AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಗಂಗಾ ಮಠದಲ್ಲೇ ಇಂದು ತಮ್ಮ ರಾಜಕೀಯ ನಿರ್ಧಾರ ಘೋಷಿಸುತ್ತಾರಾ ಸೋಮಣ್ಣ?

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ. ಸೋಮಣ್ಣ ಡಿಸೆಂಬರ್ 6ರ ನಂತರ ತಮ್ಮ ನಿರ್ಧಾರ ಘೋಷಿಸಿಸುವುದಾಗಿ ಹೇಳಿದ್ದ ಹೇಳಿದ್ದು, ಇದೀಗ ಆ ದಿನ ಬಂದೇ ಬಿಟ್ಟಿದೆ. ಅವರು ಇಂದು ಸಿದ್ಧಗಂಗಾ ಮಠದಲ್ಲಿ ಗುರುಭವನ ಉದ್ಘಾಟನೆ ಮಾಡಿ ಬಳಿಕ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಅವರ ಮುಂದಿನ ರಾಜಕೀಯ ನಡೆ ಏನು ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದಗಂಗಾ ಮಠದಲ್ಲೇ ಇಂದು ತಮ್ಮ ರಾಜಕೀಯ ನಿರ್ಧಾರ ಘೋಷಿಸುತ್ತಾರಾ ಸೋಮಣ್ಣ?
ವಿ ಸೋಮಣ್ಣ
ರಮೇಶ್ ಬಿ. ಜವಳಗೇರಾ
|

Updated on: Dec 06, 2023 | 7:49 AM

Share

ಬೆಂಗಳೂರು/ತುಮಕೂರು, (ಡಿಸೆಂಬರ್ 06): ವಿಧಾನಸಭೆ ಚುನಾವಣೆ ಬಳಿಕ ಪಕ್ಷದ ಮೇಲೆ ಮುನಿಸಿಕೊಂಡಿರುವ ವಿ ಸೋಮಣ್ಣ(V Somanna) ಡಿಸೆಂಬರ್ 6 ನಂತರ ತಮ್ಮ ನಡೆ ಘೋಷಿಸುವುದಾಗಿ ಹೇಳಿದ್ದರು. ಇದೀಗ ಆ ದಿನಗಳು ಬಂದಿದ್ದು, ಇಂದು ಸಿದ್ಧಗಂಗಾ ಮಠದಲ್ಲಿ(siddaganga matha) ತಾವು ನಿರ್ಮಿಸಿರುವ ಗುರುಭವನವನ್ನು ಇಂದು (ಡಿಸೆಂಬರ್ 06) ಉದ್ಘಾಟನೆ ಮಾಡಲಿದ್ದಾರೆ. ಸಿದ್ಧಗಂಗಾ ಮಟದಲ್ಲಿ ನಡೆಯಲಿರುವ ಈ ಉದ್ಘಾಟನಾ ಕಾರ್ಯಕ್ರಮದಲ್ಲೇ ಸೋಮಣ್ಣ ಅವರು ತಮ್ಮ ಮುಂದಿನ ರಾಜಕೀಯ ನಡೆ ಘೋಷಣೆ ಮಾಡಲಿದ್ದಾರಾ ಎನ್ನುವ ಕುತೂಹಲ ಮೂಡಿಸಿದೆ.

ತುಮಕೂರಿನ ಸಿದ್ಧಗಂಗಾ ಮಠದ ಹಳೇ ಮಠದ ಆವರಣದಲ್ಲಿ ಸೋಮಣ್ಣ ಅವರು ತಮ್ಮ ಸ್ವಂತ ಖರ್ಚಿನಲ್ಲೇ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಗುರುಭವನ ನಿರ್ಮಿಸಿದ್ದು, ಇಂದು ಬೆಳಗ್ಗೆ 10.30ಕ್ಕೆ ಅವರೇ ಲೋಕಾರ್ಪಣೆ ಮಾಡಲಿದ್ದಾರೆ. ಲಿಂಗೈಕ್ಯ ಶಿವಕುಮಾರಸ್ವಾಮೀಜಿ ಗದ್ದುಗೆ ಪಕ್ಕದಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ದೇಗುಲ ಮಠದ ಮುಮ್ಮಡಿ ನಿರ್ವಾಣ ಶ್ರೀಗಳು, ಗೃಹ ಸಚಿವ ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, MLC ರಾಜೇಂದ್ರ ಸೇರಿದಂತೆ ಇತರೆ ನಾಯಕರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಡಿ. 6ರ ನಂತರ ನನ್ನ ಮನಸ್ಸಿ‌ನ ಭಾವನೆ ಹೇಳುತ್ತೇನೆ: ಸಂಚಲನ ಮೂಡಿಸಿದ ಸೋಮಣ್ಣ ನಡೆ

ಕಾರ್ಯಕ್ರಮ ಮುಗಿಸಿಕೊಂಡು ದೆಹಲಿಗೆ

ಇಂದು ಕಾರ್ಯಕ್ರಮದ ನಂತರ ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಸೋಮಣ್ಣ ಹೇಳಿದ್ದು, ಗುರುಭವನ ಉದ್ಘಾಟನೆ ಬಳಿಕ ದೆಹಲಿಗೆ ತೆರಳಲಿದ್ದಾರೆ. ಕೇವಲ ಸೋಮಣ್ಣ ಮಾತ್ರವಲ್ಲದೇ ಅವರ ಜೊತೆಗೆ ಇನ್ನುಳಿದ ಅಸಮಾಧಾನಿತ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಅರವಿಂದ್ ಲಿಂಬಾವಳಿ, ರಮೇಶ್ ಜಾರಕಿಹೊಳಿ ಸಹ ದೆಹಲಿಗೆ ಪಯಾಣ ಬೆಳೆಸಲಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸೋಮಣ್ಣ ನಡೆ ರಾಜ್ಯ ರಾಜಕಾರನದಲ್ಲಿ ಸಂಚಲನ ಮೂಡಿಸಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತಾರಾ ಸೋಮಣ್ಣ?

ಇನ್ನು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸ್ವತಃ ತಾವೇ ನಿರ್ಮಿಸಿರುವ ಗುರುಭವನ ಉದ್ಘಾಟನೆಗೆ ಕಾಂಗ್ರೆಸ್​ ನಾಯಕರನ್ನು ಆಹ್ವಾನಿಸಿದ್ದಾರೆ. ಅಲ್ಲದೇ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​​ನಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ವಿ.ಸೋಮಣ್ಣ ತುಮಕೂರು ಮೇಲೆ ಕಣ್ಣಿಟ್ಟಿರುವುದು ಇದೇ ಮೊದಲಲ್ಲ. ವಿಧಾನಸಭೆ ಚುನಾವಣೆಗೆ ಗುಬ್ಬಿ ವಿಧಾನಸಭಾ ಕ್ಷೇತ್ರದಿಂದ ಪುತ್ರ ಅರುಣ್‌ ಸೋಮಣ್ಣ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆಯೂ ಗಂಭೀರ ಚರ್ಚೆ ನಡೆದಿತ್ತು. ಆದರೆ ಅದು ಫಲಪ್ರದವಾಗಿರಲಿಲ್ಲ. ಈಗ ಸ್ವತಃ ಸೋಮಣ್ಣ ಕಾಂಗ್ರೆಸ್‌ ಮೂಲಕ ಜಿಲ್ಲೆ ಪ್ರವೇಶಿಸುವ ಉತ್ಸಾಹದಲ್ಲಿದ್ದಾರೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗೆ ಪೂರಕ ಸನ್ನಿವೇಶ ಸೃಷ್ಟಿಯಾಗುತ್ತಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More