AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪರ್ಕ್​ ಸೆ ಸಮರ್ಥನ್ ಅಭಿಯಾನ: ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸುವ ಅವಕಾಶ

ಸಂಪರ್ಕ್​ ಸೆ ಸಮರ್ಥನ್ ಅಭಿಯಾನದ ಭಾಗವಾಗಿ ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಸಂವಾದ ನಡೆಸುವ ಅವಕಾಶ ಸಿಗಲಿದೆ. ಇದಕ್ಕಾಗಿ ಫಲಾನುಭವಿಗಳ ಜೊತೆ ಹೆಚ್ಚಿನ ವಿಡಿಯೋ ಅಥವಾ ಸೆಲ್ಫಿ ತೆಗೆದು ಕಳುಹಿಸಬೇಕು.

ಸಂಪರ್ಕ್​ ಸೆ ಸಮರ್ಥನ್ ಅಭಿಯಾನ: ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸುವ ಅವಕಾಶ
ಸಂಪರ್ಕ್​ ಸೆ ಸಮರ್ಥನ್ ಅಭಿಯಾನದಡಿ ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಜೊತೆ ಸಂವಾದ ನಡೆಸುವ ಅವಕಾಶ
Rakesh Nayak Manchi
|

Updated on: Jun 18, 2023 | 8:36 PM

Share

ಬೆಂಗಳೂರು: ಸಂಪರ್ಕ್​ ಸೆ ಸಮರ್ಥನ್ ಅಭಿಯಾನದ ಭಾಗವಾಗಿ ಬಿಜೆಪಿ (BJP) ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೊತೆ ಜೂನ್ 27 ರಂದು ಸಂವಾದ ನಡೆಸುವ ಅವಕಾಶ ಸಿಗಲಿದೆ. ಇದಕ್ಕಾಗಿ ಫಲಾನುಭವಿಗಳ ಜೊತೆ ಹೆಚ್ಚಿನ ವಿಡಿಯೋ ಅಥವಾ ಸೆಲ್ಫಿ ತೆಗೆದು ಕಳುಹಿಸಬೇಕು. ಈ ಬಗ್ಗೆ ಬಿಜೆಪಿ ಕರ್ನಾಟಕವು ಪೋಸ್ಟರ್ ಹಂಚಿಕೊಂಡಿದೆ.

ನನ್ನ ಬೂತ್ ಎಲ್ಲಕ್ಕಿಂತಲೂ ಬಲಿಷ್ಠ ಬೂತ್ ಎಂಬ ಹೆಸರಿನಲ್ಲಿ ಬಿಜೆಪಿ ಹಂಚಿಕೊಂಡ ಪೋಸ್ಟರ್​ನಲ್ಲಿ ಇರುವಂತೆ, ಪ್ರಧಾನಮಂತ್ರಿ ಅವರು ಪಕ್ಷದ 10 ಲಕ್ಷ ಬೂತ್​ಗಳಲ್ಲಿನ ಲಕ್ಷಾಂತರ ಕಾರ್ಯಕರ್ತರೊಂದಿಗೆ ಜೂನ್ 27 ರಂದು ಸಂವಾದ ನಡೆಸಲಿದ್ದಾರೆ. ಸಂಪರ್ಕ್​ ಸೆ ಸಮರ್ಥನ್ ಅಭಿಯಾನದ ಭಾಗವಾಗಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳ ವಿಡಿಯೋ ಅಥವಾ ಸೆಲ್ಫಿ ತರುವ ಕಾರ್ಯಕರ್ತರಿಗೆ ಮೋದಿ ಅವರೊಂದಿಗೆ ಸಂವಾದ ನಡೆಸುವ ಅವಕಾಶ ಸಿಗಲಿದೆ.

ಈ ಮೂರು ಟಾಸ್ಕ್ ಪೂರ್ಣಗೊಳಿಸಬೇಕು

  • ಹರ್​ಘರ್ ವಿಕಾಸ್ ಫಲಾನುಭವಿಗಳ ಜೊತೆ ಸೆಲ್ಫಿ ತೆಗೆದು ಅಪ್​ಲೋಡ್ ಮಾಡಬೇಕು
  • ಸಂಪರ್ಕ್ ಸೆ ಸಮರ್ಥನ್: ಕ್ಷೇತ್ರದ ಗಣ್ಯ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಸಿ ಫೋಟೋ ಅಪ್ಲೋಡ್ ಮಾಡಬೇಕು
  • ಬದಲಾಗುತ್ತಿರುವ ಭಾರತದ ಮಾತು: ಫಲಾನುಭವಿಗಳ ವಿಡಿಯೋ ಅಪ್ಲೋಡ್ ಮಾಡಬೇಕು

NAMO App ಮೂಲಕ ಈ ಮೂರು ಟಾಸ್ಕ್​ಗಳನ್ನು ಪೂರ್ಣಗೊಳಿಸಬೇಕು. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಮಹಾಭಿಯಾನದಲ್ಲಿ ಜೊತೆಗೂಡುವಂತೆ ಬಿಜೆಪಿ ಕರ್ನಾಟಕ ತಿಳಿಸಿದೆ.

ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇದೇ ಮೇ 30 ಕ್ಕೆ 9 ವರ್ಷ ಪೂರ್ಣವಾಗಿದೆ. 2024ರಲ್ಲಿ ಲೋಕಸಭೆ ಚುನಾವಣೆ ಇದ್ದು, ಈಗಾಗಲೇ ಬಿಜೆಪಿ ಸಿದ್ಧತೆ ಆರಂಭಿಸಿದೆ. ಈ ಹಂತದಲ್ಲಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಮಂತ್ರಿಯಾಗಿ ಕೂಡ ಒಂಬತ್ತು ವರ್ಷ ಪೂರ್ಣಗೊಂಡ ಹಿನ್ನೆಲೆ ಜೂನ್​ 22ರಿಂದ 26ರವರೆಗೆ ಬಿಜೆಪಿ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸಲು 7 ತಂಡಗಳನ್ನು ರಚಿಸಲಾಗಿದೆ.

ಇದರ ಜೊತೆಗೆ ಜೂನ್​​ 26ರಿಂದ ಜುಲೈ 5ರವರೆಗೆ ಕರಪತ್ರ ವಿತರಣೆ ಅಭಿಯಾನ ನಡೆಯಲಿದ್ದು, . ಮನೆ ಮನೆಗೆ ಪ್ರಧಾನಿ ಮೋದಿ ಹೆಸರಿನಲ್ಲಿ ಪ್ರತಿ ಮನೆಗೆ ಕೇಂದ್ರದ ಸಾಧನೆಗಳ ಕರಪತ್ರ ವಿತರಿಸಲಾಗುತ್ತದೆ. ಸುಮಾರು 50 ಲಕ್ಷ ಮನೆಗಳಿಗೆ ಕರಪತ್ರ ವಿತರಣೆ ಮಾಡುವ ಗುರಿಯನ್ನು ರಾಜ್ಯ ಬಿಜೆಪಿ ಘಟಕ ಹೊಂದಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ