ತಮ್ಮ ವಿರುದ್ಧ ಉತ್ತರ ಪ್ರದೇಶದಲ್ಲಿ FIR ದಾಖಲಾಗಿರುವ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಪ್ರತಿಕ್ರಿಯೆ

ಉದಯನಿಧಿ ಸ್ಟಾಲಿನ್ ಅವರನ್ನು ಬೆಂಬಲಿಸಿ ಸಚಿವ ಪ್ರಿಯಾಂಕ್ ಖರ್ಗೆ ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್​ಐಆರ್​ ದಾಖಲಾಗಿದ್ದು, ಇನ್ನು ಈ ಬಗ್ಗೆ ಪ್ರಿಯಾಂಕ್ ಖರ್ಗೆ ತಮ್ಮ ಹೇಳಿಕೆಗೆ ಸಮರ್ಥನೆ ನೀಡುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ತಮ್ಮ ವಿರುದ್ಧ ಉತ್ತರ ಪ್ರದೇಶದಲ್ಲಿ FIR ದಾಖಲಾಗಿರುವ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಪ್ರತಿಕ್ರಿಯೆ
ಪ್ರಿಯಾಂಕ್ ಖರ್ಗೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 07, 2023 | 1:03 PM

ಬೆಂಗಳೂರು, (ಸೆಪ್ಟೆಂಬರ್ 07): ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ(Sanatana dharma remark) ಬಗ್ಗೆ ನೀಡಿರುವ ಹೇಳಿಕೆ ಇಡೀ ದೇಶಾದ್ಯಂತ ಕೊತಕೊತನೆ ಹೊತ್ತಿ ಉರಿಯುತ್ತಿದೆ. ಕೆಲವರು ಉದಯನಿಧಿ ಸ್ಟಾಲಿನ್ ವಿರುದ್ಧ ಕಿಡಿಕಾರುತ್ತಿದ್ದರೆ, ಇನ್ನೂ ಕೆಲವರು ಉದಯನಿಧಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅದರಂತೆ ಉದಯನಿಧಿ ಸ್ಟಾಲಿನ್ ಅವರನ್ನು ಬೆಂಬಲಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮಾನ ಹಕ್ಕುಗಳನ್ನು ನೀಡದ ಯಾವುದೇ ಧರ್ಮವು ರೋಗದಂತೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್​ಐಆರ್ ದಾಖಲಾಗಿದೆ. ಇದೀಗ ಈ ದೂರಿನ ಬಗ್ಗೆ ಇಂದು (ಸೆಪ್ಟೆಂಬರ್ 07) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ನಾನು ಮಾಡಿದ ಟ್ವೀಟ್​​ನಲ್ಲಿ ಯಾವುದೇ ತಪ್ಪಿಲ್ಲ. ಸಂವಿಧಾನವೇ ನನ್ನ ಧರ್ಮ ಎಂದು ಹೇಳಿದ್ದೇನೆ. ಸಂವಿಧಾನದಿಂದ ಏನೂ ಇಲ್ಲ ಎಂದು ಬಿಜೆಪಿಯವರು ಹೇಳಲಿ. ಬಿಜೆಪಿಯವರು ಮೊಸರಿನಲ್ಲೂ ಕಲ್ಲು ಹುಡುಕುವುದು ಬೇಡ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ನಿಮ್ಮ ಆಚರಣೆ ವಿರುದ್ಧ ನಾನಿಲ್ಲ ಅಂದ್ರೆ ನನ್ನ ಆಚರಣೆ ವಿರುದ್ಧ ಯಾಕೆ ಇದ್ದೀರಾ? ಮಾನವ ಕುಲ ಮುಂದುವರೆಯಬೇಕು ಅಂದರೆ ಕುತೂಹಲ ಮುಖ್ಯ. ಸಂವಿಧಾನದ ಬಗ್ಗೆ ನಂಬಿಕೆ ಇದೆ. ನಾನು ಸ್ಟಾಲಿನ್ ನ ಅಥವಾ ಯಾರಿಗ್ಯಾಕೆ ಸಮರ್ಥನೆ ಮಾಡಬೇಕು. ಎಫ್ ಆರ್ ಐ ಎಲ್ಲಿಯಾದರೂ ಹಾಕಲಿ. ಸಂವಿಧಾನ ಗೌರವಿಸುತ್ತೇನೆ ಅಂದರೆ ಎಫ್ ಐ ಆರ್ ಹಾಕುತ್ತೇನೆ ಅಂದರೆ ಹಾಕಲಿ ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: ಸನಾತನ ಧರ್ಮ ವಿವಾದ; ಉದಯನಿಧಿ, ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಕೇಸ್ ದಾಖಲು

ರಿಪಬ್ಲಿಕ್ ಆಪ್ ಭಾರತ್ ಹೆಸರು ನಾಮಕರಣ ವಿಚಾರವಾಗಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಇದೊಂದು ವಾಟ್ಸ್ ಅಪ್ ವಿಶ್ವವಿದ್ಯಾಲಯದಲ್ಲಿ ಬೆಳೆದು ಬಂದವರು. ಇತಿಹಾಸ ತಿಳಿದುಕೊಂಡು ಬಂದಿಲ್ಲ. ಭಾರತ, ಇಂಡಿಯಾ ಹೇಗೆ ಬಂತು ಎಂದು ತಿಳಿದುಕೊಳ್ಳಲಿ. ರಸ್ತೆ ಹೆಸರು ಚೇಂಜ್ ಮಾಡುತ್ತಿದ್ದರು. ಈಗ ದೇಶದ ಹೆಸರು ಚೇಂಜ್ ಮಾಡುತ್ತಿದ್ದಾರೆ. ಮೊದಲು ದೇಶದ ಹಣೆಬರಹ ಬದಲಾವಣೆ ಮಾಡಿ. ಹಸಿವಿನಿಂದ ಎಷ್ಟು ಜ‌ನ ಸಾಯುತ್ತಿದ್ದಾರೆ. ಮೇಕ್ ಇನ್ ಇಂಡಿಯಾ, ಹಣಕಾಸಿನ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ