AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್, ಬಿಜೆಪಿಯವರಿಂದ ಸ್ಟಿಂಗ್ ಆಪರೇಷನ್: ಎಚ್ಚರಿಯಿಂದ ಇರುವಂತೆ ಸ್ವಪಕ್ಷದ ಶಾಸಕರಿಗೆ ಸಿದ್ದರಾಮಯ್ಯ ಕಿವಿಮಾತು

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳಲ್ಲಿ ವರ್ಗಾವಣೆ ದಂಧೆ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ಎಚ್ಚೆತ್ತ ಸಿಎಂ, ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸ್ವಪಕ್ಷದ ಶಾಸಕರುಗಳಿಗೆ ಕಿವಿಮಾತು ಹೇಳಿದ್ದಾರೆ.

ಜೆಡಿಎಸ್, ಬಿಜೆಪಿಯವರಿಂದ ಸ್ಟಿಂಗ್ ಆಪರೇಷನ್: ಎಚ್ಚರಿಯಿಂದ ಇರುವಂತೆ ಸ್ವಪಕ್ಷದ ಶಾಸಕರಿಗೆ ಸಿದ್ದರಾಮಯ್ಯ ಕಿವಿಮಾತು
ಪ್ರಸನ್ನ ಗಾಂವ್ಕರ್​
| Edited By: |

Updated on:Jul 07, 2023 | 12:03 PM

Share

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಿಡಿದೆದ್ದಿರುವ ಹೆಚ್ .ಡಿ ಕುಮಾರಸ್ವಾಮಿ (HD Kumaraswamy) ದಿನಕ್ಕೊಂದು ಬಾಂಬ್ ಸಿಡಿಸುತ್ತಿದ್ದಾರೆ. ವರ್ಗಾವಣೆ ದಂಧೆ ಸೇರಿದಂತೆ ಕೆಲ ಆರೋಪಗಳನ್ನು ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಒಂದಲ್ಲ ಒಂದು ಅಸ್ತ್ರ ಪ್ರಯೋಗಿಸುತ್ತಿರುವ ಕುಮಾರಸ್ವಾಮಿ ಬೆನ್ನಿಗೆ ಬಿಜೆಪಿ ಸಹ ನಿಂತುಕೊಂಡಿದೆ. ಇದರಿಂದ ಅಲರ್ಟ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಶಾಸಕರು ಹಾಗೂ ಸಚಿವರಿಗೆ ಎಚ್ಚರಿಕೆಯಿಂದ ಇರುವಂತೆ ಕಿವಿಮಾತು ಹೇಳಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಬಗ್ಗೆ ನಮ್ಮ ಶಾಸಕರು ಹೆಚ್ಚು ಗಮನಹರಿಸಬೇಕು. ನಮ್ಮ ಮೇಲೆ ಸ್ಟಿಂಗ್ ಆಪರೇಷನ್ ಮಾಡುವ ಸಾಧ್ಯತೆ. ಬಿಜೆಪಿ, ಜೆಡಿಎಸ್​ನವರು ಸರ್ಕಾರಕ್ಕೆ ಕೆಟ್ಟು ಹೆಸರು ತರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಎಲ್ಲರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದರು.

ಇದನ್ನೂ ಓದಿ: ಇಂಧನ ಇಲಾಖೆಯಲ್ಲಿ 10 ಕೋಟಿ ರೂ.ಗೆ ಅಧಿಕಾರಿಗಳ ವರ್ಗಾವಣೆ: ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಬಿಜೆಪಿ ಮತ್ತು ಜೆಡಿಎಸ್ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಯಾಕಂದ್ರೆ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಜೆಡಿಎಸ್ ಹಾಗೂ ಬಿಜೆಪಿಯವರು, ಶಾಸಕರು ಮತ್ತು ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ವಿಪಕ್ಷಗಳ ಟ್ರ್ಯಾಪ್​​ಗೆ ಬೀಳಬೇಡಿ. ಎಲ್ಲರೂ ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ಸ್ವಪಕ್ಷದ ಶಾಸಕರು ಹಾಗೂ ಸಂಪುಟ ಸಹೋದ್ಯೋಗಿಗಳಿಗೆ ಸಲಹೆ ನೀಡಿದರು.

ಗ್ಯಾರಂಟಿಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಬೇಕು. ನಿಮ್ಮ ಕ್ಷೇತ್ರದಲ್ಲಿ ಜನರಿಗೆ ಗ್ಯಾರಂಟಿಗಳನ್ನು ತಲುಪಿಸಬೇಕು ಎಂದು ತಮ್ಮ ಶಾಸಕರಿಗೆ ಸೂಚಿಸಿರುವ ಸಿದ್ದರಾಮಯ್ಯ, ಹೆಚ್ಚು ವಿಶೇಷ ಅನುಧಾನ ಶಾಸಕರಿಗೆ ಕೊಡಲು ಆಗಲ್ಲ. ಗ್ಯಾರಂಟಿಗಳ ಜಾರಿ ಇರುವ ಕಾರಣ ಹೆಚ್ಚು ಅನುದಾನ ನೀಡಲು ಆಗುತ್ತಿಲ್ಲ. ಶಾಸಕರು ಎಂಟು ತಿಂಗಳು ಅನುಧಾನ ವಿಚಾರವಾಗಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ. ಈ ಬಗ್ಗೆ ಎದೆ ಎತ್ತಿ ಉತ್ತರಿಸಿ. ಯಾವ ಭರವಸೆಗಳನ್ನೂ ಈಡೇರಿಸದ ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ಇದಕ್ಕೆ ತಕ್ಕ ಉತ್ತರ ಕೊಡಿ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಸೂಚನೆ ನೀಡಿದ ಸಿದ್ದರಾಮಯ್ಯ, ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 45 ದಿನಗಳ ಒಳಗೇ ಜಾರಿ ಮಾಡಿದ್ದೇವೆ. ಇದನ್ನು ಪ್ರತಿಯೊಬ್ಬ ಮತದಾರರಿಗೆ ಅರ್ಥ ಮಾಡಿಸಿ. ವಿಧಾನಸಭೆ ಅಧಿವೇಶನದಲ್ಲಿ ಎದೆ ಎತ್ತಿ ಹೆಮ್ಮೆಯಿಂದ ಮಾತನಾಡಿ ಎಂದು ಪಕ್ಷದ ಶಾಸಕರಿಗೆ ಹುರಿದುಂಬಿಸಿದರು.

ನಾವು 2013 ಚುನಾವಣೆ ವೇಳೆ ಕೊಟ್ಟಿದ್ದ ಭರವಸೆಗಳನ್ನು ಸರ್ಕಾರ ನಡೆಸಿದ ಐದು ವರ್ಷಗಳಲ್ಲಿ ಈಡೇರಿಸಿ “ನುಡಿದಂತೆ ನಡೆದ ಸರ್ಕಾರ” ಎನ್ನುವ ಹೆಗ್ಗಳಿಕೆ ಗಳಿಸಿದ್ದೇವೆ. ಬಿಜೆಪಿ 2018 ರ ಚುನಾವಣೆ ವೇಳೆ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ 608 ಭರವಸೆಗಳಲ್ಲಿ ಶೇ 95 ರಷ್ಟನ್ನು ಈಡೇರಿಸಲೇ ಇಲ್ಲ.ಈ ಹಿನ್ನೆಲೆಯಲ್ಲಿ ಬಿಜೆಪಿಗೆ ನಮ್ಮ ಕಡೆ ಬೊಟ್ಟು ಮಾಡುವ ನೈತಿಕತೆಯೇ ಇಲ್ಲ. ಹೀಗಾಗಿ ಅಧಿವೇಶನದಲ್ಲಿ ಸುಳ್ಳುಗಳಿಗೆ ಅವರು ಜೋತು ಬೀಳುತ್ತಾರೆ. ನೀವು ಸರಿಯಾಗಿ ಖಚಿತವಾದ ಧ್ವನಿಯಲ್ಲಿ ಸತ್ಯವನ್ನು ಮಾತನಾಡಿ ಎಂದು ಶಾಸಕರಿಗೆ ತಿಳಿಸಿದರು.

2023ರ ಚುನಾವಣೆ ವೇಳೆ ನಾವು ನೀಡಿದ್ದ ಐದು ಗ್ಯಾರಂಟಿಗಳನ್ನೂ ನಾವು ಈಡೇರಿಸಲು ಶುರು ಮಾಡಿದ್ದೇವೆ. ಕೋಟಿಗಟ್ಟಲೆ ಕನ್ನಡಿಗರು ಈಗಾಗಲೇ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಬಿಜೆಪಿ ಕಾರ್ಯಕರ್ತರು, ಬೆಂಬಲಿಗರೂ ಅರ್ಜಿ ಸಲ್ಲಿಸಿ ಫಲಾನುಭವಿಗಳಾಗುತ್ತಿದ್ದಾರೆ. ಇದನ್ನು ನಾವು ಸ್ವಾಗತಿಸಬೇಕು. ಶಾಸಕರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮತದಾರರು ತಲೆ ಎತ್ತಿ ಹೆಮ್ಮೆ ಪಡುವ ಸಂದರ್ಭವನ್ನು ನಮ್ಮ ಸರ್ಕಾರ ಸೃಷ್ಟಿಸಿದೆ ಎಂದರು.

ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಮತ್ತು ಆಯವ್ಯಯ ಮಂಡಿಸುವುದು ಈ ಬಾರಿ ಸವಾಲಿನದ್ದಾಗಿತ್ತು. ಹೀಗಾಗಿ ನಾನು ಸರಣಿ ಸಭೆಗಳನ್ನು ಅಧಿಕಾರಿಗಳ ಜತೆ ನಡೆಸುತ್ತಿದ್ದೆ. ಈ ಸಂದರ್ಭದಲ್ಲಿ ಶಾಸಕರುಗಳಿಗೆ ಹೆಚ್ಚಿನ ಸಮಯ ಕೊಡಲು ಸಾಧ್ಯವಾಗಲಿಲ್ಲ , ಈ ಅಧಿವೇಶನವನ್ನು ಹಳಬರು ಮತ್ತು ನೂತನ ಶಾಸಕರು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ವಿಷಯ ತಜ್ಞರಾಗಿ, ಅಧ್ಯಯನಶೀಲರಾಗಿ ಸಕಲ ಸಿದ್ದತೆಗಳೊಂದಿಗೆ ಬಂದು ಬಿಜೆಪಿಯವರ ಸುಳ್ಳುಗಳಿಗೆ, ಜೆಡಿಎಸ್ ನವರ ಡ್ರಾಮಾಗಳಿಗೆ ಅರ್ಥಪೂರ್ಣವಾಗಿ ಉತ್ತರಿಸಿ ಸಿಎಂ ಸಲಹೆ ನೀಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:45 am, Fri, 7 July 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ