಿದ್ಧ ಅಂತಾ ಹೇಳಿದ್ದಾರೆ. ನಾವೀಗ ದೂರು ದಾಖಲಿಸಿಕೊಂಡು ಸಿಐಡಿ ತನಿಖೆಗೆ ಕೊಟ್ಟಿದ್ದೇವೆ. ವರದಿ ಬರಲಿ, ಅದರಲ್ಲಿ ತಪ್ಪು ಮಾಡಿದ್ದಾರೆ ಎಂದು ಗೊತ್ತಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್

ಸಚಿನ್ ಆತ್ಮಹತ್ಯೆ ಕೇಸ್​ ಸಿಬಿಐಗೆ ವಹಿಸುವಂತೆ ಬಿಜೆಪಿ ಒತ್ತಾಯ ವಿಚಾರವಾಗಿ ಮಾತನಾಡಿದ್ದು, ಬಿಜೆಪಿಯವರು ಯಾವ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದರು. ಬಿಜೆಪಿಯವರಿಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇಲ್ವಾ? ಅವರು ಅಧಿಕಾರದಲ್ಲಿದ್ದಾಗ ಒಂದು ಕೇಸ್​ ಆದರೂ ಸಿಬಿಐಗೆ ಕೊಟ್ರಾ? ಅವರಿಗೆ ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ಮಾಡಿದ್ದಾರೆ.

ತನಿಖಾ ವರದಿ ಏನು ಬರುತ್ತೋ ಅದರಂತೆ ಕ್ರಮ: ಡಾ.ಜಿ.ಪರಮೇಶ್ವರ್

ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಪ್ರತಿಕ್ರಿಯಿಸಿದ್ದು, ಪ್ರಿಯಾಂಕ್ ಖರ್ಗೆ ಅವರೇ ತಮ್ಮ ಪಾತ್ರ ಇಲ್ಲ ಎಂದಿದ್ದಾರೆ. ತನಿಖೆ ನಡೆಯುತ್ತಿದೆ, ವರದಿ ಏನು ಬರುತ್ತೆ ನೋಡೋಣ. ತನಿಖಾ ವರದಿ ಏನು ಬರುತ್ತೋ ಅದರಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:10 pm, Wed, 1 January 25

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ