AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾಜಿ ಪ್ರತಿಮೆ ಕ್ರೆಡಿಟ್ ಪಾಲಿಟಿಕ್ಸ್​​​: ನಾಳೆ ಮತ್ತೊಮ್ಮೆ ಪ್ರತಿಮೆ ಉದ್ಘಾಟಿಸಲು ಲಕ್ಷ್ಮೀ ಹೆಬ್ಬಾಳ್ಕರ್​ ತಯಾರಿ​

ಮತ್ತೊಮ್ಮೆ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಸಿದ್ಧತೆ ನಡೆದಿದ್ದು, ನಾಳೆ (ಮಾ.5) ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​​ ಶಿವಾಜಿ ಪ್ರತಿಮೆ ಉದ್ಘಾಟಿಸಲಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Mar 04, 2023 | 4:55 PM

Share

ಬೆಳಗಾವಿ: ಜಿಲ್ಲೆಯ ರಾಜಹಂಸಗಡ ಕೋಟೆಯಲ್ಲಿರುವ ಶಿವಾಜಿ ಪ್ರತಿಮೆಯ ಕ್ರೆಡಿಟ್ (Shivaji Statue) ಪಡೆಯಲು ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಮತ್ತು ರಮೇಶ್ ಜಾರಕಿಹೊಳಿ(Ramesh Jarkiholi) ನಡುವೆ ಭಾರೀ ಪೈಪೋಟಿ ನಡೆದಿತ್ತು. ಇದರ ಮಧ್ಯೆ ಮಾ. 2ರಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ರಿಬ್ಬನ್ ಕಟ್ ಮಾಡುವ ಮೂಲಕ ಶಿವಾಜಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಆದರೆ ಈಗ ಮತ್ತೊಮ್ಮೆ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಸಿದ್ಧತೆ ನಡೆದಿದ್ದು, ನಾಳೆ (ಮಾ.5) ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​​ ಶಿವಾಜಿ ಪ್ರತಿಮೆ ಉದ್ಘಾಟಿಸಲಿದ್ದಾರೆ. ರಾಜಹಂಸಗಡ ಬಳಿ ಹಾಕಿದ್ದ ಬಿಜೆಪಿ ನಾಯಕರ ಬ್ಯಾನರ್​​ಗಳನ್ನು ಕಾಂಗ್ರೆಸ್​ ಕಾರ್ಯಕರ್ತರು ಕತ್ತರಿಸುತ್ತಿದ್ದಾರೆ.

ಶಿವಾಜಿ ಪ್ರತಿಮೆ ನಾವೇ ಮಾಡಿದ್ದೇವೆ ಅಂತಾ ಬಿಂಬಿಸಿ ಮರಾಠಿಗರ ಓಲೈಕೆ ಮಾಡಲು ಮುಂದಾಗಿದ್ದ ಹೆಬ್ಬಾಳ್ಕರ್​ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ಮಾರ್ಚ್ 5ರಂದು ದಿನಾಂಕ ನಿಗದಿ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರನ್ನ ಕರೆತಂದು ದೊಡ್ಡ ಮಟ್ಟದಲ್ಲಿ ಪಕ್ಷದ ಕಾರ್ಯಕ್ರಮ ಮಾಡಲು ಹೆಬ್ಬಾಳ್ಕರ್ ಪ್ಲ್ಯಾನ್ ಮಾಡಿದ್ದಾರೆ.

ಇದನ್ನೂ ಓದಿ: Belagavi Shivaji Statue: ರಿಬ್ಬನ್ ಕಟ್ ಮಾಡುವ ಮೂಲಕ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ, ಲಕ್ಷ್ಮೀ ಹೆಬ್ಬಾಳ್ಕರ್ ಗೈರು

ಶಿವಾಜಿ ಕ್ರೆಡಿಟ್ ವಾರ್

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಿವಾಜಿ ಮೂರ್ತಿ ಉದ್ಘಾಟನೆ ಕ್ರೆಡಿಟ್​ಗಾಗಿ ಹೆಬ್ಬಾಳ್ಕರ್ ಹಾಗೂ ರಮೇಶ್ ನಡುವೆ ಫೈಟ್ ನಡೆದಿದ್ದು ಕಡೆಗೂ ಸಾಹುಕಾರ್ ಸರ್ಕಾರದಿಂದ ಕಾರ್ಯಕ್ರಮ ಮಾಡಿಸುತ್ತಿದ್ರೇ ಇತ್ತ ಹೆಬ್ಬಾಳ್ಕರ್ ರಮೇಶ್​ಗೆ ತಿರುಗೇಟು ನೀಡಲು ಮಾ.5ರಂದು ಮತ್ತೊಮ್ಮೆ ಉದ್ಘಾಟನೆ ಮಾಡಲಿದ್ದಾರೆ. ಚುನಾವಣೆಗೂ ಮುನ್ನವೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪಕ್ಷಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವರ್ಸಸ್ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ನಡುವೆ ನೇರಾ ನೇರ ಕ್ರೆಡಿಟ್ ಪೈಟ್ ಆರಂಭವಾಗಿದೆ. ಗ್ರಾಮೀಣ ಕ್ಷೇತ್ರದಲ್ಲಿ ಜಿದ್ದಿಗೆ ಬಿದ್ದು ಅತೀ ಹೆಚ್ಚು ಮತದಾರರಿರುವ ಮರಾಠಿಗರನ್ನ ಸೆಳೆಯಲು ನಾನಾ ಕಸರತ್ತು ಮಾಡುತ್ತಿದ್ದಾರೆ.

ಇದರಿಂದ ಅಲರ್ಟ್ ಆದ ಸಾಹುಕಾರ್ ಫೆ.18ರಂದು ಪಕ್ಷದ ಕಾರ್ಯಕರ್ತರ ಜತೆಗೆ ರಾಜಹಂಸಗಡದಲ್ಲಿರುವ ಕೋಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವಿಚಾರ ಗೊತ್ತಾಗುತ್ತಿದ್ದಂತೆ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೊಳಿ ರಮೇಶ್ ಆಗಮನಕ್ಕೂ ಮುನ್ನವೇ ಕೋಟೆಗೆ ಭೇಟಿ ನೀಡಿ ಶಿವಾಜಿ ಮೂರ್ತಿಗೆ ಪೂಜೆ ಸಲ್ಲಿಸಿ ವಾಪಾಸ್ ಆಗಿದ್ದರು. ಈ ವೇಳೆ ರಮೇಶ್​ ಹಾಗೂ ಚನ್ನರಾಜ ಕಾರು ಮುಖಾಮುಖಿಯಾಗಿ ಇಬ್ಬರ ಬೆಂಬಲಿಗರು ಪರಸ್ಪರ ಘೋಷಣೆ ಕೂಗಿದ್ದರು.

ಇದನ್ನೂ ಓದಿ: Poster war: ಬೆಳಗಾವಿಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ; ಕ್ರೆಡಿಟ್ ತೆಗೆದುಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬ್ಯಾನರ್ ಪೈಪೋಟಿ!

ಅವತ್ತೇ ಮಾತಾಡಿದ ರಮೇಶ್ ಯಾವುದೇ ಕಾರಣಕ್ಕೂ ಇದನ್ನ ಕಾಂಗ್ರೆಸ್ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಸರ್ಕಾರದಿಂದ ಮೂರ್ತಿ ಉದ್ಘಾಟನೆ ಮಾಡಿಸುವ ಕೆಲಸ ಮಾಡುತ್ತೇನೆ ಅಂತಾ ಹೇಳಿದ್ದರು. ಅದರಂತೆ ಕೆಲ ದಿನಗಳ ಹಿಂದೆ ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿ ಮಾ.2ರಂದು ಸಮಯ ಕೊಟ್ಟು ಕಾರ್ಯಕ್ರಮಕ್ಕೆ ಬರುವಂತೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಮಾ.2ರಂದು ಸಯಮ ರಾಜಹಂಸಗಡ ಕೋಟೆಗೆ ಆಗಮಿಸಿ ಶಿವಾಜಿ ಮೂರ್ತಿಯನ್ನ ಲೋಕಾರ್ಪಣೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:54 pm, Sat, 4 March 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ