Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್‌ ವಂಚಿತರ ಜೊತೆ ಸಭೆ… ಕುತೂಹಲ ಮೂಡಿಸಿದ ಈಶ್ವರಪ್ಪ ಮುಂದಿನ ನಡೆ!

ತಮ್ಮ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ನೀಡದಿದ್ದಕ್ಕೆ ಬಿಜೆಪಿ ಹಿರಿಯ ನಾಯಕ ಕೆ.ಎಸ್​.ಈಶ್ವರಪ್ಪ ಅಸಮಾಧಾನಗೊಂಡಿದ್ದಾರೆ. ಅಲ್ಲದೇ ತಮ್ಮ ಬೆಂಬಲಿಗರ ಸಭೆ ಕರೆದಿದ್ದು, ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದಾರೆ. ಇದರ ಮಧ್ಯೆ ಇತರೆ ಟಿಕೆಟ್ ವಂಚಿತ ನಾಯಕರ ಜೊತೆ ಸಭೆ ಮಾಡಿ ಚರ್ಚೆ ನಡೆಸಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಟಿಕೆಟ್‌ ವಂಚಿತರ ಜೊತೆ ಸಭೆ... ಕುತೂಹಲ ಮೂಡಿಸಿದ ಈಶ್ವರಪ್ಪ ಮುಂದಿನ ನಡೆ!
ಈಶ್ವರಪ್ಪ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 14, 2024 | 4:46 PM

ಬೆಂಗಳೂರು, (ಮಾರ್ಚ್ 14): ತಮ್ಮ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ (Haveri Loksabha Ticket) ನೀಡದಿದ್ದಕ್ಕೆ ಬಿಜೆಪಿ ಹಿರಿಯ ನಾಯಕ ಕೆ.ಎಸ್​.ಈಶ್ವರಪ್ಪ(KS Eshwarappa)  ಅಸಮಾಧಾನಗೊಂಡಿದ್ದಾರೆ. ಅದರಲ್ಲೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ವಿರುದ್ಧ ಬಹಿರಂಗವಾಗಯೇ ಗುಡುಗಿದ್ದಾರೆ. ಇನ್ನು ಇದರ ಮಧ್ಯೆ ಟಿಕೆಟ್ ವಂಚಿತ ನಾಯಕರಾದ ಡಿವಿ ಸದಾನಂದಗೌಡ, ಸಿಟಿ ರವಿ ಅವರು ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಚರ್ಚೆಗೆ ಗ್ರಾಸವಾಗಿದೆ. ಇನ್ನು ಕೆಎಸ್​ ಈಶ್ವರಪ್ಪನವರು ಮುಂದಿನ ನಡೆ ಏನು ಎನ್ನುವುದು ಕುತೂಹಲ ಮೂಡಿಸಿದೆ.

ಟಿಕೆಟ್ ವಂಚಿತ ನಾಯಕರಾದ ಸಿಟಿ ರವಿ ಮತ್ತು ಸದಾನಂದಗೌಡ ಅವರು ಇಂದು(ಮಾರ್ಚ್ 14) ಬೆಂಗಳೂರಿನಲ್ಲಿ  ರೆಬೆಲ್ ಆಗಿರುವ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ಈಗ ಅದೆಲ್ಲಾ ಮುಗಿದ ಕಥೆ, ಮುಂದೆ ಏನಾಗಬೇಕು ನೋಡೋಣ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಕೈಬಲಪಡಿಸೋಣ. ಈಶ್ವರಪ್ಪ ಜತೆಗಿನ ಮಾತುಕತೆಯನ್ನ ವರಿಷ್ಠರ ಗಮನಕ್ಕೆ ತರುತ್ತೇನೆ. ಈಶ್ವರಪ್ಪರನ್ನು ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದರು.

ಇದನ್ನೂ ಓದಿ: KS Eshwarappa vs BY Raghavendra: ಶೀತಲಸಮರ ಶುರು: ಬಿಎಸ್​​ವೈ ಪುತ್ರ ವಿರುದ್ಧ ಸ್ವತಃ ಈಶ್ವರಪ್ಪ ಸ್ಪರ್ಧೆಗೆ ಮಾಸ್ಟರ್ ಪ್ಲ್ಯಾನ್

ಇನ್ನು ಇದೇ ವೇಳೆ ಸದಾನಂದಗೌಡ ಮಾತನಾಡಿ, ಈಶ್ವರಪ್ಪನವರು ಬಹಳ ನೊಂದಿದ್ದಾರೆ. ನಾಳೆ ಶಿವಮೊಗ್ಗದಲ್ಲಿ ಕಾರ್ಯಕರ್ತರ ಜೊತೆ ಸಭೆ ಮಾಡುವುದಾಗಿ ಈಶ್ವರಪ್ಪ ಹೇಳಿದ್ದಾರೆ. ನಾವ್ಯಾರೂ ಸಮಾನ ಮನಸ್ಕರಲ್ಲ ಎಂದು ಸ್ಪಷ್ಟಪಡಿಸಿದರು.

ಈಶ್ವರಪ್ಪ ಪುತ್ರನಿಗೆ ಎಂಎಲ್​ಸಿ ಸ್ಥಾನ

ಹಾವೇರಿ ಲೋಕಸಭಾ ಕ್ಷೇತ್ರದಿಂದ (Haveri Lok Sabha constituency) ಪುತ್ರ ಕೆ.ಇ. ಕಾಂತೇಶ್‌ಗೆ (KE Kantesh) ಟಿಕೆಟ್‌ ಮಿಸ್‌ ಆಗಿದ್ದರಿಂದ ಈಗ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ (KS Eshwarappa) ಕೆಂಡವಾಗಿದ್ದಾರೆ. ಪಕ್ಷದ ವರಿಷ್ಠರ ನಿರ್ಧಾರ ಹಾಗೂ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ. ಈಗ ಅವರ ಶಮನ ಕಾರ್ಯಕ್ಕೆ ಬಿಜೆಪಿ ಮುಂದಾಗುತ್ತಿದೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ, ಕಾಂತೇಶ್‌ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡುವ ಸುಳಿವನ್ನು ನೀಡಿದ್ದಾರೆ.

ಟಿಕೆಟ್ ಕೊಡುವ ವಿಚಾರದಲ್ಲಿ ಬಿ.ಎಸ್.‌ ಯಡಿಯೂರಪ್ಪ ಅವರು ನುಡಿದಂತೆ ನಡೆದುಕೊಳ್ಳಲಿಲ್ಲ ಎಂದು ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್‌ವೈ, ಈಶ್ವರಪ್ಪ ಅವರ ಜತೆ ಮಾತನಾಡುತ್ತೇನೆ. ಅಲ್ಲದೆ, ಹೈಕಮಾಂಡ್ ನಾಯಕರು ಸಹ ಮಾತನಾಡಲಿದ್ದಾರೆ. ಅವರ ಮಗನನ್ನು ಎಂಎಲ್‌ಸಿ ಮಾಡಲಿದ್ದಾರೆ ಎಂದು ಹೇಳಿದರು. ಈ ಮೂಲಕ ಕಾಂತೇಶ್‌ಗೆ ಎಂಎಲ್‌ಸಿ ಮಾಡುವ ಸುಳಿವನ್ನು ಯಡಿಯೂರಪ್ಪ ನೀಡಿದ್ದಾರೆ.

ಇನ್ನು ಎಂಎಲ್​ಸಿ ಆಫರ್​ಗೆ ಈಶ್ವರಪ್ಪ ಮಣಿಯುತ್ತಾರಾ ಅಥವಾ ಬಿಎಸ್​ವೈ ಪುತ್ರನ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ ಎನ್ನುವುದು ನಾಳಿನ ಸಭೆ ಬಳಿಕ ತಿಳಿಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:43 pm, Thu, 14 March 24

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ