ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೋಭಾ ಕರಂದ್ಲಾಜೆ ಮೊದಲ ಪ್ರತಿಕ್ರಿಯೆ, ಶುಭಾಶಯ ಕೋರಿದ ಪ್ರತಾಪ್ ಸಿಂಹ

ದಸರಾ ಮುಗಿಯುವುದರೊಳಗೆ ರಾಜ್ಯ ಬಿಜೆಪಿಗೆ ನೂತನ ಸಾರಥಿ ನೇಮಕವಾಗಲಿದೆ ಎಂದು ಹೇಳಲಾಗುತ್ತಿದೆ. ಆದರಲ್ಲೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಹೆಸರು ಮುನ್ನೆಲೆಯಲ್ಲಿರುವುದು ಅಚ್ಚರಿಕೆ ಕಾರಣವಾಗಿದೆ. ಹೌದು ಬಣ ಬಡಿದಾಟಕ್ಕೆ ಬ್ರೇಕ್​​​​ ಹಾಕಲು ಬಿಜೆಪಿ ಹೈಕಮಾಂಡ್, ಶೋಭಾ ಕರಂದ್ಲಾಜೆ ಅವರಿಗೆ ಮಣೆ ಹಾಕಿದೆ ಎನ್ನಲಾಗುತ್ತಿದೆ. ಇನ್ನು ಈ ಬಗ್ಗೆ ಸ್ವತಃ ಶೋಭಾ ​​ಕರಂದ್ಲಾಜೆ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೋಭಾ ಕರಂದ್ಲಾಜೆ ಮೊದಲ ಪ್ರತಿಕ್ರಿಯೆ, ಶುಭಾಶಯ ಕೋರಿದ ಪ್ರತಾಪ್ ಸಿಂಹ
ಶೋಭಾ ಕರಂದ್ಲಾಜೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 23, 2023 | 10:39 AM

ಮೈಸೂರು, (ಅಕ್ಟೋಬರ್ 23): ದಸರಾ ಹಬ್ಬ ಮುಗಿಯುವುದರೊಳಗಾಗಿ ಬಿಜೆಪಿ ರಾಜ್ಯಾಧ್ಯಕ್ಷರ(Karnataka BJP President)  ನೇಮಕವಾಗಲಿದೆ ಎಂಬ ನಿರೀಕ್ಷೆ ಜೋರಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಮಹಿಳೆಯೋರ್ವರು ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯಬಹುದು ಎಂಬ ಮಾತು ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನು ಬಗ್ಗೆ ಸ್ವತಃ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಟಿವಿ9 ಜತೆ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೇ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೇ ಕೆಲಸ ಮಾಡುತ್ತಿದ್ದೇನೆ. ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ. ಮುಂದೆಯೂ ಮೋದಿ ಪ್ರಧಾನಿಯಾಗಬೇಕು ಎನ್ನುವುದು ನನ್ನ ಇಚ್ಛೆ. ಮೋದಿ ಮತ್ತೆ ಪ್ರಧಾನಿ ಆಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದದರು.

ಇದನ್ನೂ ಓದಿ: ಶೋಭಾ ಕರಂದ್ಲಾಜೆಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ? ಇದರ ಹಿಂದಿನ ಹೈಕಮಾಂಡ್ ತಂತ್ರವೇನು?

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ  ಜನ್ಮದಿನ ಶುಭಾಶಯ ಕೋರಿದರು. ಅಲ್ಲದೇ ಇದೇ ವೇಳೆ ರಾಜ್ಯ ರಾಜಕಾರಣಕ್ಕೆ ಬನ್ನಿ ಮೇಡಂ ಎಂದು ಕೋರಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ರಾಜ್ಯಾಧ್ಯಕ್ಷರ ನೇಮಕ ಬಗ್ಗೆ ಹೇಳಲು ನಾನು ಬಹಳ ಜೂನಿಯರ್. ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ. ನಾನು ಪಕ್ಷಕ್ಕೆ ಬಂದು ಈಗ 10 ವರ್ಷ ಆಗುತ್ತಿದೆ ಅಷ್ಟೇ. ಪಕ್ಷದಲ್ಲಿ ನೇಮಕ ವಿಚಾರದಲ್ಲಿ ನಾನು ಹೇಳಲು ಆಗುವುದಿಲ್ಲ. ಶೋಭಾ ಕರಂದ್ಲಾಜೆ ಅವರನ್ನು ಕಾರ್ಯಕರ್ತರು ರಾಜ್ಯ ರಾಜಕಾರಣಕ್ಕೆ ಕರೆಯುತ್ತಿದ್ದಾರೆ. ನಾನು ಅದೇ ಧಾಟಿಯಲ್ಲೇ ಶುಭಾಶಯ ಕೋರಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್