ಇದು ಜನರ ಭಾವನೆ, ತಮ್ಮ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಂಸದ ಡಿಕೆ ಸುರೇಶ್​​​

ಗುರುವಾರ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡನೆ ಮಾಡಿತು. ಈ ಬಜೆಟ್​​ ಅನ್ನು ಟೀಕಿಸುವ ಬರದಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ "ಕೇಂದ್ರದ ಬಜೆಟ್‌ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಹೇಳಿದ್ದರು. ತಮ್ಮ ಹೇಳಿಕೆಗೆ ಇಂದು (ಫೆ.02) ಸ್ಪಷ್ಟನೆ ನೀಡಿದ್ದಾರೆ.

ಇದು ಜನರ ಭಾವನೆ, ತಮ್ಮ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಂಸದ ಡಿಕೆ ಸುರೇಶ್​​​
ಸಂಸದ ಡಿಕೆ ಸುರೇಶ್​
Follow us
|

Updated on:Feb 02, 2024 | 1:52 PM

ಬೆಂಗಳೂರು, ಫೆಬ್ರವರಿ 02: ಕಾಂಗ್ರೆಸ್ (Congress) ಸಂಸದ ಡಿಕೆ ಸುರೇಶ್ (DK Suresh) ಅವರ ಪ್ರತ್ಯೇಕ ರಾಷ್ಟ್ರ (Separate Nation) ಹೇಳಿಕೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ (Politics) ಸಾಕಷ್ಟು ಚರ್ಚೆಯಾಗುತ್ತಿದೆ. ಇನ್ನು ತಾವು ನೀಡಿರುವ ಹೇಳಿಕೆಗೆ ಸ್ಪಷ್ಟನೆ ನೀಡಿದ ಡಿಕೆ ಸುರೇಶ್​ “ಜನರ ಭಾವನೆಗಳನ್ನು ಹೇಳಿದ್ದೇನೆಯೇ ಹೊರತು ಬೇರೇನೂ ಹೇಳಿಲ್ಲ” ಎಂದು ಹೇಳಿದ್ದಾರೆ. ಇನ್ನು ನನ್ನ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಕನ್ನಡ ಧ್ವಜಕ್ಕೆ ಸ್ಥಾನಮಾನ ನೀಡುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದರೂ ಉತ್ತರ ಬಂದಿಲ್ಲ ಎಂದರು.

ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡಿದ್ದರೂ ಬೇರೆ ಭಾಷೆಗಳಿಗೆ ಕೊಟ್ಟ ಹಣ ನಮಗೆ ನೀಡಿಲ್ಲ. ನೀರಿನ ಸಮಸ್ಯೆ ಬಂದಾಗ ಕೇಂದ್ರ ಯಾವುದೇ ನಿಲುವು ತಳೆಯಲು ವಿಫಲವಾಗಿದೆ. ಹಲವಾರು ನೀರಾವರಿ ಯೋಜನೆಗಳು ಬಾಕಿ ಇವೆ. ಬಿಜೆಪಿಯವರು ಈ ವಿಷಯಗಳ ಬಗ್ಗೆ ಮಾತನಾಡುವ ಬದಲು ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದ್ದಾರೆ ಎಂದು ಆರೋಪಿಸಿದರು.

ಡಿಕೆ ಸುರೇಶ್​ ಹೇಳಿದ್ದೇನು?

ಗುರುವಾರ (ಫೆ. 01) ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡನೆ ಮಾಡಿತು. ಈ ಬಜೆಟ್​​ ಅನ್ನು ಟೀಕಿಸುವ ಬರದಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ “ಕೇಂದ್ರದ ಬಜೆಟ್‌ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ. ದಕ್ಷಿಣ ಭಾರತದವರು ಧ್ವನಿ ಎತ್ತಬೇಕಾಗುತ್ತದೆ” ಎಂದು ಸುರೇಶ್ ಹೇಳಿದ್ದರು. ಈ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಡಿಕೆ ಸುರೇಶ್​ ಅವರ ಮೇಲೆ ಮುಗಿಬಿದ್ದಾರೆ. ಕಾಂಗ್ರೆಸ್​ ಪಕ್ಷ ಮತ್ತು ಸಂಸದ ಡಿಕೆ ಸುರೇಶ್ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: ಡಿಕೆ ಸುರೇಶ್ ದೇಶ ವಿಭಜನೆ ಹೇಳಿಕೆ: ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ ಎಂದ ಕುಮಾರಸ್ವಾಮಿ

ಅಸಮಾಧಾನ ವ್ಯಕ್ತಪಡಿಸಿದ ಮಲ್ಲಿಕಾರ್ಜುನ ಖರ್ಗೆ

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ಆದಾಗ್ಯೂ, ಲೋಕಸಭೆ ಸಂಸದ (ಡಿ.ಕೆ.ಸುರೇಶ್) ಹಾಗೆ ಹೇಳಿಲ್ಲ ಎಂದು ಹೇಳಿದ್ದು, ಅದನ್ನು ಚರ್ಚಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಲೋಕಸಭೆ, ರಾಜ್ಯಸಭೆಯಲ್ಲಿ ಖಂಡನೆ

ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ಖಂಡನೆ ವ್ಯಕ್ತವಾಗಿದೆ. ಸಂಸದ ಡಿ.ಕೆ.ಸುರೇಶ್​ ದೇಶವಿಭಜನೆ ಹೇಳಿಕೆಗೆ ಬಿಜೆಪಿ ಖಂಡಿಸುತ್ತೇನೆ. ದೇಶದ ಏಕತೆ, ಸಾರ್ವಭೌಮತ್ವದ ಬಗ್ಗೆ ಯಾರೂ ಮಾತನಾಡಬಾರದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Fri, 2 February 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!