ದೆಹಲಿ ಫೆಬ್ರುವರಿ 23: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗೆ (Samajwadi Party) ಸೀಟು ಒಪ್ಪಂದವನ್ನು ಅಂತಿಮಗೊಳಿಸಿದ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಗುರುವಾರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಶರದ್ ಪವಾರ್ (Sharad Pawar) ಮತ್ತು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಅವರಿಗೆ ಕರೆ ಮಾಡಿ ಲೋಕಸಭೆಗೆ ಸೀಟು ಹಂಚಿಕೆ ಸೂತ್ರವನ್ನು ಚರ್ಚಿಸಿದ್ದಾರೆ. ವರದಿಗಳ ಪ್ರಕಾರ, ಸೀಟು ಹಂಚಿಕೆ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವ ಬಗ್ಗೆ ಈ ಇಬ್ಬರೂ ನಾಯಕರೊಂದಿಗೆ ಚರ್ಚೆ ನಡೆಸಲಾಯಿತು.
ಮುಂಬರುವ ಚುನಾವಣೆಗೆ ಎಲ್ಲಾ ಪಕ್ಷಗಳು ಸಜ್ಜಾಗುತ್ತಿರುವಂತೆಯೇ 2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. I.N.D.I.A ಯೊಳಗೆ ತನ್ನ ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆ ಒಪ್ಪಂದಗಳ ಮಾತುಕತೆಗೆ ಕಾಂಗ್ರೆಸ್ ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಹೆಚ್ಚುವರಿಯಾಗಿ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಮ್ಮಿಶ್ರದಲ್ಲಿ ಸೀಟು ಹಂಚಿಕೆ ವಿವಾದಗಳನ್ನು ಪರಿಹರಿಸುವ ಪ್ರಯತ್ನಗಳನ್ನು ಕಾಂಗ್ರೆಸ್ ಚುರುಕುಗೊಳಿಸಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಉನ್ನತ ಮಟ್ಟದ ಸಭೆಯನ್ನು ನಿಗದಿಪಡಿಸಲಾಗಿದೆ. ಎಂವಿಎ ಮೈತ್ರಿಕೂಟವು ಕಾಂಗ್ರೆಸ್, ಎನ್‌ಸಿಪಿ-ಶರದ್ಚಂದ್ರ ಪವಾರ್, ಶಿವಸೇನಾ (ಯುಬಿಟಿ) ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿಯನ್ನು ಒಳಗೊಂಡಿದೆ.
ಫೆಬ್ರವರಿ 27 ರಂದು ಎಂವಿಎ ಸಭೆ ನಡೆಯಲಿದ್ದು, ಹಂಚಿಕೆ ವಿವಾದವು ಫೆಬ್ರವರಿ 28 ರೊಳಗೆ ಸಂಪೂರ್ಣವಾಗಿ ಬಗೆಹರಿಯುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿದೆ. ಎಲ್ಲಾ ಷರತ್ತುಗಳನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ಪಕ್ಷವು ಸಿದ್ಧವಾಗಿದೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ. ತಮ್ಮ ಸಮೀಕ್ಷೆ ಪ್ರಕಾರ ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಪ್ರಬಲ ಸ್ಥಾನದಲ್ಲಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ. ಇದಕ್ಕೂ ಮೊದಲು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಎಂವಿಎ ಒಕ್ಕೂಟದ ಪಕ್ಷಗಳ ನಡುವೆ ಉನ್ನತ ಮಟ್ಟದ ಸಭೆ ನಡೆಸಲಾಯಿತು, ಈ ಸಮಯದಲ್ಲಿ ಎಲ್ಲಾ 48 ಲೋಕಸಭಾ ಸ್ಥಾನಗಳನ್ನು ಪರಿಶೀಲಿಸಲಾಯಿತು.
ಇಂಡಿಯಾ ಬ್ಲಾಕ್ ಪಾಲುದಾರರಾದ ಸಮಾಜವಾದಿ ಪಕ್ಷ (SP) ಮತ್ತು ಕಾಂಗ್ರೆಸ್ ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಮುಂಬರುವ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆಯನ್ನು ಬುಧವಾರ ಅಂತಿಮಗೊಳಿಸಿವೆ. ಸಮಾಜವಾದಿ ಪಕ್ಷ ಮತ್ತು ಇತರ ಮೈತ್ರಿ ಪಾಲುದಾರರು 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್‌ಗೆ 17 ಸೀಟು ಹಂಚಿಕೆ ಮಾಡಲಾಗಿದೆ.
ಸೀಟು ಹಂಚಿಕೆ ನಿರ್ಧಾರದ ಕುರಿತು ಮಾತನಾಡಿದ ಕಾಂಗ್ರೆಸ್ ಉತ್ತರ ಪ್ರದೇಶದ ಉಸ್ತುವಾರಿ ಅವಿನಾಶ್ ಪಾಂಡೆ, “ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸುತ್ತದೆ. ಉಳಿದ 63 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳನ್ನು ಹೊಂದಲು ನಿರ್ಧರಿಸಲಾಗಿದೆ ಎಂದು ಹೇಳಲು ನನಗೆ ಸಂತೋಷವಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ಸಮಾಜವಾದಿ ಪಕ್ಷ ತೊರೆದು ಹೊಸ ಪಕ್ಷ ಆರಂಭಿಸಿದ ಸ್ವಾಮಿ ಪ್ರಸಾದ್ ಮೌರ್ಯ
ವರದಿಗಳ ಪ್ರಕಾರ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಮಾತುಕತೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಲೂಪ್‌ನಲ್ಲಿ ಇಟ್ಟುಕೊಂಡು ಅಖಿಲೇಶ್ ಯಾದವ್ ಅವರೊಂದಿಗೆ ಮಾತುಕತೆ ಆರಂಭಿಸಿದ್ದು ಪ್ರಿಯಾಂಕಾ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪಕ್ಷವು ಆರಂಭದಲ್ಲಿ ಮೊರಾದಾಬಾದ್ ಸ್ಥಾನದ ಬೇಡಿಕೆ ಇಟ್ಟಿತ್ತು. ಆದಾಗ್ಯೂ, ಮೈತ್ರಿಯ ಒಗ್ಗಟ್ಟನ್ನು ಉಳಿಸಿಕೊಳ್ಳುವ ಸಲುವಾಗಿ ಆಮೇಲೆ ಅದಕ್ಕಾಗಿ ಪಟ್ಟು ಹಿಡಿದಿಲ್ಲ ಎಂದು ಹೇಳಲಾಗಿದೆ.
ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ