ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ: ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಇಂದು ದೆಹಲಿಯಲ್ಲಿ ಭೇಟಿ ಮಾಡಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿ ಸೇರಿದಂತೆ 20 ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ: ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ
ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ, ಕೇಂದ್ರ ಸಚಿವ ನಿತಿನ್ ಗಡ್ಕರಿ
Edited By:

Updated on: Jul 26, 2023 | 5:42 PM

ದೆಹಲಿ, ಜುಲೈ 26: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ನಿತಿನ್ ಗಡ್ಕರಿ ಜೊತೆಗಿನ ಸಭೆ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು.

ಗೊಂದಲ ಇರುವ ಬಗ್ಗೆ ನಾವು ಪರಿಹಾರ ಕಂಡುಕೊಂಡಿದ್ದೇವೆ. ಸ್ಪಷ್ಟವಾದ ಪ್ರಸ್ತಾವನೆಯೊಂದಿಗೆ ದೆಹಲಿಗೆ ಮತ್ತೊಮ್ಮೆ ಬರುತ್ತೇವೆ. ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣಕ್ಕೆ ಅರಣ್ಯ ಸಮಸ್ಯೆ ಇದೆ. ಒಂದು ಎಕರೆ ಜಮೀನು ಸಮಸ್ಯೆ ಇರಬಾರದು. ರಾಜ್ಯದಿಂದ ಸ್ಪಷ್ಟ ಪ್ರಸ್ತಾವನೆ ಬೇಕಾಗಿದ್ದು, ಸಿಎಂ ಸಿದ್ಧರಾಮಯ್ಯ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ ಶಾಸಕ ತನ್ವೀರ್ ಸೇಠ್​ ಉಗ್ರಗಾಮಿ ಸಂಘಟನೆ ಮುಖ್ಯಸ್ಥ: ಬಿಜೆಪಿ ಸಂಸದ ಎಸ್​ ಮುನಿಸ್ವಾಮಿ ತೀವ್ರ ವಾಗ್ದಾಳಿ

38 ರಾಷ್ಟ್ರೀಯ ಹೆದ್ದಾರಿಗಳು ಅಪ್​ಗ್ರೇಡ್ ಆಗಬೇಕಿದೆ. ಬೆಂಗಳೂರಿನಲ್ಲಿ ಸುರಂಗ ನಿರ್ಮಿಸುವ ಬಗ್ಗೆ ಆಸಕ್ತಿ ವಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದಾರೆ. ಅಂತಿಮವಾದ ಪ್ರಸ್ತಾವನೆ ಮುಂದಿನ ದಿನಗಳಲ್ಲಿ ಇಡಲಿದ್ದೇವೆ. ಯಾರು ಹಣ ಹೂಡಿಕೆ ಮಾಡಬೇಕೆಂದು ನಿರ್ಧಾರ ಮಾಡಬೇಕು ಎಂದರು.

ಇದನ್ನೂ ಓದಿ: ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸ್ಪಷ್ಟನೆ ನೀಡಿದ ಜಗದೀಶ್ ಶೆಟ್ಟರ್, ಅಂತೆ-ಕಂತೆಗಳಿಗೆ ತೆರೆ

ಏನೇ ಸಮಸ್ಯೆ ಇದರೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ

ಸಚಿವರ ವಿರುದ್ಧ ಕಾಂಗ್ರೆಸ್​ ಶಾಸಕರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾಳೆ ಸಿಎಲ್​ಪಿ ಸಭೆಯಲ್ಲಿ ಎಲ್ಲವೂ ಚರ್ಚೆ ಮಾಡಲಾಗುವುದು. ಏನೇ ಸಮಸ್ಯೆ ಇದ್ದರೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಬಹುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬಗೆಹರಿಸುತ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:40 pm, Wed, 26 July 23

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us