AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್, ಬೆಂಗಳೂರಿನಿಂದಲೇ ಶಿವಮೊಗ್ಗ ಕೈ ನಾಯಕನಿಗೆ ತಿರುಗೇಟು

ಬಿಜೆಪಿ ತೊರೆದು ಜೆಡಿಎಸ್​ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ್​ ಇದೀಗ ತೆನೆ ಇಳಿಸಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನ ಕೆಲ ನಾಯಕರ ವಿರೋಧದ ನಡುವೆಯೂ ಮಂಜುನಾಥ್​ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರಮಾಡಿಕೊಂಡಿರುವುದು ಅಚ್ಚರಿ ಮೂಡಿಸಿದೆ.

ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್, ಬೆಂಗಳೂರಿನಿಂದಲೇ ಶಿವಮೊಗ್ಗ ಕೈ ನಾಯಕನಿಗೆ ತಿರುಗೇಟು
ಆಯನೂರು ಮಂಜುನಾತ್ ಕಾಂಗ್ರೆಸ್ ಸೇರ್ಪಡೆ
ಪ್ರಸನ್ನ ಗಾಂವ್ಕರ್​
| Edited By: |

Updated on: Aug 24, 2023 | 12:51 PM

Share

ಬೆಂಗಳೂರು, (ಆಗಸ್ಟ್ 24): ನಿರೀಕ್ಷೆಯಂತೆ ಜೆಡಿಎಸ್​ ನಾಯಕ ಆಯನೂರು ಮಂಜುನಾಥ್ (ayanur manjunath), ಶಿಕಾರಿಪುರದ ನಾಗರಾಜ್ ಗೌಡ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್​ (Congress) ಸೇರ್ಪಡೆಯಾದರು. ಇಂದು(ಆಗಸ್ಟ್ 24) ಬೆಂಗಳೂರಿನ ಕಾಂಗ್ರೆಸ್​ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಈ ವೇಳೆ ಶಿವಮೊಗ್ಗ (Shivamogga) ಜಿಲ್ಲಾ ಕಾಂಗ್ರೆಸ್ ನಾಯಕರಾದ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಸೇರಿದಂತೆ ಹಲವು ಉಪಸ್ಥಿತರಿದ್ದರು.

ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆಯನೂರು ಮಂಜುನಾಥ್, ಯಾವುದೇ ಷರತ್ತುಗಳು ಇಲ್ಲದೆಯೇ ಕಾಂಗ್ರೆಸ್​ ಪಕ್ಷ ಸೇರ್ಪಡೆ ಆಗಿದ್ದೇನೆ. ನಾನು ಹಿಂದೆ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಗಿದ್ದೆ. ಆದರೆ ಈಗ ಅಂತ ಯಾವ ಕಂಡಿಷನ್ ಕೂಡ ಹಾಕಿಲ್ಲ. ಬಹಳ ದೊಡ್ಡ ಸಂಖ್ಯೆಯ ನಾಯಕರು ಜೊತೆಗಿದ್ದಾರೆ. ಬರುವ ದಿನಗಳಲ್ಲಿ ಗ್ರಾಮ ಪಂಚಾಯತಿ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ನನ್ನ ಎಲ್ಲ ಶ್ರಮ ಹಾಕುತ್ತೇನೆ. ಕೆಲವು ಜಿಲ್ಲಾ ನಾಯಕರು ಸಿಲ್ಲಿಯಾಗಿ ಮಾತಾಡಿರಬಹುದು. ಆ ಬಗ್ಗೆ ಜಿಲ್ಲಾಧ್ಯಕ್ಷರು ರಾಜ್ಯಾಧ್ಯಕ್ಷರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೆಸರು ಉಲ್ಲೇಖಿಸಲದೇ ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹೆಚ್ ಸಿ ಯೋಗೇಶ್​ಗೆ ತಿರುಗೇಟು ನೀಡಿದರು.

ಇದನ್ನೂ ಓದಿ: ಆಯನೂರು ಮಂಜುನಾಥ್ ಸೇರ್ಪಡೆಗೆ ಕಾಂಗ್ರೆಸ್​​ನಲ್ಲಿ ವಿರೋಧ, ಬಿಜೆಪಿ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಕೈ ಮುಖಂಡ

ಆಯನೂರು ಮಂಜುನಾಥ್​ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹೆಚ್ ಸಿ ಯೋಗೇಶ್​ ವಿರೋಧ ವ್ಯಕ್ತಪಡಿಸಿದ್ದರು. ಈ ಮೊದಲು ಸಿದ್ದರಾಮಯ್ಯನರವರ ಬಗ್ಗೆ ಮಾತನಾಡಿ, ಈಗ ಪಕ್ಷ ಸೇರ್ಪಡೆಗೆ ಅವರ ಮನೆ ಬಾಗಿಲನ್ನೇ ತಟ್ಟುತ್ತಿದ್ದಾರೆ. ಮಂಜುನಾಥ್ ವರ್ಷದಲ್ಲಿ ಮೂರು ಕಾಲ ಬದಲಾದಂತೆ ಪಕ್ಷ ಬದಲಿಸುತ್ತಾರೆ. ಚಳಿಗಾಲದಲ್ಲಿ ಬಿಜೆಪಿಯಲ್ಲಿದ್ದು, ಬೇಸಿಗೆಯಲ್ಲಿ ಕಾಂಗ್ರೆಸ್ ಬಾಗಿಲು ಮುಚ್ಚಿದೆ ಎಂದಾಗ ಜೆಡಿಎಸ್ ಪಕ್ಷ ಸೇರಿದ್ದರು. ಈಗ ಮಳೆಗಾಲದಲ್ಲಿ ಮತ್ತೆ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಪಕ್ಷದಿಂದ ಪಕ್ಷಕ್ಕೆ ಹಾರುವ ಮೂಲಕ ಯುವಕರಿಗೆ ಏನು ಸಂದೇಶ ನೀಡುತ್ತಿರಾ? ನಿಮಗೆ ಧಮ್ ಇದ್ದರೆ ನೀವಿರುವ ಪಕ್ಷದಲ್ಲೇ ಇದ್ದು ಸಾಧಿಸಿ ತೋರಸಿ ಎಂದು ಸವಾಲು ಹಾಕಿದ್ದರು. ಈ ವಿರೋಧದ ನಡುವೆಯೇ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಯನೂರು ಮಂಜುನಾಥ್​ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಇದು ಮುಂದೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​​ನಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!