ವಿಜಯಪುರ, ಸೆ.1: ಲೋಕಸಭಾ ಚುನಾವಣೆ 2024ರ (Loka Sabha Elections 2024) ಟಿಕೆಟ್ ಹಂಚಿಕೆಯಲ್ಲಿನ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಈ ಕುರಿತು ನನಗೆ ಮಾಹಿತಿ ಇಲ್ಲ. ನನ್ನ ಮಾಹಿತಿಯ ಪ್ರಕಾರ ಸದಾನಂದ ಗೌಡ (Sadananda Gowda) ಸೇರಿದಂತೆ ಏಳರಿಂದ ಎಂಟು ಜನ ಸಂಸದರು ಚುನಾವಣಾ ಕಣದಿಂದ ಹಿಂದೆ ಸರಿಯಲಿದ್ದಾರೆ ಎಂದರು.
ತಾವಾಗಿ ಸ್ವಯಂಪ್ರೇರಣೆಯಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸದಾನಂದ ಗೌಡ, ದಾವಣಗೆರೆ ಸಿದ್ದೇಶ್ವರ, ಹಾವೇರಿಯ ಉದಾಸಿಯವರು ಸೇರಿದಂತೆ ಕೆಲವರು ಸ್ವಯಂ ಪ್ರೇರಣೆಯಿಂದ ಹಿಂದೆ ಸರಿಯಲಿದ್ದಾರೆ. ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಅವರು ಹಿಂದೆ ಸರಿಯುತ್ತಿದ್ದಾರೆ ಎಂದರು.
ವಿಜಯಪುರ ಲೋಕಸಭಾ ಟಿಕೆಟ್ ವಿಚಾರವಾಗಿ ಮಾತನಾಡಿದ ಶಾಸಕ ಯತ್ನಾಳ್, ಹಾಲಿ ಸಂಸದರು ನನಗೆ ಟಿಕೆಟ್ ಸಿಗುತ್ತದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಹಾಗೆ ಹೇಳಿಕೆ ನೀಡಬೇಕಾಗುತ್ತದೆ. ಈ ಹಿಂದೆ ಕೂಡ ನನಗೂ ಟಿಕೆಟ್ ಇಲ್ಲ ಎಂದು ಸುದ್ದಿ ಹರಡಲಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯತ್ನಾಳ್ಗೆ ಟಿಕೆಟ್ ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ನನಗೆ ಟಿಕೆಟ್ ಸಿಗುತ್ತದೆ ಎಂದು ನಾನು ಹೇಳುತ್ತಿದ್ದೆ. ಹಾಗೆ ಹಾಲಿ ಸಂಸದರೂ ಕೂಡ ನನಗೆ ಟಿಕೆಟ್ ಸಿಗುತ್ತದೆ ಎಂದು ಹೇಳುತ್ತಿದ್ದಾರೆ. ಅದರಲ್ಲಿ ತಪ್ಪಿಲ್ಲ ಎಂದರು.
ಹಾಲಿ ಸಂಸದರು ಶಕ್ತಿವಂತರು, ಹಿರಿಯರೂ ಆಗಿದ್ದಾರೆ. ಹಾಲಿ ಸಂಸದರು ಬಿಜೆಪಿಯ ನಿಯಮಗಳ ಪ್ರಕಾರ 75ರ ಅಂಡರ್ ಏಜ್ನಲ್ಲಿದ್ದಾರೆ. ನಮ್ಮಲ್ಲಿ ಯಾರಿಗೆ ಟಿಕೆಟ್ ನೀಡಿದರೂ ನಮ್ಮ ವಿಜಯಪುರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ