ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ? ಸುಳಿವು ಕೊಟ್ಟ ಸತೀಶ್ ಜಾರಕಿಹೊಳಿ

ಮಾರ್ಚ್​​ ಮೊದಲ ವಾರದಲ್ಲಿ ಕಾಂಗ್ರೆಸ್ ಮೊದಲ ಟಿಕೆಟ್ ಪಟ್ಟಿ ಬಿಡುಗಡೆ ಆಗಬಹುದು. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.

ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ? ಸುಳಿವು ಕೊಟ್ಟ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿImage Credit source: hindustantimes.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 19, 2023 | 7:38 PM

ಬೆಳಗಾವಿ: ಮಾರ್ಚ್​​ ಮೊದಲ ವಾರದಲ್ಲಿ ಕಾಂಗ್ರೆಸ್ (Congress) ಟಿಕೆಟ್ ಪಟ್ಟಿ ಬಿಡುಗಡೆ ಆಗಬಹುದು. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಸೂಚನೆ ನೀಡಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜಕೀಯದಲ್ಲಿ ಸುಳ್ಳು ಹೇಳುತ್ತಾರೆ. ಆ ಸುಳ್ಳು ಹೇಳುವ ಕೆಲಸ ಬಿಜೆಪಿ ಸರ್ಕಾರ ಮಾಡಿದೆ. ಆದ್ರೆ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕೊಡುತ್ತದೆ. ಜನರಲ್ಲಿ ಮೋದಿ, ಸಿಎಂ ಬೊಮ್ಮಾಯಿ ಮೇಲೆ ನಂಬಿಕೆ ಹೋಗಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆದಿದೆ. ಕಾಂಗ್ರೆಸ್ ಪಕ್ಷದ ಭರವಸೆಗಳನ್ನ ಜನರಿಗೆ ತಿಳಿಸುವ ಕೆಲಸ ಆಗಬೇಕು. ಕಾಂಗ್ರೆಸ್ ಪಕ್ಷ ಇನ್ನೂ ಕೆಲವು ಗ್ಯಾರಂಟಿ ಘೋಷಣೆ ಮಾಡಬೇಕಿದೆ. ಪ್ರಾಂತವಾರು, ಜಿಲ್ಲಾವಾರು ಪ್ರಣಾಳಿಕೆ ಘೋಷಣೆ ಮಾಡಬೇಕಿದೆ. ದೇಶದಲ್ಲಿ ಇಂದು ಮಹಿಳೆಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷ ಉಚಿತ ವಿದ್ಯುತ್ ಭರವಸೆ ನೀಡಿದೆ. ಪ್ರತಿ ಕುಟುಂಬದ ಗೃಹಿಣಿಗೆ 2,000 ರೂ. ಯೋಜನೆ ಗ್ಯಾರಂಟಿ ಎಂದರು.

ಟಿಕೆಟ್​ ಘೋಷಣೆಯಾದ ಕೂಡಲೇ ಕೆಲವು ಪಕ್ಷ ಬಿಟ್ಟು ಹೋಗ್ತಾರೆ

ಇನ್ನು ಟಿಕೆಟ್​ ಘೋಷಣೆಯಾದ ಕೂಡಲೇ ಕೆಲವರು ಪಕ್ಷ ಬಿಟ್ಟು ಕೆಲವು ಕಡೆ ಗಿರಾಕಿಗಳು ಹೋಗ್ತಾರೆ. ಅವರನ್ನು ಪಟ್ಟಿ ಮಾಡಿ ಇಟ್ಟಿದ್ದೇವೆ. ಚುನಾವಣೆಗೆ ನಿಲ್ಲೋರು ಗಟ್ಟಿಯಾಗಿ 2-3 ಚಡ್ಡಿ ಹಾಕಿಕೊಂಡು ನಿಲ್ಲಿ. ಇಲ್ಲದಿದ್ರೆ ಬೇರೆಯವರು ಗೆಲ್ತಾರೆ ನೋಡು ಅಂತಾ ಹೇಳ್ತೀವಿ. ಒಗ್ಗಟ್ಟಾಗಿ ಕೆಲಸ ಮಾಡಿದ್ರೆ ಚಿಕ್ಕೋಡಿಯಲ್ಲಿ ಗೆಲ್ಲಲು ಸಮಸ್ಯೆ ಇಲ್ಲ. ಮುಂದೆ ಪಕ್ಷ ನಿಮ್ಮ ಶಕ್ತಿಗೆ ಅನುಗುಣವಾಗಿ ಸ್ಥಾನಮಾನ ಕೊಡಲಿದೆ ಎಂದು ಹೇಳಿದರು.

ಇದನ್ನೂ ಓದಿ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ, ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ: ಸಿ.ಟಿ.ರವಿ ಸ್ಪಷ್ಟನೆ

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ರಣದೀಪ್ ಸುರ್ಜೇವಾಲ

ರಣದೀಪ್ ಸುರ್ಜೇವಾಲ ಮಾತನಾಡಿ, ಬಿಜೆಪಿ ಸರ್ಕಾರ ಮಠಗಳಿಂದಲೂ ಲೂಟಿ ಮಾಡಿದೆ ಎಂದು ರಾಜ್ಯ BJP ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಬಿಜೆಪಿ ನಾಯಕರಿಗೆ ನರಕದಲ್ಲೂ ಜಾಗ ಸಿಗುವುದಿಲ್ಲ. ಯಮರಾಜನೂ ಇಂಥ ರಾಕ್ಷಸರಿಗೆ ನರಕದೊಳಗೆ ಸೇರಿಸಿಕೊಳ್ಳಲ್ಲ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ‘ಆಪರೇಷನ್ ಕಮಲ’ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ.ರವಿ; ಹೇಳಿದ್ದೇನು ನೋಡಿ

ಬಿಜೆಪಿಯವರಿಗೆ ನರಕದಲ್ಲೂ ಜಾಗ ಸಿಗುವುದಿಲ್ಲ

ಬೊಮ್ಮಾಯಿ ಅಂದ್ರೆ 40 ಪರ್ಸಂಟ್ ಸರ್ಕಾರ. ಸಿಎಂ ಬೊಮ್ಮಾಯಿ ಕರ್ನಾಟಕಕ್ಕೆ ಕಳಂಕ ತಂದಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಹೇಳ್ತಿಲ್ಲ, ಗುತ್ತಿಗೆದಾರರು, ಅಧಿಕಾರಿಗಳ ಆತ್ಮಹತ್ಯೆ ಹೇಳುತ್ತಿವೆ. ಬೊಮ್ಮಾಯಿ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿ ತುಟಿ ಬಿಚ್ಚುತ್ತಿಲ್ಲ. ಕರ್ನಾಟಕಕ್ಕೆ 8 ಬಾರಿ ಬಂದ್ರು ಮೋದಿ ಬಾಯಿಗೆ ಬೀಗ ಹಾಕಿಕೊಂಡಿದ್ದರು. ಈ ಬಿಜೆಪಿ ಸರ್ಕಾರ ಮಠಗಳಿಂದಲೂ ಲೂಟಿ ಮಾಡಿದೆ. ಬಿಜೆಪಿಯವರಿಗೆ ನರಕದಲ್ಲೂ ಜಾಗ ಸಿಗುವುದಿಲ್ಲ ಎಂದು ಹರಿಹಾಯ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:38 pm, Sun, 19 February 23

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್