ಅಸಮಾಧಾನ ಸ್ಫೋಟ: ಬೆಳಗಾವಿಗೆ ಬಂದ ಡಿಕೆ ಶಿವಕುಮಾರ್​ಗೆ ಟ್ರೈಲರ್​ ತೋರಿಸಿದ ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಡಿಕೆ ಶಿವಕುಮಾರ್ ಮೂಗು ತೂರಿಸುತ್ತಿರುವುದರಿಂದ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಬೆಳಗಾವಿಗೆ ಆಗಮಿಸಿದರೂ ಸಹ ಮುನಿಸಿಕೊಂಡಿರುವ ಸತಿಶ್ ಜಾರಕಿಹೊಳಿ ಮಾತ್ರ ಜಿಲ್ಲೆಯಿಂದ ಆಚೆ ಇದ್ದಾರೆ. ಈ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಅವರಿಗೆ ಜಾರಕಿಹೊಳಿ ತಮ್ಮ ಪ್ರಭಾವ ಹೇಗಿದೆ ಎನ್ನುವುದನ್ನು ಟ್ರೈಲರ್ ತೋರಿಸಿದ್ದಾರೆ.

ಅಸಮಾಧಾನ ಸ್ಫೋಟ: ಬೆಳಗಾವಿಗೆ ಬಂದ ಡಿಕೆ ಶಿವಕುಮಾರ್​ಗೆ ಟ್ರೈಲರ್​ ತೋರಿಸಿದ ಸತೀಶ್ ಜಾರಕಿಹೊಳಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 18, 2023 | 2:55 PM

ಬೆಳಗಾವಿ, (ಅಕ್ಟೋಬರ್ 18): ಬೆಳಗಾವಿ (Belagavi) ಜಿಲ್ಲಾ ರಾಜಕಾರಣ ಮತ್ತೆ ರಾಜ್ಯ ರಾಜಕಾರಣದಲ್ಲಿ ಕಂಪನ ಸೃಷ್ಟಿಸಿದೆ. ಈ ಹಿಂದೆ ರಮೇಶ್ ಜಾರಕಿಹೊಳಿ-ಲಕ್ಷ್ಮೀ ಹೆಬ್ಬಾಳ್ಕರ್​ ನಡುವಿನ ಗುದ್ದಾಟದಿಂದ ಮೈತ್ರಿ ಸರ್ಕಾರಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಇದೀಗ ಮತ್ತೆ ಬೆಳಗಾವಿಯಲ್ಲಿ ಹೆಬ್ಬಾಳ್ಕರ್​ ಹಾಗೂ ಸತೀಶ್ ಜಾರಕಿಹೊಳಿ ಮಧ್ಯೆ ಮುಸುಕಿನ ಗುದ್ದಾಟ ಶುರುವಾಗಿದೆ. ಹೌದು..ಬೆಳಗಾವಿ ರಾಜಕೀಯದಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ. ಇದರ ನಡುವೆಯೂ ಇಂದು (ಅಕ್ಟೋಬರ್ 18) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಆದ್ರೆ, ಈ ವೇಳೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಗೈರು  ಎದ್ದು ಕಾಣುತ್ತಿದೆ. ತವರು ಜಿಲ್ಲೆಗೆ ಡಿಕೆಶಿ ಬಂದರೂ ಜಾರಕಿಹೊಳಿ ಅಂತರ ಕಾಪಾಡಿಕೊಂಡಿದ್ದಾರೆ. ಈ ಮೂಲಕ ತಮ್ಮ ಅಸಮಧಾನ ಹೊರಹಾಕಿದ್ದಾರೆ. ಅಲ್ಲದೇ ಡಿಸಿಎಂಗೆ ತಮ್ಮ ಪ್ರಭಾವದ ಟ್ರೈಲರ್ ತೋರಿಸಿ, ಅಭಿಬಿ ಪಿಕ್ಚರ್ ಹೈ ಎನ್ನುವ ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಹೌದು….ನಾನಾ ಕಾರ್ಯಕ್ರಮಗಳ ನಿಮಿತ್ತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು (ಅಕ್ಟೋಬರ್ 18) ಬೆಳಗಾವಿಗೆ ಬಂದಿದ್ದಾರೆ. ಅಲ್ಲದೇ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಆದ್ರೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಿಹೊಳಿ, ಡಿಸಿಎಂ ಕಾರ್ಯಕ್ರಮಗಳಿಂದ ದೂರ ಉಳಿದಿದ್ದಾರೆ. ​ಅಲ್ಲದೇ  ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಸಹ ಬಂದಿಲ್ಲ.

ಇದನ್ನೂ ಓದಿ: ಬೆಳಗಾವಿಯಲ್ಲಿ ಸಚಿವರ ಮುಸುಕಿನ ಗುದ್ದಾಟ: ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್​ ನಡುವೆ ಜಟಾಪಟಿ

ಬೆಳಗಾವಿ ಜಿಲ್ಲೆಯಲ್ಲಿ ಹನ್ನೊಂದು ಕಾಂಗ್ರೆಸ್ ಶಾಸಕರು ಇದ್ದಾರೆ. ಈ ಹನ್ನೊಂದು ಶಾಸಕರ ಪೈಕಿ ಒಬ್ಬೇ ಒಬ್ಬ ಶಾಸಕ ಕೂಡ ಡಿಕೆ ಶಿವಕುಮಾರ್ ಅವರ ಸ್ವಾಗತಕ್ಕೆ ಬಂದಿಲ್ಲ. ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರೂ ಸಹ ಯಾವೊಬ್ಬ ಶಾಸಕರು ಸ್ವಾಗತಕ್ಕೆ ಬಾರದಿರುವುದು ಅಚ್ಚರಿಗೆ ಕಾರಣವಾಗಿದೆ. ಇದರೊಂದಿಗೆ ಡಿಕೆ ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದು ಸಾಬೀತಾದಂತಾಗಿದೆ.

ತಮ್ಮ ಬೆಂಬಲಗರನ್ನು ಸಹ ಡಿಕೆ ಶಿವಕುಮಾರ್ ಕಾರ್ಯಕ್ರಮಗಳಿಂದ ದೂರ ಇಡುವ ಮೂಲಕ ಸತೀಶ್ ಜಾರಕಿಹೊಳಿ , ಇಡೀ ಬೆಳಗಾವಿ ಜಿಲ್ಲೆ ತಮ್ಮ ಕಂಟ್ರೋಲ್ ನಲ್ಲಿದೆ ಎನ್ನುವುದನ್ನು ಡಿಕೆಶಿಗೆ ಮನವರಿಕೆ ಮಾಡಿಕೊಟ್ಟಂತಿದೆ. ಇದು ಜಸ್ಟ್  ಟ್ರೈಲರ್ ಎನ್ನಲಾಗಿದ್ದು,  ಇದು ಹೀಗೆ ಮುಂದುವರೆದಿದರೆ ಫಿಕ್ಚರ್​ ತೋರಿಸಬೇಕಾಗುತ್ತೆ ಎನ್ನುವ ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಸತೀಶ್ ಜಾರಕಿಹೊಳಿ 20 ಶಾಸಕರ ಜೊತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು ಎನ್ನಲಾಗಿದೆ. ಬೆಳಗಾವಿಯಿಂದ ಮೈಸೂರಿಗೆ ತೆರಳಲು ಹೊರಟಿದ್ದ ಸತೀಶ್ ಜಾರಕಿಹೊಳಿ ಆ್ಯಂಡ್​ ತಂಡವನ್ನು ಸಿಎಂ ಸಿದ್ದರಾಮಯ್ಯ, ಹಾಗೂ ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್​ ತಡೆದಿದ್ದರು ಎನ್ನಲಾಗಿದೆ.

ಒಟ್ಟಿನಲ್ಲಿ ಮೈತ್ರಿ ಸರ್ಕಾರವಿದ್ದಾಗ ರಮೇಶ್ ಜಾರಕಿಹೊಳಿ (Ramesh Jarkiholi) ಕಾಂಗ್ರೆಸ್​ಗೆ ತಲೆನೋವು ಆಗಿದ್ದರು. ಇದೀಗ ಸತೀಶ್ ಜಾರಕಿಹೊಳಿ ಅಸಮಾಧಾನ ಕಾಂಗ್ರೆಸ್​ ಗೆ ದೊಡ್ಡ ಟೆನ್ಷನ್ ತಂದೊಡ್ಡಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್