AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾನಂದ ಗೌಡ ಸೇರಿ ಏಳೆಂಟು ಸಂಸದರು ಚುನಾವಣಾ ಅಖಾಡದಿಂದ ಹಿಂದಕ್ಕೆ: ಬಸನಗೌಡ ಪಾಟೀಲ್ ಯತ್ನಾಳ್

ಲೋಕಸಭೆ ಚುನಾವಣೆ 2024ಕ್ಕೆ ಆಡಳಿತರೂಢ ಬಿಜೆಪಿ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದ್ದು, ನಾಯಕರನ್ನು ಸಮನ್ವಯ ಸಾಧಿಸಲು ಸಭೆಗಳನ್ನು ನಡೆಸುತ್ತಿದೆ. ಈ ನಡುವೆ ಟಿಕೆಟ್ ಹಂಚಿಕೆ ಬಗ್ಗೆ ಮಾತನಾಡಿದ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ಸದಾನಂದ ಗೌಡ, ದಾವಣಗೆರೆ ಸಿದ್ದೇಶ್ವರ ಸೇರಿದಂತೆ ಏಳರಿಂದ ಎಂಟು ಸಂಸದರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದಾರೆ ಎಂದರು.

ಸದಾನಂದ ಗೌಡ ಸೇರಿ ಏಳೆಂಟು ಸಂಸದರು ಚುನಾವಣಾ ಅಖಾಡದಿಂದ ಹಿಂದಕ್ಕೆ: ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸದಾನಂದ ಗೌಡ
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on: Sep 01, 2023 | 4:32 PM

Share

ವಿಜಯಪುರ, ಸೆ.1: ಲೋಕಸಭಾ ಚುನಾವಣೆ 2024ರ (Loka Sabha Elections 2024) ಟಿಕೆಟ್ ಹಂಚಿಕೆಯಲ್ಲಿನ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಈ ಕುರಿತು ನನಗೆ ಮಾಹಿತಿ ಇಲ್ಲ. ನನ್ನ ಮಾಹಿತಿಯ ಪ್ರಕಾರ ಸದಾನಂದ ಗೌಡ (Sadananda Gowda) ಸೇರಿದಂತೆ ಏಳರಿಂದ ಎಂಟು ಜನ ಸಂಸದರು ಚುನಾವಣಾ ಕಣದಿಂದ ಹಿಂದೆ ಸರಿಯಲಿದ್ದಾರೆ ಎಂದರು.

ತಾವಾಗಿ ಸ್ವಯಂಪ್ರೇರಣೆಯಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸದಾನಂದ ಗೌಡ, ದಾವಣಗೆರೆ ಸಿದ್ದೇಶ್ವರ, ಹಾವೇರಿಯ ಉದಾಸಿಯವರು ಸೇರಿದಂತೆ ಕೆಲವರು ಸ್ವಯಂ ಪ್ರೇರಣೆಯಿಂದ ಹಿಂದೆ ಸರಿಯಲಿದ್ದಾರೆ. ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಅವರು ಹಿಂದೆ ಸರಿಯುತ್ತಿದ್ದಾರೆ ಎಂದರು.

ಇದನ್ನೂ ಓದಿ: ಗ್ಯಾರಂಟಿಗಳ ಅನುಷ್ಠಾನದ ಭರದಲ್ಲಿ ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿದೆ: ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

ವಿಜಯಪುರ ಲೋಕಸಭಾ ಟಿಕೆಟ್ ವಿಚಾರವಾಗಿ ಮಾತನಾಡಿದ ಶಾಸಕ ಯತ್ನಾಳ್, ಹಾಲಿ ಸಂಸದರು ನನಗೆ ಟಿಕೆಟ್ ಸಿಗುತ್ತದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಹಾಗೆ ಹೇಳಿಕೆ ನೀಡಬೇಕಾಗುತ್ತದೆ. ಈ ಹಿಂದೆ ಕೂಡ ನನಗೂ ಟಿಕೆಟ್ ಇಲ್ಲ ಎಂದು ಸುದ್ದಿ ಹರಡಲಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯತ್ನಾಳ್​ಗೆ ಟಿಕೆಟ್ ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ನನಗೆ ಟಿಕೆಟ್ ಸಿಗುತ್ತದೆ ಎಂದು ನಾನು ಹೇಳುತ್ತಿದ್ದೆ. ಹಾಗೆ ಹಾಲಿ ಸಂಸದರೂ ಕೂಡ ನನಗೆ ಟಿಕೆಟ್ ಸಿಗುತ್ತದೆ ಎಂದು ಹೇಳುತ್ತಿದ್ದಾರೆ. ಅದರಲ್ಲಿ ತಪ್ಪಿಲ್ಲ ಎಂದರು.

ಹಾಲಿ ಸಂಸದರು ಶಕ್ತಿವಂತರು, ಹಿರಿಯರೂ ಆಗಿದ್ದಾರೆ. ಹಾಲಿ ಸಂಸದರು ಬಿಜೆಪಿಯ ನಿಯಮಗಳ ಪ್ರಕಾರ 75ರ ಅಂಡರ್ ಏಜ್​ನಲ್ಲಿದ್ದಾರೆ. ನಮ್ಮಲ್ಲಿ ಯಾರಿಗೆ ಟಿಕೆಟ್ ನೀಡಿದರೂ ನಮ್ಮ ವಿಜಯಪುರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More