ಪ್ರಣಾಳಿಕೆ ಬದಲು ಬಿಜೆಪಿಯಿಂದ ಸಂಕಲ್ಪ ಪತ್ರ: ಕರ್ನಾಟಕದಲ್ಲಿ ಮಾ. 3ರಿಂದ ಅಭಿಯಾನ

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಪ್ರಣಾಳಿಕೆ ಬದಲು ಸಂಕಲ್ಪ ಪತ್ರದ ಮೂಲಕ ಚುನಾವಣೆ ಎದುರಿಸಲು ಮುಂದಾಗಿದೆ. ಅದಕ್ಕಾಗಿ ರಾಜ್ಯದಲ್ಲಿ 3 ಲಕ್ಷ ಜನರ ಅಭಿಪ್ರಾಯ ಸಂಗರ್ಹಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ಹಾಗಾದ್ರೆ, ಕರ್ನಾಟಕದಲ್ಲಿ ಯಾವಾಗಿನಿಂದ ಅಭಿಯಾನ ನಡೆಯಲಿದೆ ಎನ್ನುವ ವಿವರ ಇಲ್ಲಿದೆ.

ಪ್ರಣಾಳಿಕೆ ಬದಲು ಬಿಜೆಪಿಯಿಂದ ಸಂಕಲ್ಪ ಪತ್ರ: ಕರ್ನಾಟಕದಲ್ಲಿ ಮಾ. 3ರಿಂದ ಅಭಿಯಾನ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 03, 2024 | 6:35 PM

ಬೆಂಗಳೂರು, (ಮಾರ್ಚ್ 03): ಬಿಜೆಪಿ ಸಂಕಲ್ಪ ಪತ್ರಕ್ಕಾಗಿ (BJP Sankalpa Patra) ರಾಜ್ಯದ ಕನಿಷ್ಠ 3 ಲಕ್ಷ ಜನರ ಅಭಿಪ್ರಾಯ ಸಂಗ್ರಹದ ಗುರಿ ಇದೆ. ದೇಶದಲ್ಲಿ 1 ಕೋಟಿ ಜನರ ಅಭಿಪ್ರಾಯ ಸಂಗ್ರಹಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ತಿಳಿಸಿದರು. ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹಣಾ ಅಭಿಯಾನದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದ ಅವರು, ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಲಹಾ ಪೆಟ್ಟಿಗೆ ಇಡಲಾಗುತ್ತದೆ.  9090902024 ವಾಟ್ಸಾಪ್​ ನಂಬರ್​ಗೆ ಅಭಿಪ್ರಾಯ ಕಳುಹಿಸಬಹುದು. ಅಲ್ಲದೇ ನಮೋ ಆ್ಯಪ್​ ಮೂಲಕವೂ ತಮ್ಮ ಅಭಿಪ್ರಾಯವನ್ನು ತಿಳಿಸಬಹುದು ಎಂದು ಹೇಳಿದರು.

ಮುಂದಿನ ಲೋಕಸಭಾ ಚುನಾವಣೆಯ (Parliament Election 2024) ಕ್ಷಣಗಣನೆ ಸಂದರ್ಭದಲ್ಲಿ ನರೇಂದ್ರ ಮೋದಿಜೀ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಚಿಂತನೆಯಂತೆ ಪ್ರಣಾಳಿಕೆ ಬದಲು ಜನಾಭಿಪ್ರಾಯ ಪಡೆದು ಸಂಕಲ್ಪ ಪತ್ರದ ಮೂಲಕ ಚುನಾವಣೆ ಎದುರಿಸಲಾಗುತ್ತಿದೆ. ಕರ್ನಾಟಕದಲ್ಲಿ ಅಭಿಯಾನ ಮಾರ್ಚ್ 3ರಿಂದ 15ರ ತನಕ ನಡೆಯಲಿದೆ. “ವಿಕಸಿತ ಭಾರತ – ಇದು ಮೋದಿ ಗ್ಯಾರಂಟಿ” ಈ ವಿಷಯದ ಕುರಿತು ರಾಜ್ಯಾದ್ಯಂತ ವಿಡಿಯೋ ವ್ಯಾನ್ ಹಾಗೂ ಸಲಹೆ ಪೆಟ್ಟಿಗೆಗಳ ಮೂಲಕ ಮುಂದಿನ 5 ವರ್ಷಗಳ ಗುರಿಯ ಕುರಿತು ರಾಜ್ಯದ ಜನರ ಆಶೀರ್ವಾದ ಪಡೆದು ಸಲಹೆಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಅಖಾಡಕ್ಕಿಳಿದ ಎಸ್​ಆರ್ ವಿಶ್ವನಾಥ್, ಕಾರು ರ್ಯಾಲಿ ಮೂಲಕ ಕ್ಷೇತ್ರದ ಜನತೆಗೆ ಮಗನ ಪರಿಚಯ

ಜನಸಂಘ ಕಾಲದಿಂದ ಪ್ರಣಾಳಿಕೆಯಲ್ಲಿ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನಕ್ಕೆ ಕಾರಣವಾದ ಜಮ್ಮು- ಕಾಶ್ಮೀರದ 370ನೇ ವಿಧಿ ರದ್ದು ಮಾಡುವ ಮೂಲಕ ಮೋದಿಯವರು ನುಡಿದಂತೆ ನಡೆದಿದ್ದಾರೆ. ಅಯೋಧ್ಯೆಯಲ್ಲಿ ಬಾಲರಾಮನ ಭವ್ಯ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಈ ಬಾರಿ ಘೋಷಣಾ ಪತ್ರ ಪ್ರಣಾಳಿಕೆ ಬದಲು ಸಂಕಲ್ಪ ಪತ್ರ ಮುಂದಿಡಲಾಗುವುದು .ಸ್ವಾತಂತ್ರ್ಯೋತ್ಸವದ 100ನೇ ವರ್ಷಾಚರಣೆ ವೇಳೆ 2047ರಲ್ಲಿ ನಮ್ಮ ಭಾರತ ವಿಕಸಿತ ಭಾರತ ಎಂಬ ಸಂಕಲ್ಪವನ್ನು ಮೋದಿಜೀ ಅವರು ಮುಂದಿಟ್ಟಿದ್ದಾರೆ. ಅದನ್ನು ಸಾಕಾರಗೊಳಿಸಲು ಅಭಿಪ್ರಾಯ ಸಂಗ್ರಹದ ಅಭಿಯಾನ ಆರಂಭಿಸಿದೆ. ಸಮಾಜದ ರೈತರು, ಮಹಿಳೆಯರು, ಯುವಜನತೆ ಸೇರಿ ಎಲ್ಲ ವರ್ಗದ ಜನರಿಂದ ಅಭಿಮತ ಸಂಗ್ರಹಿಸಲಿದ್ದೇವೆ ಎಂದು ಹೇಳಿದರು.

ಬಿಜೆಪಿ ಕೇಂದ್ರ ಸರಕಾರವು 2014ರ, 2019ರ ಚುನಾವಣೆ ಸಂದರ್ಭದಲ್ಲಿ ನೀಡಿದ ಬಹುತೇಕ ಎಲ್ಲ ಭರವಸೆಗಳನ್ನು ಈಡೇರಿಸಿದೆ. 10 ವರ್ಷದ ನರೇಂದ್ರ ಮೋದಿ ಅವರ ಅವರ ಆಡಳಿತಾವಧಿಯಲ್ಲಿ ಭರವಸೆ ಈಡೇರಿಸಿದ್ದಲ್ಲದೆ, ಯೋಜನೆ ಶಂಕುಸ್ಥಾಪನೆ ಜೊತೆಗೆ ಉದ್ಘಾಟನಾ ದಿನಾಂಕ ನಿಗದಿಪಡಿಸಿ ಸಕಾಲದಲ್ಲಿ ಪೂರ್ಣಗೊಳಿಸಿದ್ದನ್ನು ನೋಡಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ