Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಸುದ್ದಿಗೋಷ್ಠಿ ಕರೆದ ಶಂಕರಪಾಟೀಲ್‌ ಮುನೇನಕೊಪ್ಪ, ಕುತೂಹಲ ಕೆರಳಿಸಿದ ನಡೆ

ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಶಂಕರಪಾಟೀಲ್‌ ಮುನೇನಕೊಪ್ಪ ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ನಾಳೆ ಸುದ್ದಿಗೋಷ್ಠಿ ಕರೆದ ಶಂಕರಪಾಟೀಲ್‌ ಮುನೇನಕೊಪ್ಪ, ಕುತೂಹಲ ಕೆರಳಿಸಿದ ನಡೆ
ಶಂಕರ ಪಾಟೀಲ್ ಮುನೇನಕೊಪ್ಪ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Rakesh Nayak Manchi

Updated on:Aug 27, 2023 | 8:59 PM

ಧಾರವಾಡ, ಆಗಸ್ಟ್ 27: ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಧಾರವಾಡ (Dharwad) ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಶಂಕರಪಾಟೀಲ್‌ ಮುನೇನಕೊಪ್ಪ (Shankar Patil Munenakoppa) ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಹುಬ್ಬಳ್ಳಿಯಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಮುನೇನಕೊಪ್ಪ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ನ ಎನ್​​ಹೆಚ್ ಕೋನರೆಡ್ಡಿ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಚುನಾವಣೆ ನಂತರ ಮೊದಲ ಬಾರಿಗೆ ಮುನೇನಕೊಪ್ಪ ಸುದ್ದಿಗೋಷ್ಠಿ ಕರೆದಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ರಾಷ್ಟ್ರೀಯ ಮಟ್ಟದ ಬೈಕ್ ಡರ್ಟ್ ಟ್ರ್ಯಾಕ್ ಚಾಂಪಿಯನ್ ಶಿಪ್; ಇಲ್ಲಿವೆ ರೋಮಾಂಚನಕಾರಿ ರೇಸ್​ನ ಫೋಟೋಗಳು

ಸದ್ಯ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಬಿಜೆಪಿಯ ಎಸ್​​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಬಲೆಗೆ ಬಿದ್ದಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಇತ್ತ, ಹೊನ್ನಾಳಿಯ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸಚಿವರನ್ನು ಭೇಟಿಯಾಗಿ ಇನ್ನಷ್ಟು ಕುತೂಹಲ ಕೆರಳಿಸುತ್ತಿದ್ದಾರೆ.

ಈ ನಡುವೆ ಶಂಕರಪಾಟೀಲ್ ಮುನೇನಕೊಪ್ಪ ಅವರು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಶಾಸಕ ಕೋನರೆಡ್ಡಿ, ಶಂಕರಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚೆ ಆಗಿಲ್ಲ ಎಂದಿದ್ದಾರೆ. ಅಲ್ಲದೆ, ಇಂದು ಮಾತನಾಡಿದ ಸಂತೋಷ್ ಲಾಡ್, ಧಾರವಾಡ ಜಿಲ್ಲೆಯ ಇಬ್ಬರು ನಾಯಕರು ಕಾಂಗ್ರೆಸ್ ಸೇರುತ್ತಾರೆ ಎಂದಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿಯ ಯಾವ ಶಾಸಕರು, ಪ್ರಮುಖರು ಕಾಂಗ್ರೆಸ್​ಗೆ ಹೋಗುವುದಿಲ್ಲ. ಹಲವಾರು ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ವೈಯಕ್ತಿಕ ಕೆಲಸಗಳಾಗಿ ಭೇಟಿಯಾಗಿರಬಹುದು. ಆಪರೇಷನ್ ಹಸ್ತದ ಬೆಳವಣಿಗೆಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Sun, 27 August 23

ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ