AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಮನೂರು ಶಿವಶಂಕರಪ್ಪಗೆ ಬುದ್ಧಿಭ್ರಮಣೆ ಆಗಿದೆ: ಮಾಡಾಳ್​ ಮನೆ ಮೇಲಿನ ದಾಳಿಗೆ ನಾನು ಕಾರಣವಲ್ಲ ಎಂದ ಜಿಎಂ ಸಿದ್ದೇಶ್ವರ

ಮಾಡಾಳ್​ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿಗೆ ನಾನು ಕಾರಣವಲ್ಲ. ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪಗೆ ಬುದ್ಧಿಭ್ರಮಣೆ ಆಗಿದೆ ಎಂದು ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ​ ತಿರುಗೇಟು ನೀಡಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Mar 05, 2023 | 5:34 PM

Share

ದಾವಣಗೆರೆ: ಮಾಡಾಳ್ (Madalu Veerupakshappa) ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿಸಿದ್ದೇ ಸಂಸದ ಸಿದ್ದೇಶ್ವರ್​ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa)  ನಿನ್ನೆ (ಮಾ. 04) ಹೊಸ ಬಾಂಬ್​ ಸಿಡಸಿದ್ದರು. ಮಾಡಾಳ್​ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿಗೆ ನಾನು ಕಾರಣವಲ್ಲ. ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪಗೆ ಬುದ್ಧಿಭ್ರಮಣೆ ಆಗಿದೆ ಎಂದು ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ​ ತಿರುಗೇಟು ನೀಡಿದ್ದಾರೆ. ಈ ಹಿಂದೆ ಮಾಡಾಳ್​ ವಿರೂಪಾಕ್ಷಪ್ಪ ಜತೆ ನಾನು ಜಗಳವಾಡಿದ್ದೆ. ಅದೇ ರೀತಿ ಸಿಎಂ ಜತೆ ಸಹ ಜಗಳವಾಡಿದ್ದೇನೆ, ಮತ್ತೆ ಒಂದಾಗುತ್ತೇವೆ. ಇನ್ನು ಮಾಡಾಳ್ ವಿರುದ್ಧ ಕ್ರಮ‌ ಕೈಗೊಳ್ಳುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಸಂಸದ ಸಿದ್ದೇಶ್ವರ್ ಹೇಳಿದರು.

ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ವಿರುದ್ಧ ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್ 

ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಮನೆ ಮೇಲೆ ದಾಳಿ ಮಾಡಿಸಿದ್ದೇ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ​ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್​ ಎಸೆದಿದ್ದಾರೆ. ನಿನ್ನೆ (ಮಾ. 04) ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿ.ಎಂ.ಸಿದ್ದೇಶ್ವರ​ ದಾಳಿ ಮಾಡಿಸಿದ್ದು ಎಂದು ನಮ್ಮ ಪಕ್ಷದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಇಷ್ಟಕ್ಕೂ ಅವರ ಪಕ್ಷದ ವ್ಯವಹಾರ ನಮಗೆ ಯಾಕೆ ಎಂದು ಶಿವಶಂಕರಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಲೋಕಾ ಬಲೆಗೆ ಮಾಡಾಳ್ ಪುತ್ರ..‘ಕೈ’ಗೆ ಸಿಕ್ತು ಅಸ್ತ್ರ: ರಾಜ್ಯಾದ್ಯಂತ 2 ಗಂಟೆ ಬಂದ್​ಗೆ ಕರೆ ನೀಡಿದ ಕಾಂಗ್ರೆಸ್

ಇನ್ನು ಮಾಡಾಳ್ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರ ದಾಳಿ ಮಾ.3 ರಂದು ಮುಕ್ತಾಯವಾಗಿದ್ದು, ಶಾಸಕರ ಮನೆಯಲ್ಲಿ ಬರೋಬ್ಬರಿ 2,800 ಗ್ರಾಂ ಚಿನ್ನಾಭರಣ, 20 ಕೆ.ಜಿ ಬೆಳ್ಳಿ ಆಭರಣಗಳು, 16.5 ಲಕ್ಷ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿವೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ಸತತ 10 ಗಂಟೆ ಕಾಲ ಪರಿಶೀಲನೆ ಮಾಡಿದ್ದರು.

ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್‌ 

ಲೋಕಾಯುಕ್ತ ಕೇಸ್ ನಡುವೆಯೂ ಮಾಡಾಳ್‌ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್‌ನಿಂದ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಮಾಧ್ಯಮಗಳ ವಿರುದ್ಧ ಮಾನಹಾನಿಕರ ಸುದ್ದಿ ಬಿತ್ತರಿಸದಂತೆ ನಿರ್ಬಂಧ ಹೇರುವಂತೆ ಮನವಿ ಮಾಡಿದ್ದಾರೆ. ಈ ಕುರಿತಾಗಿ ಬೆಂಗಳೂರಿನ ಸಿವಿಲ್ ಕೋರ್ಟ್ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿದೆ. ಲಂಚ ಸ್ವೀಕಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಶಾಸಕ ಮಾಡಾಳ್ ವಿರೂಪಾಕ್ಷ ಸೇರಿದಂತೆ ಮತ್ತಿತರರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.

ಇದನ್ನೂ ಓದಿ: ವಿರೂಪಾಕ್ಷಪ್ಪ ಮಾಡಾಳ್‌ ಪುತ್ರನ ವಿರುದ್ಧ ಭ್ರಷ್ಟಾಚಾರ ಆರೋಪ: ಸಿಎಂ ಬೊಮ್ಮಾಯಿ ರಾಜಿನಾಮೆ ನೀಡುವಂತೆ ಸೂಟ್​ಕೇಸ್, ಗುಟ್ಕಾ ಬ್ಯಾಗ್​ ಹಿಡಿದು ಕೈ ಪ್ರತಿಭಟನೆ

ಶ್ರೇಯಸ್ ಕಶ್ಯಪ್​ ನೀಡಿದ್ದ ದೂರಿನ ಅನ್ವಯ ದಾಖಲಾದ ಎಫ್​ಐಆರ್​ನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಎ1 (ಮೊದಲ ಆರೋಪಿ) ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2 (2ನೇ ಆರೋಪಿ), ಕೆಎಸ್​ಡಿಎಲ್​ ಅಕೌಂಟೆಂಟ್​ ಸುರೇಂದ್ರ ಎ3, ಮಾಡಾಳ್​ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆಗಿದ್ದಾನೆ. ಆಧಾರಿಸಿ ಈ ಎಫ್​ಐಆರ್ ದಾಖಲಿಸಲಾಗಿದೆ.

ರಾಜದ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:46 pm, Sun, 5 March 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ