ಲೋಕಸಭೆ ಚುನಾವಣೆಯು (lok sabha election) ಹತ್ತಿರವಾಗುತ್ತಿದ್ದಂತೆ ಎಲ್ಲ ರಾಷ್ಟ್ರಪಕ್ಷಗಳು, ಸ್ಥಳೀಯ ಪಕ್ಷಗಳ ಜತೆಗೆ ಸೇರಿ ಒಕ್ಕೂಟಗಳನ್ನು ಮಾಡಕೊಂಡಿದೆ. ಈ ಪೈಕಿ ಬಿಜೆಪಿ ಒಂದು ಎನ್ಡಿಎ ಮಿತ್ರಪಕ್ಷಗಳನ್ನು ಮಾಡಿಕೊಂಡಿದ್ದರೆ, ಈ ಕಡೆ ಕಾಂಗ್ರೆಸ್ ಸೇರಿ ಇಂಡಿಯಾ ಎಂಬ ಮೈತ್ರಿಕೂಟವನ್ನು ಮಾಡಿದೆ. ಈ ಇಂಡಿಯಾ ಮೈತ್ರಿಕೂಟದಲ್ಲಿ ಉತ್ತರಪ್ರದೇಶದ ಸಮಾಜವಾದಿ ಪಕ್ಷವು ಒಂದು, ಆದರೆ ಈ ಇಂಡಿಯಾ ಮೈತ್ರಿಕೂಟ ಪ್ರಾರಂಭವಾದ ದಿನದಿಂದ ಒಂದಲ್ಲ ಒಂದು ಅಪಸ್ವರ ಕೇಳಿ ಬರುತ್ತಿದೆ. ಇತ್ತೀಚೆಗೆಷ್ಟೇ ಸಮಾಜವಾದಿ ಪಕ್ಷ ನಾಯಕ ಅಖಿಲೇಶ್ ಯಾದವ್ (Akhilesh Yadav) ಅವರು ಇಂಡಿಯಾ ಮೈತ್ರಿಕೂಟದ ಬಗ್ಗೆ ಅಸಮಾಧನ ವ್ಯಕ್ತಪಡಿಸಿದರು. ಇದೀಗ ಇದಕ್ಕೆ ಪುಷ್ಟಿ ನೀಡುವಂತೆ ಸಮಾಜವಾದಿ ಪಕ್ಷದ ಮೂಲಗಳು ತಿಳಿಸಿರುವಂತೆ ಲೋಕಸಭೆಯಲ್ಲಿ ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳ ಪೈಕಿ ಸಮಾಜವಾದಿ ಪಕ್ಷ 65 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಉಳಿದ ಕಡೆ ಇಂಡಿಯಾ ಮೈತ್ರಿಕೂಟ ಅಭ್ಯರ್ಥಿಗಳು ಸ್ವರ್ಧಿಸುತ್ತಾರೆ ಎಂದು ಹೇಳಿದೆ.
ಈ ಮೂಲಗಳ ಪ್ರಕಾರ 80 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ ಹಾಗೂ 15 ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಉಳಿದ ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದೆ. ಇನ್ನು ಮಧ್ಯಪ್ರದೇಶದಲ್ಲೂ ಇದೇ ರೀತಿಯ ಭಿನ್ನಾಭಿಪ್ರಾಯ ಉಂಟಾಗಿದೆ. ಇದು ಶಮನ ಆಗುವ ಮುನ್ನವೇ ಉತ್ತರಪ್ರದೇಶದಲ್ಲಿ ಈ ರೀತಿಯ ವಿಚಾರಗಳು ಕೇಳಿ ಬರುತ್ತಿದೆ.
ಇದನ್ನೂ ಓದಿ:ಚಳುವಳಿಗಳ ಹೀಗಳೆಯದಿರಿ; ‘ಆಂದೋಲನ್ ಜೀವಿ’ ಟೀಕೆಗೆ ಅಖಿಲೇಶ್ ಯಾದವ್ ಪ್ರತ್ಯುತ್ತರ
2024ರಲ್ಲಿ ಮೋದಿ ನೇತೃತ್ವದ ಬಿಜೆಪಿಯನ್ನು ಮನೆ ಕಳುಹಿಸುವುದು ಈ ಇಂಡಿಯಾ ಒಕ್ಕೂಟದ ಉದ್ದೇಶವಾಗಿತ್ತು. ಆದರೆ ಇದೀಗ ಕ್ಷೇತ್ರ ಹಂಚಿಕೆಯಲ್ಲೇ ಇಂಡಿಯಾ ಒಕ್ಕೂಟ ಮುಗಿಯುವ ಹಂತಕ್ಕೆ ಬಂದಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಚಾಲನೆ ನೀಡಿದ್ದಾರೆ. ಆದರೆ ಅವರೇ ಈ ಬಗ್ಗೆ ಯಾವುದೇ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳು ಬಂದಿದೆ.
ಇನ್ನು ಪಂಚ ರಾಜ್ಯಗಳ ಚುನಾವಣೆಯು ಹತ್ತಿರವಾಗುತ್ತಿದೆ. ಈ ಸಮಯದಲ್ಲಿ ಇಂಡಿಯಾ ಒಕ್ಕೂಟದ ಈ ಪರಿಸ್ಥಿತಿಯು ಈ ಚುನಾವಣೆಯ ಮೇಲೆ ಉಂಟು ಮಾಡಬಹುದು ಎಂದು ಹೇಳಲಾಗಿದೆ. ಈಗಾಗಲೇ ಪಂಚರಾಜ್ಯಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಧಿಕಾರಿಕ್ಕೆ ಬರಲು ಎಲ್ಲ ಪ್ರಯತ್ನವನ್ನು ಮಾಡಿದೆ ಎಂದು ಹೇಳಲಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ