ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿವೈ ವಿಜಯೇಂದ್ರ, ಸಿಎಂ ಜೊತೆ ಕುಶಲೋಪರಿ
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಅವರು ಹುಚ್ಚರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು.
ಬೆಂಗಳೂರು: ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa)ನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರು ಪ್ರಮಾಣ ವಚನ ಸ್ವೀಕರಿಸಿದರು. ಇಂದು(ಮೇ 23) ವಿಧಾನಸಭೆಯಲ್ಲಿ ಶಿಕಾರಿಪುರದ ನೂತನ ಶಾಸಕ ಬಿ.ವೈ. ವಿಜಯೇಂದ್ರ ಅವರು ಹುಚ್ಚೂರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿರುವ ವಿಜಯೇಂದ್ರ, ಎಲ್ಲಾ ಪಕ್ಷದ ನಾಯಕರನ್ನು ಭೇಟಿ ಮಾಡಿ ಕೈಕುಲುಕಿದರು. ಇನ್ನು ವಿಧಾನಸಭೆಯಲ್ಲಿ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಇದೇ ವೇಳೆ ಸಿದ್ದರಾಮಯ್ಯ ಸಹ ವಿಜಯೇಂದ್ರ ಅವರಿಗೆ ಶುಭಾಶಯ ಕೋರಿದರು. ಶಾಸಕನಾಗಿ ಆಯ್ಕೆಯಾಗಿ ಬಂದಿದ್ದಕ್ಕೆ ಶುಭಾಶಯ ಹೇಳಿದ ಸಿದ್ದರಾಮಯ್ಯ, ನಿಮ್ಮ ತಂದೆ(ಬಿಎಸ್ ಯಡಿಯೂರಪ್ಪ) ಫೋನ್ ಮಾಡಿದ್ದರು ಎಂದರು. ಹೌದು, ನಾನೇ ನೇರವಾಗಿ ಭೇಟಿ ಮಾಡುತ್ತೇನೆ ಎಂದು ಸುಮ್ಮನಾದೆ ಎಂದ ವಿಜಯೇಂದ್ರ ಹೇಳಿದರು.
#WATCH | Karnataka | Senior BJP leader BS Yediyurappa’s son and party MLA BY Vijayendra meets CM Siddaramaiah, minister KH Muniyappa and other leaders at Vidhana Soudha in Bengaluru. pic.twitter.com/t5FcDLK0hk
— ANI (@ANI) May 23, 2023
ಇಂದು ಪ್ರಮಾಣವಚನ ಸ್ವೀಕರಿಸಲು ವಿಧಾನಸೌಧಕ್ಕೆ ಆಗಮಿಸಿದ ವಿಜಯೇಂದ್ರ ಒಳ ಪ್ರವೇಶಿಸುವ ಮುನ್ನ ಶಕ್ತಿಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿದರು. ಬಳಿಕ ವಿಧಾನಸಭೆ ಪ್ರವೇಶಿಸಿ, ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಶಿಕಾರಿಪುರ ಕ್ಷೇತ್ರವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿನಿಧಿಸುತ್ತಿದ್ದರು. ಆದರೆ, ಚುನಾವಣಾ ರಾಜಕೀಯದಿಂದ ಬಿಎಸ್ವೈ ನಿವೃತ್ತಿ ಪಡೆದುಕೊಂಡು ಪುತ್ರ ವಿಜಯೇಂದ್ರ ಅವರಿಗೆ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಅದರಂತೆ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವಿಜಯೇಂದ್ರ ಸುಮಾರು 11,008 ಮತಗಳ ಅಂತರದಿಂದ ಗೆದ್ದು ವಿಧಾನಸಭೆಗೆ ಪ್ರವೇಶಿಸಿದ್ದಾರೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 12:58 pm, Tue, 23 May 23