ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ: ಶೋಭಾ ಕರಂದ್ಲಾಜೆ ಆರೋಪ

ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಹಲ್ಲು ತೂರಾಟ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ, ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಉಡಾಫೆ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ ವಿರುದ್ಧವೂ ಗುಡುಗುತ್ತಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ: ಶೋಭಾ ಕರಂದ್ಲಾಜೆ ಆರೋಪ
ಸಿದ್ದರಾಮಯ್ಯ, ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ ಎಂದು ಆರೋಪಿಸಿದ ಶೋಭಾ ಕರಂದ್ಲಾಜೆ
Edited By: Rakesh Nayak Manchi

Updated on: Oct 03, 2023 | 12:04 PM

ಚಾಮರಾಜನಗರ, ಅ.3: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ (Shivamogga) ರಾಗಿಗುಡ್ಡದಲ್ಲಿ ನಡೆದ ಹಲ್ಲು ತೂರಾಟ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ, ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಉಡಾಫೆ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ ವಿರುದ್ಧವೂ ಗುಡುಗುತ್ತಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje), ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಚಾಮರಾಜನಗರದ ಹರಳುಕೋಟೆ ಆಂಜನೇಯನ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಈದ್​ ಮಿಲಾದ್ ಹಬ್ಬದ ದಿನ ಬಿಟ್ಟು ಬೇರೆ ದಿನ ಆಚರಿಸಲು ಕಾರಣವೇನು? ಈದ್ ಮಿಲಾದ್​ ಅಂದರೆ ಒಂದು ದಿನ ಆಚರಿಸುವ ಹಬ್ಬ ಅಲ್ವಾ? ಎಂದು ಪ್ರಶ್ನಿಸಿದರು. ಅಲ್ಲದೆ, ದಂಗೆ ಎಬ್ಬಿಸಲೆಂದೇ ಒಂದು ದಿನ ಬಿಟ್ಟು ಆಚರಿಸಲಾಗಿದೆ. ಶಿವಮೊಗ್ಗ, ಕೋಲಾರದಲ್ಲಿ ತಲ್ವಾರ್ ಹಿಡಿದು ಮೆರವಣಿಗೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಇದರ ಹಿಂದೆ ಓಲೈಕೆ ರಾಜಕಾರಣ ಇದೆ ಎಂದ ಮಾಜಿ ಸಿಎಂ ಬೊಮ್ಮಾಯಿ

ಅತಿ ದೊಡ್ಡ ಖಡ್ಗದ ಮೆರವಣಿಗೆ ಮಾಡಲಾಗಿದೆ, ಇದರ ಅರ್ಥವೇನು? ಔರಂಗಜೇಬನ ದೊಡ್ಡ ಫೋಟೋ ಹಾಕಿ ಅಖಂಡ ಭಾರತವನ್ನ ಆಳಿದ ಮಹಾರಾಜ ಎಂಬ ಬರಹಗಳನ್ನ ಬರೆದಿದ್ದಾರೆ. ನಿಮ್ಮ ಆದರ್ಶಪುರುಷ ಮೊಹಮ್ಮದ್ ಪೈಂಗರ್ ಹಾಗೂ ಅಬ್ಧುಲ್ ಕಲಾಮ್ ಆಗಿರಬೇಕು. ಹಿಂದೂಗಳ ರಕ್ತ ಹರಿಸಿದ ಹಿಂದೂಗಳ ಮಾರಣಹೋಮ ನಡೆಸಿದ ಟಿಪ್ಪು ಹಾಗೂ ಔರಂಗಬೇಜ್ ಆಗಿರಬಾರದು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us