ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Elections 2023)ಸಮೀಪಿಸುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಮತಬೇಟೆಗಿಳಿದಿವೆ. ಇನ್ನೂ ದಿನಾಂಕ ಘೋಷಣೆಗೂ ಮುನ್ನವೇ ಪಕ್ಷಗಳು ಅಬ್ಬರ ಪ್ರಚಾರವನ್ನ ಶುರುಮಾಡಿಕೊಂಡಿವೆ. ಈ ನಡುವೆ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ (Uttama Prajaakeeya Party) ಆಟೋ ರಿಕ್ಷಾ ಚಿಹ್ನೆ ಲಭಿಸಿದೆ.
ಈ ಕುರಿತು ಚುನಾವಣಾ ಆಯೋಗ (Election Commission)ಆದೇಶ ಹೊರಡಿಸಿದ್ದು, ಚುನಾವಣಾ ಆಯೋಗದ ಆದೇಶವನ್ನು ನಟ ಹಾಗೂ ರಾಜಕಾರಣಿ ಉಪೇಂದ್ರ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ “ಆಟೋ ರಿಕ್ಷಾ ” ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
ನಾಯಕತ್ವ, ಜವಾಬ್ಧಾರಿ ವಹಿಸಿಕೊಳ್ಳಲು ರೆಡಿ ಇರುವ ಮತದಾರರ ಪಕ್ಷದ ಚಿಹ್ನೆ ಆಟೋರಿಕ್ಷಾ….
ಇಲ್ಲಿ ಸ್ಪರ್ಧಿಸುತ್ತಿರುವವರಿಂದ ನೀವು ಕೆಲಸ ಮಾಡಿಸುತ್ತೀರಿ ಎಂಬ ತನ್ನಂಬಿಕೆ ನಿಮಗಿದ್ದರೆ ಮಾತ್ರ ಪ್ರಜಾಕೀಯಕ್ಕೆ ಮತ ನೀಡಿ… pic.twitter.com/KJz5ItuwlW— Upendra (@nimmaupendra) February 24, 2023
ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡುವ ಮೂಲಕ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡಿದ್ದಾರೆ. ಈ ಪಕ್ಷದಿಂದ ಈಗಾಗಲೇ ಪಂಚಾಯತಿ ಚುನಾವಣೆಯನ್ನು ಅವರು ಎದುರಿಸಿದ್ದರು. ಈ ಪಕ್ಷದಿಂದ ಪಂಚಾಯತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ, ಅಧಿಕೃತವಾಗಿ ಈ ಪಕ್ಷಕ್ಕೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ.
2018 ರಿಂದ ತಮ್ಮದೇ ಆದ ಸಿದ್ಧಾಂತ ಮೂಲಕ ಉಪೇಂದ್ರ ತಮ್ಮ ಪಕ್ಷಕ್ಕೆ ಅಭ್ಯರ್ಥಿಗಳನ್ನು ಸೆಳೆಯುತ್ತಿದ್ದಾರೆ. ಅಲ್ಲದೇ ಡಿಫ್ರೆಂಟ್ನೊಂದಿಗೆ ಅಭ್ಯರ್ಥಿಯಗಳ ಆಯ್ಕೆ ಮಾಡುವ ಮೂಲಕ ಗಮನಸೆಳೆದಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದ್ದರು. ರಾಜೀಯಕ ಪಕ್ಷಗಳು ಸಾಕು ತ್ತಮ ಪ್ರಜಾಕೀಯ ಪಕ್ಷ ಬೇಕೆ ಎನ್ನುವ ಟ್ರೆಂಡ್ ಶುರುವಾಗಿತ್ತು.
Published On - 4:51 pm, Fri, 24 February 23