ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಬಂದಿಲ್ಲ ಅಧಿಕೃತ ಮಾಹಿತಿ: ಗೃಹಜ್ಯೋತಿ ಯೋಜನೆಗೆ ಬೇಕು ಕಾಲಾವಕಾಶ

ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಆದರೆ ಸೇವಾಸಿಂಧುವಿನಲ್ಲಿ ಅಪ್ಲಿಕೇಶನ್ ಹಾಕಲು ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಬಂದಿಲ್ಲ ಅಧಿಕೃತ ಮಾಹಿತಿ: ಗೃಹಜ್ಯೋತಿ ಯೋಜನೆಗೆ ಬೇಕು ಕಾಲಾವಕಾಶ
ಪ್ರಾತಿನಿಧಿಕ ಚಿತ್ರ
Follow us
|

Updated on:Jun 06, 2023 | 4:12 PM

ಬೆಂಗಳೂರು: ಕಾಂಗ್ರೆಸ್​ ಸರ್ಕಾರ ಗೃಹಜ್ಯೋತಿ ಯೋಜನೆ (Gruha Jyothi Scheme) ಅಡಿಯಲ್ಲಿ ಪ್ರತಿ ಮನೆಗೆ 200 ಯುನಿಟ್​ವರೆಗೆ ಉಚಿತ ವಿದ್ಯುತ್ ಅನ್ನು ನೀಡಲಾಗುತ್ತಿದ್ದು, ಇದಕ್ಕೆ ಸೋಮವಾರದಂದು ಹೊಸ ಷರತ್ತುಗಳನ್ನು ವಿಧಿಸಿ ಆದೇಶ ಹೊರಡಿಸಿತ್ತು. ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಅರ್ಜಿ ಸಲ್ಲಿಸಲು ಅಪ್ಲಿಕೇಶನ್ ಓಪನ್ ಆಗುತ್ತಿಲ್ಲ ಎಂದು ಸೈಬರ್ ಆಪರೇಟರ್ಸ್ ಹೇಳುತ್ತಿದ್ದಾರೆ. ಹಾಗಾಗಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು ಕಾಲವಕಾಶಬೇಕಿದೆ.

ಸರ್ಕಾರ ಪೋರ್ಟಲ್ ಐಡಿ ಕೊಟ್ಟ ತಕ್ಷಣವೇ ಅರ್ಜಿ ಸ್ವೀಕಾರವಾಗಲಿದೆ ಎಂದು ಆಪರೇಟರ್ಸ್ ಹೇಳುತ್ತಿದ್ದಾರೆ. ಸೇವಾಸಿಂಧುವಿನಲ್ಲಿ ಅಪ್ಲಿಕೇಶನ್ ಹಾಕಲು ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಸರ್ಕಾರದಿಂದ ಪೋರ್ಟಲ್ ಡೀಟೇಲ್ಸ್ ಬಂದ ತಕ್ಷಣವೇ ಅರ್ಜಿ ಸ್ವೀಕೃತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿಗೆ ಹೊಸ ನಿಬಂಧನೆ, ಉಚಿತ ವಿದ್ಯುತ್​ಗಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು ಸೂಚನೆ

ಸೇವಾಸಿಂಧು ಆಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?

ಗೃಹಜ್ಯೋತಿ ಯೋಜನೆ ಪಡೆದುಕೊಳ್ಳಬಹಸುವವರು ಸೇವಾಸಿಂಧು ಆಪ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಿದವರಿಗಷ್ಟೇ 200 ಯುನಿಟ್​ವರೆಗೆ ವಿದ್ಯುತ್ ಉಚಿತವಾಗಿ ಸಿಗಲಿದೆ.

ಜುಲೈ 1 ರಿಂದ ಗೃಹ ಜ್ಯೋತಿ ಯೋಜನೆ ಜಾರಿ

ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಯಾಗಲಿದೆ. ಆರಂಭದಲ್ಲಿ ಎಲ್ಲರಿಗೂ 200 ಯುನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದರೂ ಸರ್ಕಾರ ರಚನೆಯಾದ ನಂತರ ಗ್ರಾಹಕರು ಹಿಂದೆ ಬಳಕೆ ಮಾಡುತ್ತಿದ್ದ ವಿದ್ಯುತ್ ಪ್ರಮಾಣದ ಆಧಾರದ ಮೇಲೆ ವಿದ್ಯುತ್ ಉಚಿತ ಇರಲಿದೆ ಎಂದು ಷರತ್ತು ವಿಧಿಸಿತು.

ಇದನ್ನೂ ಓದಿ: Gruha Jyothi scheme: ಗೃಹಜ್ಯೋತಿ ಯೋಜನೆ ಅಡಿ ವಿದ್ಯುತ್ ಬಿಲ್ ಲೆಕ್ಕಾಚಾರ ಹೇಗೆ? ಇಲ್ಲಿದೆ ಸ್ಪಷ್ಟ ಚಿತ್ರಣ

ಅಲ್ಲದೆ, 12 ತಿಂಗಳ ಸರಾಸರಿ ವಿದ್ಯುತ್ ಬಳಕೆಗೆ ಶೇ 10 ರಷ್ಟು ಹೆಚ್ಚುವರಿ ಯೂನಿಟ್ ಸೇರಿಸಿ ಯೋಜನೆಯ ಪ್ರಯೋಜನ ಒದಗಿಸಲಾಗವುದು ಎಂದು ಹೇಳಿದೆ. ಈ ರೀತಿ 200 ಯೂನಿಟ್‌ಗಳವರೆಗಿನ ಬಳಕೆಗೆ ಶುಲ್ಕದ ವಿನಾಯಿತಿ ನೀಡಲಾಗುತ್ತದೆ. ಜುಲೈವರೆಗೆ ಯಾವುದೇ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿದ್ದರೆ ಅದನ್ನು ಪಾವತಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:11 pm, Tue, 6 June 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್