AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಖರ್ಗೆಗೆ ಶಾಮನೂರು ಶಿವಶಂಕರಪ್ಪ ಪತ್ರ

ರಾಜ್ಯಸಭೆ ಮತ್ತು ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಟಿಕೆಟ್​ಗಾಗಿ ಕಾಂಗ್ರೆಸ್​ನಲ್ಲಿ ಲಾಭಿಗಳು ಆರಂಭಗೊಂಡಿವೆ. ಈ ನಡುವೆ, ಮುಂಬರುವ ಎರಡು ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಕೋರಿ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಖರ್ಗೆಗೆ ಶಾಮನೂರು ಶಿವಶಂಕರಪ್ಪ ಪತ್ರ
ರಾಜ್ಯಸಭೆ, ಲೋಕಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಮಲ್ಲಿಕಾರ್ಜುನ ಖರ್ಗೆಗೆ ಶಾಮನೂರು ಶಿವಶಂಕರಪ್ಪ ಪತ್ರ
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi|

Updated on:Feb 12, 2024 | 10:32 PM

Share

ಬೆಂಗಳೂರು, ಫೆ.12: ರಾಜ್ಯಸಭೆ (Rajya Sabha) ಮತ್ತು ಲೋಕಸಭೆ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದು, ಟಿಕೆಟ್​ಗಾಗಿ ಕಾಂಗ್ರೆಸ್​ನಲ್ಲಿ ಲಾಭಿಗಳು ಆರಂಭಗೊಂಡಿವೆ. ಈ ನಡುವೆ, ಮುಂಬರುವ ಎರಡು ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಕೋರಿ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ಜನಸಂಖ್ಯೆ ಅನುಗುಣವಾಗಿ ವೀರಶೈವ ಲಿಂಗಾಯತರಿಗೆ ಆಧ್ಯತೆ ನೀಡಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯ ಬಳಿಕ ತಾಳ ಹಾಕುತ್ತಿದ್ದ ಕಾಂಗ್ರೆಸ್ ನಾಯಕರ ಹೊಟ್ಟೆಗೆ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಭರ್ಜರಿ ಭೋಜನ!

ವೀರಶೈವ-ಲಿಂಗಾಯತರು 1999 ರ ವರೆಗೆ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರಾಗಿದ್ದರು. ಎಸ್.ನಿಜಲಿಂಗಪ್ಪ, ಬಿ.ಡಿ.ಜತ್ತಿ, ಎಸ್.ಆರ್.ಕಂಠಿ, ವಿರೇಂದ್ರ ಪಾಟೀಲ್ ಸೇರಿದಂತೆ ಅನೇಕ ನಾಯಕರು ಇದ್ದರು. ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ನಮ್ಮ ಸಮಾಜದ ಪ್ರತಿನಿಧಿಗಳಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ವೀರಶೈವ- ಲಿಂಗಾಯತರ ನಾಯಕತ್ವವನ್ನು ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಕಡೆಗಣಿಸುತ್ತಾ ಬರಲಾಗಿದೆ. ಅದರ ಫಲವಾಗಿ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವಕ್ಕೆ ಧಕ್ಕೆ ತರುವಂತಹ ಘಟನೆಗಳಾಗಿವೆ ಎಂದರೆ ತಪ್ಪಿಲ್ಲ. ಈಗಲೂ ಕಾಲಮಿಂಚಿಲ್ಲ ಇನ್ನಾದರೂ ನಮ್ಮ ಸಮುದಾಯದವರಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ನಾಯಕತ್ವ ಕಲ್ಪಿಸುವ ಮೂಲಕ ಪ್ರಾತಿನಿಧ್ಯ ನೀಡುತ್ತಿರೆಂದು ನಂಬಿರುತ್ತೇವೆ ಎಂದಿದ್ದಾರೆ.

ನಮ್ಮ ರಾಜ್ಯದವರೇ ಆದ ನಿಮಗೆ ಸಮುದಾಯದ ಬಗ್ಗೆ ಪ್ರತ್ಯೇಕವಾಗಿ ಹೇಳುವುದು ಏನಿಲ್ಲ. ಏಳು ದಶಕಗಳಿಂದ ಹತ್ತಿರದಿಂದ ಸಮುದಾಯ ಬಲ್ಲವರಾಗಿದ್ದೀರಿ. ಇದನ್ನು ಸರಿಪಡಿಸುವ ಶಕ್ತಿ ನಿಮಗಿದೆ. ಹಾಗಾಗಿ‌ ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಆದ್ಯತೆ ನೀಡಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:31 pm, Mon, 12 February 24