ಅನಂತಕುಮಾರ್​ ಹೆಗಡೆ ಅವರನ್ನು ನಾಯಿಗೆ ಹೋಲಿಸಿ ನಾಲಗೆ ಹರಿಬಿಟ್ಟ ಶಿವರಾಜ ತಂಗಡಗಿ

ಉತ್ತರ ಕನ್ನಡದ ಕುಮಟಾದಲ್ಲಿ ಮಾತನಾಡಿದ್ದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ, ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಇದನ್ನು ಕಾಂಗ್ರೆಸ್ ನಾಯಕರು ಖಂಡಿಸುತ್ತಿದ್ದಾರೆ. ಇದೀಗ ಶಿವರಾಜ ತಂಗಡಗಿ ಅವರು ಆಕ್ರೋಶವಾಗಿ ಮಾತನಾಡುತ್ತಾ ಹೆಗಡೆ ಅವರನ್ನು ನಾಯಿಗೆ ಹೋಲಿಸಿ ನಾಲಗೆ ಹರಿಬಿಟ್ಟಿದ್ದಾರೆ.

ಅನಂತಕುಮಾರ್​ ಹೆಗಡೆ ಅವರನ್ನು ನಾಯಿಗೆ ಹೋಲಿಸಿ ನಾಲಗೆ ಹರಿಬಿಟ್ಟ ಶಿವರಾಜ ತಂಗಡಗಿ
ಅನಂತಕುಮಾರ್​ ಹೆಗಡೆ ಅವರನ್ನು ನಾಯಿಗೆ ಹೋಲಿಸಿ ನಾಲಿಗೆ ಹರಿಬಿಟ್ಟ ಶಿವರಾಜ ತಂಗಡಗಿ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Rakesh Nayak Manchi

Updated on:Jan 14, 2024 | 6:26 PM

ಕೊಪ್ಪಳ, ಜ.14: ಉತ್ತರ ಕನ್ನಡದ ಕುಮಟಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Ananth Kumar Hegde) ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಸಚಿವ ಶಿವರಾಜ ತಂಗಡಗಿ (Shivaraj Tangadagi) ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಅನಂತ ಕುಮಾರ್ ಹೆಗಡೆ ಅವರನ್ನು ನಾಯಿಗೆ ಹೋಲಿಸುವ ಮೂಲಕ ನಾಲಗೆ ಹರಿಬಿಟ್ಟಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿದರೆ ಅಲ್ಲಿಗೆ ಬಂದು ಉತ್ತರ ನೀಡುತ್ತೇನೆ ಮಗನೆ. ಇದು ಫಸ್ಟ್ ಆ್ಯಂಡ್ ಲಾಸ್ಟ್ ವಾರ್ನಿಂಗ್, ಹುಷಾರ್. ಸಿದ್ದರಾಮಯ್ಯ ಕಾಲಿನ ಧೂಳಿಗೂ ಅನಂತಕುಮಾರ್ ಹೆಗಡೆ ಸಮವಲ್ಲ. ಇಂತಹ ನಾಯಿಗಳಿಗೆ ನಾವು ಯಾವಾಗ ಬೇಕಾದರೂ ಬುದ್ಧಿ ಕಲಿಸುತ್ತೇವೆ. ಆದರೆ ನಾವು ಕೆಳಮಟ್ಟಕ್ಕೆ ಇಳಿದು ಮಾತಾಡಬಾರದೆಂದು ಸುಮ್ಮನಿದ್ದೇವೆ ಎಂದರು.

ಅನಂತ್ ಕುಮಾರ್ ಹೇಳಿದ್ದೇನು?

ಸಿದ್ದರಾಮಯ್ಯ ಅವರು ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ್ದ ಅನಂತ್ ಕುಮಾರ್ ಹೆಗಡೆ, ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ. ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ 22 ಕ್ಕೆ ಹೋಗಲ್ಲ ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೇಳಿದ್ದರು.

ಇದನ್ನೂ ಓದಿ: ಪ್ರಚೋದನಾಕರಿ ಹೇಳಿಕೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುವೋಟೊ ಕೇಸ್ ದಾಖಲು

ಇದಕ್ಕೂ ಮುನ್ನಡ ಮಾತನಾಡಿದ್ದ ಹೆಗಡೆ, ಬಾಬ್ರಿ ಮಸೀದಿ ನಿರ್ನಾಮ ಮಾಡಿದಂತೆ ಭಟ್ಕಳದಲ್ಲಿ ಚಿನ್ನದ ಪಳ್ಳಿ ನಿರ್ನಾಮವಾಗಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ. ಶಿರ್ಸಿಯ ಸಿಪಿ ಬಜಾರ್​​ನಲ್ಲಿಯೂ ಮಸೀದಿ ಇದೆ. ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವತ್ತೂ ಅಲ್ಲಿಗೆ ಹೋದರೆ ಮಾರುತಿ ದೇವಸ್ತಾನ ಕಾಣುತ್ತದೆ ಎಂದಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Sun, 14 January 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ