ಸಾವರ್ಕರ್​​, ಹೆಡ್ಗೇವಾರ್​​ ಸ್ವಾತಂತ್ರ್ಯ ಹೋರಾಟಗಾರರಲ್ಲ ಎನ್ನಲು ಸಾಧ್ಯವಿಲ್ಲ, ದಾಖಲೆ ಒದಗಿಸಲು ನಾನು ಸಿದ್ಧ: ರೋಹಿತ್ ಚಕ್ರತೀರ್ಥ

ನನ್ನ ಅವಧಿಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ಸರ್ಕಾರಕ್ಕೆ ಶಿಪಾರಸ್ಸು ಮಾಡಿದ ಮೇಲೆ ಅದು ಸರ್ಕಾರದ ಸ್ವತ್ತು. ಅದನ್ನ ತೆಗೆಯಿರಿ ಇದನ್ನ ತೆಗೆಯಿರಿ ಅಥವಾ ಇದನ್ನ ಯಾಕೆ ತೆಗೆದಿರಿ ಎಂದು ಪ್ರಶ್ನಿಸಲು ನಮಗೆ ಸಂಬಂಧವಿಲ್ಲ ಎಂದು ಚಿಂತಕ ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.

ಸಾವರ್ಕರ್​​, ಹೆಡ್ಗೇವಾರ್​​ ಸ್ವಾತಂತ್ರ್ಯ ಹೋರಾಟಗಾರರಲ್ಲ ಎನ್ನಲು ಸಾಧ್ಯವಿಲ್ಲ, ದಾಖಲೆ ಒದಗಿಸಲು ನಾನು ಸಿದ್ಧ: ರೋಹಿತ್ ಚಕ್ರತೀರ್ಥ
ಚಿಂತಕ ರೋಹಿತ್ ಚಕ್ರತೀರ್ಥ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 15, 2023 | 9:17 PM

ಶಿವಮೊಗ್ಗ: ಮಕ್ಕಳಲ್ಲಿ ರಾಷ್ಟ್ರೀಯತೆಯನ್ನು ಬೆಳೆಸಲು ದಿಗ್ಗಜರ ಪಾಠ ಸೇರಿಸಿದ್ದೆವು. ಪಠ್ಯವನ್ನು ತೆಗೆಯಲು ಸರ್ಕಾರ ಮುಂದಾದ್ರೆ ಅದಕ್ಕೆ ಅಭ್ಯಂತರವಿಲ್ಲ ಎಂದು ಚಿಂತಕ ರೋಹಿತ್ ಚಕ್ರತೀರ್ಥ (Rohit Chakratirtha) ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಮತ್ತು ಕೇಶವ ಹೆಡ್ಗೇವಾರ್ ಅವರ ಪಾಠ ತೆಗೆಯಲು ಸರ್ಕಾರ ಮುಂದಾಗಿದೆ. ಯಾಕೆ ಅಂತ ಅದನ್ನ ಸರ್ಕಾರಕ್ಕೆ ನೀವು ಕೇಳಬೇಕು. ಇವರು ಸ್ವಾತಂತ್ರ್ಯ ಹೋರಾಟಗಾರರು ಅಲ್ಲ ಎನ್ನಲು ಯಾರಿಗೂ ಸಾಧ್ಯವಿಲ್ಲ. ಅದಕ್ಕೆ ಸೂಕ್ತ ದಾಖಲೆ ಒದಗಿಸಲು ನಾನು ಸಿದ್ದನಿದ್ದೇನೆ. ಮಕ್ಕಳಲ್ಲಿ ರಾಷ್ಟ್ರೀಯತೆಯನ್ನ ಬಳಸಲು ನಮ್ಮ‌ ಪಠ್ಯ ಪುಸ್ತಕ ಪರಿಷ್ಕರಣೆಯಿಂದ ಈ ಇಬ್ಬರು ದಿಗ್ಗಜರ ಪಾಠ ಸೇರಿಸಿದ್ದೆವು. ಈಗ ಅದನ್ನ ಸರ್ಕಾರ ತೆಗೆಯಲು ಮುಂದಾದರೆ ಅದಕ್ಕೆ ಅಭ್ಯಂತರವಿಲ್ಲ ಎಂದಿದ್ದಾರೆ.

ಸರ್ಕಾರ ಸರ್ವ ಸ್ವತಂತ್ರ

ನನ್ನ ಅವಧಿಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ಸರ್ಕಾರಕ್ಕೆ ಶಿಪಾರಸ್ಸು ಮಾಡಿದ ಮೇಲೆ ಅದು ಸರ್ಕಾರದ ಸ್ವತ್ತು. ಅದನ್ನ ತೆಗೆಯಿರಿ ಇದನ್ನ ತೆಗೆಯಿರಿ ಅಥವಾ ಇದನ್ನ ಯಾಕೆ ತೆಗೆದಿರಿ ಎಂದು ಪ್ರಶ್ನಿಸಲು ನಮಗೆ ಸಂಬಂಧವಿಲ್ಲ. ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ಸರ್ಕಾರ ಸರ್ವ ಸ್ವತಂತ್ರ ಎಂದರು.

ಇದನ್ನೂ ಓದಿ: ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಅಂತಿಮ ವರದಿ ಸಿದ್ಧ: ಯಾವ ಪಠ್ಯಗಳಿಗೆ ಬೀಳಲಿದೆ ಕತ್ತರಿ?

ಚರ್ಚೆಗೆ ಆಹ್ವಾನಿಸಿದರೆ ನಾನು ಸಿದ್ದ

ಪರಿಷ್ಕರಣೆ ಮಾಡುವಾಗ ಹಿಂದಿನ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರನ್ನ ಆಹ್ವಾನಿಸಿದ್ದೆವು. ಆಗ ಅವರು ನಮ್ಮ ಆಹ್ವಾನಕ್ಕೆ ಪ್ರತಿಕ್ರಿಯಿಸಿರಲಿಲ್ಲ. ಈಗಿನ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯು ಒಂದು ವೇಳೆ ಚರ್ಚೆಗೆ ಆಹ್ವಾನಿಸಿದರೆ ನಾನು ಸಿದ್ದ. ಪಠ್ಯ ಸೇರಿಸಲು ಸ್ಪಷ್ಟ ಕಾರಣ ಕೊಡಲು ನಾನು ಸಿದ್ದನಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Cabinet Meeting: ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ತೀರ್ಮಾನ, ಪಠ್ಯ ಪರಿಷ್ಕರಣೆಗೆ ಅಸ್ತು ಎಂದ ಸಿದ್ದರಾಮಯ್ಯ ಸಂಪುಟ!

ಪಠ್ಯ ಪರಿಷ್ಕರಣೆಯನ್ನ ಜನ ಸಾಮಾನ್ಯರು ಒಪ್ಪಿಕೊಂಡರೆ ಒಳ್ಳೆಯದು. ಆದರೆ ಸರ್ಕಾರ ಪ್ರಜಾಪ್ರಭುತ್ವದ ರೀತಿಯಲ್ಲಿ ಆಹ್ವಾನಿಸಿದರೆ ನಾನು ಮೌನಿಯಾಗಿರಲ್ಲ. ಪ್ರಜಾಪ್ರಭುತ್ವದ ರೀತಿಯಲ್ಲಿ ಚರ್ಚೆ ನಡೆದರೆ ಅಭ್ಯಂತರವಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:14 pm, Thu, 15 June 23

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು