ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಎನ್ನುವುದು ಕಾಂಗ್ರೆಸ್ ಕುತಂತ್ರ; ಶಾಸಕ ಕೆ.ಎಸ್.ಈಶ್ವರಪ್ಪ ತಿರುಗೇಟು
ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಎನ್ನುವುದು ಕುತಂತ್ರ ಎಂದು ಹೇಳುವ ಮೂಲಕ ಕಾಂಗ್ರೆಸ್ ಟೀಕೆಗೆ ಶಾಸಕ ಕೆ.ಎಸ್.ಈಶ್ವರಪ್ಪ ಮೈಸೂರಿನಲ್ಲಿ ತಿರುಗೇಟು ನೀಡಿದ್ದಾರೆ.
ಮೈಸೂರು: ಯಡಿಯೂರಪ್ಪ(B. S. Yediyurappa) ಹಾಗೂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಎನ್ನುವುದು ಕುತಂತ್ರ ಎಂದು ಹೇಳುವ ಮೂಲಕ ಕಾಂಗ್ರೆಸ್ ಟೀಕೆಗೆ ಶಾಸಕ ಕೆ.ಎಸ್.ಈಶ್ವರಪ್ಪ(K. S. Eshwarappa) ಮೈಸೂರಿನಲ್ಲಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ಕಿತ್ತಾಟ ಇದೆ. ಅದೇ ರೀತಿ ಬಿಜೆಪಿಯವರೂ ಕಿತ್ತಾಡಲಿ ಎಂದು ಬಯಸುತ್ತಿದ್ದಾರೆ ಎಂದರು.
ಇನ್ನು ಯಡಿಯೂರಪ್ಪ ಅವರ ರಾಜೀನಾಮೆ ಕುರಿತು ‘ ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಇವರೆಲ್ಲರನ್ನ ಅನಾರೋಗ್ಯ ಕಾರಣದಿಂದ ಕೆಳಗಿಳಿಸಲಿಲ್ಲ. ರಾಜೀವ್ ಗಾಂಧಿ ನೇರವಾಗಿ ಏರ್ ಪೋರ್ಟ್ನಿಂದ ಅಪಮಾನ ಮಾಡಿ ಇಳಿಸಿದ್ರು. ಯಡಿಯೂರಪ್ಪನವರು ಅವರೇ ರಾಜೀನಾಮೆ ಕೊಟ್ಟಿದ್ದಾರೆ. ಇವೆರೆಡಕ್ಕೂ ಬಹಳ ವ್ಯತ್ಯಾಸ ಇದೆ. ರಾಜಕೀಯ ಕುತಂತ್ರದಿಂದ ಈ ರೀತಿ ಹೇಳಿಕೆಗಳನ್ನ ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ವೀರೇಂದ್ರ ಪಾಟೀಲ್ ಅವರು ಎಂತಹ ಆಡಳಿತಗಾರರು ಎಂದು ಎಲ್ಲರಿಗೂ ಗೊತ್ತು. ಶಿವಮೊಗ್ಗ ಜನರು ಅವರ ಹೆಸರಿನಲ್ಲಿಯೇ ನೀರು ಕುಡಿತಾ ಇದ್ದಾರೆ. ರಾಜ್ಯದ ಜನ ಎಲ್ಲವನ್ನು ನೋಡಿದ್ದಾರೆ ಎಂದು ಕಾಂಗ್ರೆಸ್ ಅವರ ಹೇಳಿಕೆಗಳಿಗೆ ಪ್ರತ್ಯುತ್ತರ ನೀಡಿದರು.
ಇದನ್ನೂ ಓದಿ:ರಾಜಕೀಯ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್, ಕಾಂಗ್ರೆಸ್‌ಗೆ ಬಿಗ್ ಶಾಕ್; ಆತ್ಮಹತ್ಯೆಗೆ ಯತ್ನಿಸಿದ ಬೆಂಬಲಿಗ
ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಮುಷ್ಕರ ಕುರಿತು ಮಾತನಾಡಿದ ಅವರು ‘ಬಿಜೆಪಿಯವರು ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಲಿಲ್ಲ, ಹೀಗಿದ್ದರೂ ಮುಷ್ಕರ ಮಾಡುತ್ತೇವೆ ಎಂದರೆ ಏನು ಹೇಳೋದು? ಎಂದು ಮೈಸೂರಿನಲ್ಲಿ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
ಇನ್ನು ನಾಳೆ (ಮಾ.1) ಸರ್ಕಾರಿ ನೌಕರರು 7ನೇ ವೇತನ ಜಾರಿಗೊಳಿಸುವ ಕುರಿತು ಮುಷ್ಕರ ನಡೆಸಲು ಮುಂದಾಗಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಹಾಗೂ ಮುಖ್ಯ ಕಾರ್ಯದರ್ಶಿಗಳ ಜತೆ ನಡೆದ ಸಭೆಯಲ್ಲಿ ನಾಳೆ ನಡೆಸಲಿರುವ ಹೋರಾಟದ ಬಗ್ಗೆ ಚರ್ಚೆಯಾಗಿದೆ. ಈ ಬಗ್ಗೆ 21ರಂದೇ ನಿರ್ಧಾರ ತೆಗೆದುಕೊಂಡಿದ್ದೆವು. ಬೇಡಿಕೆಗಳ ಪರವಾಗಿ ಸರ್ಕಾರದ ಆದೇಶ ಬಂದರೆ ಮಾತ್ರ ಪ್ರತಿಭಟನೆ ವಾಪಸ್ ಪಡೆಯುತ್ತೇವೆ ಎಂಬುದಾಗಿ ಹೇಳಿದ್ದೆವು. ಸಮಯಾವಕಾಶ ನೀಡಿ ಅಂತ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೇಳಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಹೇಳಿದ್ದೇವೆ. ಐದು ರಾಜ್ಯಗಳ ಮಾದರಿಯಂತೆ ಎನ್ಪಿಎಸ್ ರದ್ದು ಮಾಡಿ, ಒಪಿಎಸ್ ಜಾರಿ ಮಾಡಿ ಎಂದು ಮನವಿ ಮಾಡಿದ್ದೆವು. ಅದರ ಬಗ್ಗೆ ಮುಖ್ಯಮಂತ್ರಿಗಳು ಮಾತೇ ಆಡುತ್ತಿಲ್ಲ. ಹೀಗಾಗಿ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಸಿಎಸ್ ಷಡಕ್ಷರಿ ಸಭೆಯ ಬಳಿಕ ಹೇಳಿದ್ದಾರೆ.
ಇದನ್ನೂ ಓದಿ:Govt Employees Strike: ನಾಳೆ ಸರ್ಕಾರಿ ನೌಕರರ ಮುಷ್ಕರ; ಇಂದು ರಾತ್ರಿ ತುರ್ತು ಸಭೆ ಕರೆದ ಸಿಎಂ ಬೊಮ್ಮಾಯಿ
ಇದಕ್ಕೂ ಮುನ್ನ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಹೇಳಿದ್ದರು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಮಾತನಾಡಿದ್ದ ಅವರು, ವೇತನ ಪರಿಷ್ಕರಣೆ ವಿಚಾರವಾಗಿ ಸಂಜೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಕೂಡಲೇ ಮಧ್ಯಂತರ ವರದಿ ನೀಡುವಂತೆ ಈಗಾಗಲೇ ಸೂಚಿಸಿದ್ದೇನೆ. ಮಧ್ಯಂತರ ವರದಿ ತರಿಸಿಕೊಂಡು ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಅವರು ಹೇಳಿದ್ದರು. ಆದರೆ, ಇದ್ಯಾವುದಕ್ಕೂ ನೌಕರರು ಸೊಪ್ಪುಹಾಕುವ ಲಕ್ಷಣ ಕಾಣಿಸುತ್ತಿಲ್ಲ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ