Congress: ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ನೇಮಕ

| Updated By: ganapathi bhat

Updated on: Jan 25, 2022 | 1:18 PM

Karnataka Congress: ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Congress: ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ನೇಮಕ
ಎಂ.ಬಿ ಪಾಟೀಲ್
Follow us on

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ವಿಧಾನಸಭಾ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇರುವಂತೆ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದ್ದು ಕಾಂಗ್ರೆಸ್ ಚುನಾವಣಾ ಕಣಕ್ಕೆ ಭರ್ಜರಿ ಉತ್ಸಾಹದಲ್ಲಿ ಪೈಪೋಟಿಗೆ ಮುನ್ನುಗ್ಗುವಂತೆ ಕಂಡಿದೆ. ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ ಪಾಟೀಲ್ ಅವರನ್ನು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡುವುದಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಮಂಗಳವಾರ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. 

ಎಂ.ಬಿ ಪಾಟೀಲ್ (ಮಲ್ಲನಗೌಡ ಬಸನಗೌಡ ಪಾಟೀಲ) ಈ ಹಿಂದೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವಾರಗಿ ಕೆಲಸ ಮಾಡಿದ್ದರು. ಹೆಚ್.ಡಿ ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ತಮ್ಮ 27ನೇ ವಯಸ್ಸಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ ಎಂ.ಬಿ. ಪಾಟೀಲ್ ಮುಂದೆ ಲೋಕಸಭೆ ಸದಸ್ಯರಾಗಿಯೂ ಆಯ್ಕೆ ಆಗಿದ್ದರು.

2008, 2013, 2018 ರಲ್ಲಿ ಸತತ ಮೂರು ಬಾರಿ ವಿಜಯಪುರದ ಬಬಲೇಶ್ವರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿರುವ ಪಾಟೀಲ್​ಗೆ ಲೋಕಸಭೆ, ವಿಧಾನಸಭೆ ಹಾಗೂ ಸಚಿವ ಸ್ಥಾನದ ಜವಾಬ್ದಾರಿ ವಹಿಸಿರುವ ಅನುಭವವೂ ಇದೆ. ಉದ್ಯಮಿಯೂ ಆಗಿರುವ ಇವರು ವಿಜಯಪುರ ಭಾಗದಲ್ಲಿ ಪ್ರಭಾವಿ ಧುರೀಣರಾಗಿ ಗುರುತಿಸಿಕೊಂಡಿದ್ದಾರೆ.

ಎಂ.ಬಿ ಪಾಟೀಲ್ ರಾಜಕೀಯದಲ್ಲಿ ಪ್ರಬಲವಾಗಿರುವ ಲಿಂಗಾಯತ ಸಮುದಾಯದವರು. ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ಒಕ್ಕಲಿಗ ಸಮುದಾಯದ ಡಿ.ಕೆ. ಶಿವಕುಮಾರ್ ಇದ್ದಾರೆ. ಕೆಪಿಸಿಸಿ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಆರ್. ಧ್ರುವನಾರಾಯಣ ಇದ್ದಾರೆ. ವೋಟ್ ಬ್ಯಾಂಕ್, ಜಾತಿ ಲೆಕ್ಕಾಚಾರದಂತೆ ಗಮನಿಸಿದರೂ ಕಾಂಗ್ರೆಸ್ ಪಕ್ಷ, ಲಿಂಗಾಯತ ಸಮುದಾಯದ ಎಂ.ಬಿ ಪಾಟೀಲ್​ಗೆ ಪ್ರಚಾರ ಸಮಿತಿ ನೇತೃತ್ವ ನೀಡಿದೆ.

ಇದನ್ನೂ ಓದಿ: ಕಾಂಗ್ರೆಸ್​ ಸೇರಿದ ತಂಗಿ ಪರ ಪ್ರಚಾರಕ್ಕೆ ಇಳಿದ ಸೋನು ಸೂದ್​; ನೀವು ಮಾತು ತಪ್ಪಿದಿರಿ ಎಂದ ಫ್ಯಾನ್ಸ್​

ಇದನ್ನೂ ಓದಿ: ಬಾಗಲಕೋಟೆ ಜಿಲ್ಲೆ ಬಾದಾಮಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ; ಗದಗ-ಬೆಟಗೇರಿ ನಗರಸಭೆ ಬಿಜೆಪಿ ಪಾಲು

Published On - 12:52 pm, Tue, 25 January 22