AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ: ಶರದ್ ಪವಾರ್, ಉದ್ಧವ್ ಠಾಕ್ರೆ ಜತೆ ರಾಹುಲ್ ಚರ್ಚೆ

ಮುಂಬರುವ ಚುನಾವಣೆಗೆ ಎಲ್ಲಾ ಪಕ್ಷಗಳು ಸಜ್ಜಾಗುತ್ತಿರುವಂತೆಯೇ 2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. I.N.D.I.A ಯೊಳಗೆ ತನ್ನ ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆ ಒಪ್ಪಂದಗಳ ಮಾತುಕತೆಗೆ ಕಾಂಗ್ರೆಸ್ ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿದೆ. ವರದಿಗಳ ಪ್ರಕಾರ, ಸೀಟು ಹಂಚಿಕೆ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವ ಬಗ್ಗೆ ರಾಹುಲ್ ಗಾಂಧಿ ಈ ಇಬ್ಬರೂ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ: ಶರದ್ ಪವಾರ್, ಉದ್ಧವ್ ಠಾಕ್ರೆ ಜತೆ ರಾಹುಲ್ ಚರ್ಚೆ
ಉದ್ಧವ್ ಠಾಕ್ರೆ-ರಾಹುಲ್ ಗಾಂಧಿ- ಶರದ್ ಪವಾರ್
Follow us
ರಶ್ಮಿ ಕಲ್ಲಕಟ್ಟ
|

Updated on: Feb 23, 2024 | 1:47 PM

ದೆಹಲಿ ಫೆಬ್ರುವರಿ 23: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗೆ (Samajwadi Party) ಸೀಟು ಒಪ್ಪಂದವನ್ನು ಅಂತಿಮಗೊಳಿಸಿದ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಗುರುವಾರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಶರದ್ ಪವಾರ್ (Sharad Pawar) ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಅವರಿಗೆ ಕರೆ ಮಾಡಿ ಲೋಕಸಭೆಗೆ ಸೀಟು ಹಂಚಿಕೆ ಸೂತ್ರವನ್ನು ಚರ್ಚಿಸಿದ್ದಾರೆ. ವರದಿಗಳ ಪ್ರಕಾರ, ಸೀಟು ಹಂಚಿಕೆ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವ ಬಗ್ಗೆ ಈ ಇಬ್ಬರೂ ನಾಯಕರೊಂದಿಗೆ ಚರ್ಚೆ ನಡೆಸಲಾಯಿತು.

ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ

ಮುಂಬರುವ ಚುನಾವಣೆಗೆ ಎಲ್ಲಾ ಪಕ್ಷಗಳು ಸಜ್ಜಾಗುತ್ತಿರುವಂತೆಯೇ 2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. I.N.D.I.A ಯೊಳಗೆ ತನ್ನ ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆ ಒಪ್ಪಂದಗಳ ಮಾತುಕತೆಗೆ ಕಾಂಗ್ರೆಸ್ ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಹೆಚ್ಚುವರಿಯಾಗಿ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಮ್ಮಿಶ್ರದಲ್ಲಿ ಸೀಟು ಹಂಚಿಕೆ ವಿವಾದಗಳನ್ನು ಪರಿಹರಿಸುವ ಪ್ರಯತ್ನಗಳನ್ನು ಕಾಂಗ್ರೆಸ್ ಚುರುಕುಗೊಳಿಸಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಉನ್ನತ ಮಟ್ಟದ ಸಭೆಯನ್ನು ನಿಗದಿಪಡಿಸಲಾಗಿದೆ. ಎಂವಿಎ ಮೈತ್ರಿಕೂಟವು ಕಾಂಗ್ರೆಸ್, ಎನ್‌ಸಿಪಿ-ಶರದ್ಚಂದ್ರ ಪವಾರ್, ಶಿವಸೇನಾ (ಯುಬಿಟಿ) ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿಯನ್ನು ಒಳಗೊಂಡಿದೆ.

ಫೆಬ್ರವರಿ 27 ರಂದು ಎಂವಿಎ ಸಭೆ ನಡೆಯಲಿದ್ದು, ಹಂಚಿಕೆ ವಿವಾದವು ಫೆಬ್ರವರಿ 28 ರೊಳಗೆ ಸಂಪೂರ್ಣವಾಗಿ ಬಗೆಹರಿಯುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿದೆ. ಎಲ್ಲಾ ಷರತ್ತುಗಳನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ಪಕ್ಷವು ಸಿದ್ಧವಾಗಿದೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ. ತಮ್ಮ ಸಮೀಕ್ಷೆ ಪ್ರಕಾರ ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಪ್ರಬಲ ಸ್ಥಾನದಲ್ಲಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ. ಇದಕ್ಕೂ ಮೊದಲು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಎಂವಿಎ ಒಕ್ಕೂಟದ ಪಕ್ಷಗಳ ನಡುವೆ ಉನ್ನತ ಮಟ್ಟದ ಸಭೆ ನಡೆಸಲಾಯಿತು, ಈ ಸಮಯದಲ್ಲಿ ಎಲ್ಲಾ 48 ಲೋಕಸಭಾ ಸ್ಥಾನಗಳನ್ನು ಪರಿಶೀಲಿಸಲಾಯಿತು.

ಕಾಂಗ್ರೆಸ್ ಮತ್ತು ಸಮಾಜವಾದಿ ಪಾರ್ಟಿ ಮೈತ್ರಿ

ಇಂಡಿಯಾ ಬ್ಲಾಕ್ ಪಾಲುದಾರರಾದ ಸಮಾಜವಾದಿ ಪಕ್ಷ (SP) ಮತ್ತು ಕಾಂಗ್ರೆಸ್ ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಮುಂಬರುವ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆಯನ್ನು ಬುಧವಾರ ಅಂತಿಮಗೊಳಿಸಿವೆ. ಸಮಾಜವಾದಿ ಪಕ್ಷ ಮತ್ತು ಇತರ ಮೈತ್ರಿ ಪಾಲುದಾರರು 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್‌ಗೆ 17 ಸೀಟು ಹಂಚಿಕೆ ಮಾಡಲಾಗಿದೆ.

ಸೀಟು ಹಂಚಿಕೆ ನಿರ್ಧಾರದ ಕುರಿತು ಮಾತನಾಡಿದ ಕಾಂಗ್ರೆಸ್ ಉತ್ತರ ಪ್ರದೇಶದ ಉಸ್ತುವಾರಿ ಅವಿನಾಶ್ ಪಾಂಡೆ, “ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸುತ್ತದೆ. ಉಳಿದ 63 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳನ್ನು ಹೊಂದಲು ನಿರ್ಧರಿಸಲಾಗಿದೆ ಎಂದು ಹೇಳಲು ನನಗೆ ಸಂತೋಷವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸಮಾಜವಾದಿ ಪಕ್ಷ ತೊರೆದು ಹೊಸ ಪಕ್ಷ ಆರಂಭಿಸಿದ ಸ್ವಾಮಿ ಪ್ರಸಾದ್ ಮೌರ್ಯ 

ವರದಿಗಳ ಪ್ರಕಾರ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಮಾತುಕತೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಲೂಪ್‌ನಲ್ಲಿ ಇಟ್ಟುಕೊಂಡು ಅಖಿಲೇಶ್ ಯಾದವ್ ಅವರೊಂದಿಗೆ ಮಾತುಕತೆ ಆರಂಭಿಸಿದ್ದು ಪ್ರಿಯಾಂಕಾ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷವು ಆರಂಭದಲ್ಲಿ ಮೊರಾದಾಬಾದ್ ಸ್ಥಾನದ ಬೇಡಿಕೆ ಇಟ್ಟಿತ್ತು. ಆದಾಗ್ಯೂ, ಮೈತ್ರಿಯ ಒಗ್ಗಟ್ಟನ್ನು ಉಳಿಸಿಕೊಳ್ಳುವ ಸಲುವಾಗಿ ಆಮೇಲೆ ಅದಕ್ಕಾಗಿ ಪಟ್ಟು ಹಿಡಿದಿಲ್ಲ ಎಂದು ಹೇಳಲಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ