ಉಪಹಾರಕೂಟ ನೆಪದಲ್ಲಿ ಸಚಿವರೊಂದಿಗೆ ಸಿಎಂ, ಡಿಸಿಎಂ ಮಹತ್ವದ ಸಭೆ: ಇಲ್ಲಿದೆ ಸಭೆಯ ಇನ್​ಸೈಡ್ ಡಿಟೇಲ್ಸ್

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ ನೆಪದಲ್ಲಿ ಸಿದ್ದರಾಮಯ್ಯ ಅವರು ಸಚಿವರ ಜೊತೆ ಉಪಹಾರಕೂಟ ಸಭೆ ನಡೆಸಿದರು. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎನ್ನುವ ಹೇಳಿಕೆಗೆ ಸ್ಪಷ್ಟನೆ ನೀಡುವ ಮೂಲಕ ಡಿಕೆ ಶಿವಕುಮಾರ್ ಬಣದ ನಾಯಕರ ಅಸಮಾಧಾನವನ್ನು ಶಮನಗೊಳಿಸುವ ಪ್ರಯತ್ನಿಸಿದ್ದಾರೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು ಎನ್ನುವ ಇನ್​ಸೈಡ್​ ಮಾಹಿತಿ ಇಲ್ಲಿದೆ.

ಉಪಹಾರಕೂಟ ನೆಪದಲ್ಲಿ ಸಚಿವರೊಂದಿಗೆ ಸಿಎಂ, ಡಿಸಿಎಂ ಮಹತ್ವದ ಸಭೆ: ಇಲ್ಲಿದೆ ಸಭೆಯ ಇನ್​ಸೈಡ್ ಡಿಟೇಲ್ಸ್
ಉಪಹಾರಕೂಟ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Nov 04, 2023 | 3:16 PM

ಬೆಂಗಳೂರು, (ನವೆಂಬರ್ 04): ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ ನೆಪದಲ್ಲಿ ಸಿದ್ದರಾಮಯ್ಯ ಅವರು ಸಚಿವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿ ಮಹತ್ವದ ಸಭೆ ಮಾಡಿದ್ದಾರೆ. ಹೌದು…ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಹಾಗೂ ಡಿಸಿಎಂ ಬಣ ನಡುವೆ ಪರಸ್ಪರ ಹೇಳಿಕೆಗಳಿಗೆ ಕಾಂಗ್ರೆಸ್​ನಲ್ಲಿ ಹಲವು ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿದ್ದವು.  ಈ ಎಲ್ಲಾ ಬೆಳವಣಿಗೆಗಳಿಗೆ ಬ್ರೇಕ್ ಹಾಕಲು ಖುದ್ದು ಹೈಕಮಾಂಡ್​ ನಾಯಕರು ಬೆಂಗಳೂರು ದೌಡಾಯಿಸಿ ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜತೆ ಮಹತ್ವದ ಸಭೆ ಮಾಡಿ ಕೆಲ ಖಡಕ್ ಸೂಚನೆಗಳನ್ನು ನೀಡಿದ್ದರು. ಅಲ್ಲದೇ ಈ ಅಧಿಕಾರಿ ಹಂಚಿಕೆ ಹೇಳಿಕೆಗಳಿಗೆ ಕೂಡಲೇ ಬ್ರೇಕ್ ಹಾಕಬೇಕೆಂದು ಸೂಚಿಸಿ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಅದರ ಮುಂದುವರೆದ ಭಾಗವಾಗಿ ಸಿಎಂ ಮತ್ತು ಡಿಸಿಎಂ ಸೇರಿಕೊಂಡು ಉಪಹಾರಕೂಟ ನೆಪದಲ್ಲಿ ಸಚಿವರ ಜೊತೆ ಮಹತ್ವದ ಸಭೆ ಮಾಡಿದ್ದು,  ಈ ಸಭೆಯಲ್ಲಿ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. .

ಸಿಎಂ ಬದಲಾವಣೆ ಬಗ್ಗೆ ಚರ್ಚೆ

ಪ್ರಮುಖವಾಗಿ ಸಭೆಯಲ್ಲಿ ಸಿಎಂ ಬದಲಾವಣೆ ಹೇಳಿಕೆ ವಿಚಾರದ ಬಗ್ಗೆ ಗಂಭೀರವಾಗಿ ಚರ್ಚೆಯಾಗಿದೆ. ನಾನೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂದಿರುವ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂಬ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಗಾದಿಯನ್ನ ಬಿಗಿಯಾಗಿ ಹಿಡಿದಿಟ್ಟುಕೊಂಡಿದ್ದೇನೆ ಎಂಬಂತೆ ನಾನು ಹೇಳಿಲ್ಲ.ಹಾಲಿ ಸಿಎಂ ಇದ್ದೇನೆ, ನಾನು ಮುಂದುವರಿಯುತ್ತೇನೆ ಎಂದಿದ್ದೇನಷ್ಟೇ. ಮುಂದೆ ಹೈಕಮಾಂಡ್ ಬೇರೆ ವಿಚಾರ ಪ್ರಸ್ತಾಪಿಸಿದರೆ ಅದಕ್ಕೆ ಬದ್ಧ ಎಂದು ಪಕ್ಕದಲ್ಲೇ ಕೂತಿದ್ದ ಡಿ.ಕೆ.ಶಿವಕುಮಾರ್ ಉದ್ದೇಶಿಸಿ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೇ ಇದೇ ವೇಳೆ ಏನಪ್ಪ ಶಿವಕುಮಾರ್ ನೀನು ಸಿಎಂ ಆಗ್ತೀಯಾ ಎಂದು ತಮಾಷೆ ಮಾಡಿದ್ದಾರೆ. ಏಯ್.. ಅದೆಲ್ಲ ಏಕೆ.. ಮುಂದೆ ನೋಡೋಣ ಸರ್.. ಇಲ್ಲಿ ಈಗ ಏಕೆ ಎಂದು ಡಿಕೆ ಶಿವಕುಮಾರ್​ ಸಹ ಸಿದ್ದರಾಮಯ್ಯ ಮಾತಿಗೆ ತಮಾಷೆ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್​ ಕತ್ತರಿಸಲು ಡಿಕೆ ಶಿವಕುಮಾರ್​ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ

ಅಧಿಕಾರ ಹಂಚಿಕೆ ಬಗ್ಗೆ ಮಾತನಾಡದಂತೆ ಸೂಚನೆ

ನನ್ನ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಯಾವುದೇ ಅಸಮಾಧಾನ ಇಲ್ಲ. ನಾನೇನೋ ಹೇಳಿಕೆ ನೀಡಿ ಬಿಟ್ಟೆ. ನೀವು ಸಹ ಸಾಲು ಸಾಲಾಗಿ ಹೇಳಿಕೆ ನೀಡುವುದು ಸರಿ ಅಲ್ಲ. ನೀವು ಈ ರೀತಿ ಹೇಳಿಕೆ ನೀಡಿದರೆ ಪಕ್ಷ ಹಾಗೂ ಸರ್ಕಾರದ ಮೇಲೆ ಪ್ರಭಾವ ಬೀರುತ್ತೆ. ನಾವು ನಮ್ಮ ರಾಜಕೀಯವನ್ನ ನೇರವಾಗಿ ಬಿಜೆಪಿ ವಿರುದ್ದ ಮಾಡಬೇಕು. ಆದರೆ ನಾವು ನಾವೇ ರಾಜಕೀಯ ಮಾಡಿಕೊಂಡರೆ ಅದು ಖಂಡಿತ ಸರಿ ಅಲ್ಲ ಎಂದಿದ್ದಾರೆ.

ಬಿಜೆಪಿಯಲ್ಲಿ ಈಗ ನಾಯಕತ್ವ ಎನ್ನುವುದೇ ಇಲ್ಲ. ನಾವು ಅಗ್ರೆಸೀವ್ ಆಗಿ ಹೋಗಬೇಕು. ನೀವು ಏನೇ ಮಾತನಾಡಿದರೂ ಅದು ನಿಮ್ಮ ಇಲಾಖೆ ಬಗ್ಗೆ ಮಾತನಾಡಿ. ನಾವು ಉತ್ತಮ ಆಡಳಿತ ನೀಡುವ ಮೂಲಕ ಜನರನ್ನ ತಲುಪ ಬೇಕು. ಅನಗತ್ಯ ಹೇಳಿಕೆಗಳನ್ನ ನೀಡುವ ಮೂಲಕ ನಮ್ಮ ಅಭಿವೃದ್ದಿ ಕೆಲಸ ಬದಿಗೆ ಸರಿಯುತ್ತೆ. ಲೋಕಸಭೆ ಚುನಾವಣೆ ಗೆಲ್ಲುವತ್ತ ನಾವು ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ. ಸಚಿವರೆಲ್ಲ ತಮಗೆ ಕೊಟ್ಟಿರುವ ಕ್ಷೇತ್ರಗಳ ಜವಾಬ್ದಾರಿಯನ್ನ ಸಮರ್ಥವಾಗಿ ನಿರ್ವಹಿಸಿ ಎಂದ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಲೋಕಸಭಾ ಚುನಾವಣೆ ಬಗ್ಗೆಯೂ ಚರ್ಚೆ

ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆ ಬ್ರೇಕ್​ಫಾಸ್ಟ್ ಮೀಟಿಂಗ್​ನಲ್ಲಿ ಚರ್ಚೆಯಾಗಿದ್ದು, ಪ್ರತಿ ಕ್ಷೇತ್ರದಿಂದ 3ರಿಂದ 5 ಅಭ್ಯರ್ಥಿಗಳ ಪಟ್ಟಿ ಕೊಡುವಂತೆ ವೀಕ್ಷಕ ಜವಾಬ್ದಾರಿ ಹೊಂದಿರುವ ಸಚಿವರುಗಳಿಗೆ ಹೈಕಮಾಂಡ್​ ಸೂಚನೆ ನೀಡಿತ್ತು. ಇದೇ ವಿಚಾರವಾಗಿ ಡಿಕೆ ಶಿವಕುಮಾರ್ ಸಭೆಯಲ್ಲಿ ಪ್ರಸ್ತಾಪಿಸಿ ಕ್ಷೇತ್ರ ಜವಾಬ್ದಾರಿ ಹೊತ್ತುಕೊಂಡಿರುವ ಸಚಿವರಿಗೆ ಕೆಲ ಖಡಕ್ ಸೂಚನೆಗಳನ್ನು ನೀಡಿದ್ದಾರೆ.

ಈ ವರೆಗೆ 8-10 ಕ್ಷೇತ್ರಗಳಿಂದ ಮಾತ್ರ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಉಳಿದವು ನಿಧಾನಗತಿಯಲ್ಲಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿತ್ತು. ಮೊನ್ನೇ ಬೆಂಗಳೂರಿಗೆ ಬಂದಿದ್ದ ಕೆ.ಸಿ.ವೇಣುಗೋಪಾಲ್ ಹಾಗೂ ಸುರ್ಜೇವಾಲ ಈ ಬಗ್ಗೆ ವೇಳೆ ಪ್ರಶ್ನಿಸಿದ್ದರು. ಹೀಗಾಗಿ ಇಂದು ಸಚಿವರ ಜೊತೆ ಸಭೆ ನಡೆಸಿರುವ ಸಿಎಂ ಹಾಗೂ ಡಿಸಿಎಂ ಸರ್ಕಾರದ ವರ್ಚಸ್ಸು ಕಾಪಾಡುವ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ನಿರ್ದೇಶನ ನೀಡಿದ್ದಾರೆ.

ಒಟ್ಟಿನಲ್ಲಿ ಕೆಲ ದಿನಗಳಳಿಂದ ಸಿಎಂ ಅಧಿಕಾರ ಹಂಚಿಕೆ ಬಗ್ಗೆ ನಾಯಕ ಹೇಳಿಕೆಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಸಿಎಂ, ಡಿಸಿಎಂ ಹೈಕಮಾಂಡ್​ ನಾಯಕರ ಸೂಚನೆ ಮೇರೆಗೆ ಇಂದು ಬ್ರೇಕ್ ಫಸ್ಟ್ ಕರೆದಿದ್ದು, ಈ ಬ್ರೇಕ್​ ಫಾಸ್ಟ್ ಸಭೆಯಲ್ಲಿ​  ನಾಯಕರುಗಳ ಹೇಳಿಕೆಗಳಿಗೆ ಬ್ರೇಕ್​ ಹಾಕುವ ಕೆಲಸ ಮಾಡಿದ್ದಾರೆ.ಆದ್ರೆ, ಇದನ್ನು ಸಚಿವರು ಎಷ್ಟರ ಮಟ್ಟಿಗೆ ಪಾಲನೆ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ