ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಗಂಭೀರ ಅಕ್ರಮ ನಡೆದಿದೆ ಎಂದು ಆರೋಪಿಸಿದ ಶಶಿ ತರೂರ್

ನಾವು ಮಧುಸೂದನ್ ಮಿಸ್ತ್ರಿ ಅವರ ಕಚೇರಿಯೊಂದಿಗೆ ನಿರಂತರ ಸಂವಹನ ನಡೆಸುತ್ತಿದ್ದೇವೆ, ವಿವಿಧ ವಿಷಯಗಳ ಬಗ್ಗೆ ಅವರಿಗೆ ತಿಳಿಸಿದ್ದೇವೆ, ಅವರಿಂದ ಸದ್ಯ ಪ್ರತಿಕ್ರಿಯೆ ಲಭಿಸಿಲ್ಲ" ಎಂದು ತರೂರ್ ಅವರ ಚುನಾವಣಾ ಏಜೆಂಟ್ ಸಲ್ಮಾನ್ ಸೋಝ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಗಂಭೀರ ಅಕ್ರಮ ನಡೆದಿದೆ ಎಂದು ಆರೋಪಿಸಿದ ಶಶಿ ತರೂರ್
ಶಶಿ ತರೂರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 19, 2022 | 1:19 PM

ದೆಹಲಿ: 20 ವರ್ಷಗಳ ನಂತರ ಮೊದಲ ಬಾರಿಗೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ (Congress Presidential Election) ಮತ ಎಣಿಕೆ ಇಂದು (ಬುಧವಾರ) ನಡೆಯುತ್ತಿದ್ದು, 3 ಗಂಟೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಶಶಿ ತರೂರ್ (Shashi Tharoor) ಸ್ಪರ್ಧಿಸುತ್ತಿದ್ದು ಮತದಾನದಲ್ಲಿ ಗಂಭೀರ ಅಕ್ರಮ ಸಂಭವಿಸಿದೆ ಎಂದು ಶಶಿ ತರೂರ್ ಆರೋಪಿಸಿದ್ದಾರೆ. ಮತ ಎಣಿಕೆ ಪ್ರಾರಂಭವಾದ ಕೂಡಲೇ ತರೂರ್ ಅವರ ತಂಡವು ಉತ್ತರ ಪ್ರದೇಶದ ಚುನಾವಣಾ ಪ್ರಕ್ರಿಯೆಯಲ್ಲಿ “ಗೊಂದಲಕಾರಿ ಸಂಗತಿಗಳು” ಇವೆ ಎಂದು ಆರೋಪಿಸಿದ್ದು ಅಲ್ಲಿನ ಮತಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ನಾವು ಎಂದಿನಂತೆ ವ್ಯವಹಾರವನ್ನು ಸ್ವೀಕರಿಸಲು ಈ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ ಎಂದು ತರೂರ್ ತಂಡ ಹೇಳಿದೆ. ನಾವು ಮಧುಸೂದನ್ ಮಿಸ್ತ್ರಿ ಅವರ ಕಚೇರಿಯೊಂದಿಗೆ ನಿರಂತರ ಸಂವಹನ ನಡೆಸುತ್ತಿದ್ದೇವೆ, ವಿವಿಧ ವಿಷಯಗಳ ಬಗ್ಗೆ ಅವರಿಗೆ ತಿಳಿಸಿದ್ದೇವೆ, ಅವರಿಂದ ಸದ್ಯ ಪ್ರತಿಕ್ರಿಯೆ ಲಭಿಸಿಲ್ಲ” ಎಂದು ತರೂರ್ ಅವರ ಚುನಾವಣಾ ಏಜೆಂಟ್ ಸಲ್ಮಾನ್ ಸೋಝ್ ಹೇಳಿದ್ದಾರೆ.

ಮಿಸ್ತ್ರಿ ಅವರಿಗೆ ಬರೆದ ಪತ್ರದಲ್ಲಿ ತರೂರ್ ತಂಡವು ಹೀಗೆ ಹೇಳಿದೆ: “ಉತ್ತರ ಪ್ರದೇಶದ ಚುನಾವಣೆಯ ನಡವಳಿಕೆಯಲ್ಲಿನ ಅತ್ಯಂತ ಗಂಭೀರ ಅಕ್ರಮಗಳನ್ನು ನಿಮ್ಮ ಗಮನಕ್ಕೆ ತರಲು ನಾವು ಬಯಸುತ್ತೇವೆ. ನೀವು ನೋಡುವಂತೆ ಉತ್ತರ ಪ್ರದೇಶದಲ್ಲಿನ ಚುನಾವಣಾ ಪ್ರಕ್ರಿಯೆ ವಿಶ್ವಾಸಾರ್ಹತೆ ಮತ್ತು ಸಮಗ್ರತೆಯನ್ನು ಹೊಂದಿಲ್ಲ.

ಉತ್ತರ ಪ್ರದೇಶದಲ್ಲಿ ನಡೆದಿರುವುದು ಸಂಪೂರ್ಣವಾಗಿ ವಿಭಿನ್ನ ರೀತಿಯಲ್ಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಬಲಿಗರು ಹೇಗೆ ಚುನಾವಣಾ ಅವ್ಯವಹಾರ ನಡೆಸುತ್ತಿದ್ದಾರೆ ಎಂಬುದರ ಬಗ್ಗೆ ಖರ್ಗೆ ಅವರಿಗೆ ತಿಳಿದಿದೆ ಎಂಬುದಕ್ಕೆ ನಮ್ಮ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ನಾವು ಒತ್ತಿಹೇಳಲು ಬಯಸುತ್ತೇವೆ. ಅವರಿಗೆ ಅರಿವಿದ್ದರೆ ಉತ್ತರ ಪ್ರದೇಶದಲ್ಲಿ ಏನು ನಡೆದಿದೆಯೋ ಅದಕ್ಕೆ ಅವರು ರು ಎಂದಿಗೂ ಅನುಮತಿಸುವುದಿಲ್ಲ ಎಂದು ನಮಗೆ ಖಚಿತವಾಗಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ತುಂಬಾ ಮುಖ್ಯವಾದ ಚುನಾವಣೆಗೆ ಕಳಂಕ ತರಲು ಅವರು ಅಮತಿಸುವುದಿಲ್ಲ ಎಂದು ತರೂರ್ ತಂಡ ಹೇಳಿದೆ.

ಮತಪೆಟ್ಟಿಗೆಗಳಿಗೆ ಅನಧಿಕೃತ ಮುದ್ರೆಗಳು, ಮತಗಟ್ಟೆಗಳಲ್ಲಿ ಅನಧಿಕೃತ ಜನರ ಉಪಸ್ಥಿತಿ ಮತ್ತು ಮತದಾನದ ದುರ್ಬಳಕೆಯಂತಹ ಸಮಸ್ಯೆಗಳನ್ನು ತರೂರ್ ತಂಡ ಎತ್ತಿ ತೋರಿಸಿದೆ.

“ಉತ್ತರ ಪ್ರದೇಶದ ಕಲುಷಿತ ಪ್ರಕ್ರಿಯೆ ನಿಲ್ಲಲು ಅವಕಾಶ ನೀಡಿದರೆ ಈ ಚುನಾವಣೆಯನ್ನು ಹೇಗೆ ಮುಕ್ತ ಮತ್ತು ನ್ಯಾಯಯುತವೆಂದು ಪರಿಗಣಿಸಬಹುದು ಎಂಬುದನ್ನು ನಾವು ನೋಡುತ್ತಿಲ್ಲ. ಆದ್ದರಿಂದ ಉತ್ತರ ಪ್ರದೇಶದ ಎಲ್ಲಾ ಮತಗಳನ್ನು ಅಮಾನ್ಯವೆಂದು ಪರಿಗಣಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ದಿನದ ಅಂತ್ಯದ ವೇಳೆಗೆ, 24 ವರ್ಷಗಳಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗಾಂಧಿಯೇತರರು ಆಯ್ಕೆ ಆಗಲಿದ್ದಾರೆ ಮೊಹರು ಮಾಡಿದ ಮತಪೆಟ್ಟಿಗೆಗಳನ್ನು ದೇಶಾದ್ಯಂತದಿಂದ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಗೆ ತರಲಾಯಿತು. ಗಾಂಧಿ ಕುಟುಂಬದ ಬಹುಕಾಲದ ನಿಷ್ಠರಾಗಿರುವ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ರೇಸ್​​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರು ಗೆದ್ದರೆ ಪಕ್ಷವನ್ನು ಗಾಂಧಿ ಕುಟುಂಬವೇ ಅವರನ್ನು ನಿಯಂತ್ರಿಸಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಸಾಧ್ಯತೆಯನ್ನು ಕಾಂಗ್ರೆಸ್ ಕಟುವಾಗಿ ನಿರಾಕರಿಸಿದೆ. “ಇವೆಲ್ಲವೂ ಟೀಕಾಕಾರರ ಆರೋಪಗಳು. ಇಬ್ಬರು ಸಮರ್ಥ ವ್ಯಕ್ತಿಗಳು ಸ್ಪರ್ಧಿಸುತ್ತಿದ್ದಾರೆ. ಅದನ್ನು ಮುಕ್ತ, ನ್ಯಾಯಸಮ್ಮತವಾದ ಚುನಾವಣೆಯಾಗಿ ಇರಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಪಕ್ಷದ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

Published On - 12:49 pm, Wed, 19 October 22

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್