ಚುನಾವಣಾ ತಜ್ಞ ನೀಡಿದ್ದ ವರದಿ ಬಗ್ಗೆ ಡಿಕೆಶಿ-ಸಿದ್ದು ಚರ್ಚೆ,150ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಕೈ ಸಿದ್ಧತೆ
ಚುನಾವಣಾ ತಜ್ಞ ಸುನಿಲ್ ಕುನಗೋಲು ನೀಡಿದ್ದ ವರದಿ ಬಗ್ಗೆ ಹೈಕಮಾಂಡ್ ಜೊತೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಚರ್ಚ ನಡೆಸಿದ್ದು,150ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವುದಕ್ಕೆ ಹೈಕಮಾಂಡ್ ಸಿದ್ಧತೆ ನಡೆಸಿದೆ.
ನವದೆಹಲಿ: ಮುಂದಿನ ಸಾರ್ವತ್ರಿಕ ಚುನಾವಣೆಗೆ (Karnataka Assembly Election 2023) ರಣತಂತ್ರ ರೂಪಿಸಲು ರಾಹುಲ್ ಗಾಂಧಿ ಅವರು ಸುನಿಲ್ ಕುನಗೋಲು ಎಂಬ ರಾಜಕೀಯ ತಂತ್ರಜ್ಞನನ್ನು ಕರ್ನಾಟಕಕ್ಕೆ ಕಳುಹಿಸಿದ್ದರು. ಅದರಂತೆ ಸುನೀಲ್ ಕುನಗೋಲು ಅವರು ರಾಜ್ಯಕ್ಕೆ ಭೇಟಿ ನೀಡಿ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ವರದಿಯನ್ನು ಹೈಕಮಾಂಡ್ಗೆ ನೀಡಿತ್ತು. ಇದೀಗ ಸುನೀಲ್ ಕುನಗೋಲು ನೀಡಿದ್ದ ವರದಿ ಬಗ್ಗೆ ಕರ್ನಾಟಕ ಕಾಂಗ್ರೆಸ್ ನಾಯಕರು ಹೈಕಮಾಂಡ್ ಸಭೆಯಲ್ಲಿ ಚರ್ಚೆ ಮಾಡಿದ್ದಾರೆ.
ಇಂದು(ಅಕ್ಟೋಬರ್ 26) ದೆಹಲಿಯ ಕೆ.ಸಿ.ವೇಣುಗೋಪಾಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು. ಈ ವೇಳೆ ಸುನೀಲ್ ಕುನಗೋಲು ವರದಿ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದು, ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕರ್ನಾಟಕ ಕಾಂಗ್ರೆಸ್ ನಾಯಕರು ಹೈಕಮಾಂಡ್ಗೆ ಸಲಹೆ ನೀಡಿದ್ದಾರೆ.
ಆದಷ್ಟು ಬೇಗ ಅಭ್ಯರ್ಥಿ ಆಯ್ಕೆ ಮಾಡುವಂತೆ ಸುನೀಲ್ ಕನಗೋಲು ಅವರು ತಮ್ಮ ವರದಿಯಲ್ಲಿ ಹೈಕಮಾಂಡ್ಗೆ ಸಲಹೆ ನೀಡಿದ್ದರು.ಅದರಂತೆ ಸುನೀಲ್ ಟೀಂ ನೀಡಿದ್ದ ವರದಿ ಆಧಾರ ಮೇಲೆ 150ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವುದಕ್ಕೆ ಸಿದ್ಧತೆ ನಡೆಸಿದ್ದು, ಡಿಸೆಂಬರ್‌ನೊಳಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸು ಬಗ್ಗೆಯೂ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ಸುನೀಲ್ ಕಣಗೋಲು 2014ರಲ್ಲಿ ಪ್ರಶಾಂತ್ ಕಿಶೋರ್ ಜೊತೆ ಕಾರ್ಯನಿರ್ವಹಿಸಿದ್ದರು. ಬಳಿಕ ಪ್ರಶಾಂತ್ ಕಿಶೋರ್ ತಂಡದಿಂದ ಹೊರಬಂದು ತಮ್ಮದೇ ಹೊಸ ತಂಡವನ್ನು ಕಟ್ಟಿದ್ದರು. ಅಲ್ಲಿಂದ ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶಗಳಲ್ಲಿ ಬೇರೆ ಬೇರೆ ಪಕ್ಷಗಳಿಗಾಗಿ ರಾಜಕೀಯ ತಂತ್ರಗಳನ್ನು ರೂಪಿಸಿದ್ದಾರೆ.
ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬಣ ಬಡಿದಾಟ: ದಿಲ್ಲಿಯಲ್ಲಿ ರಾಜೀ ಸಂಧಾನ, 50:50 ಫಾರ್ಮುಲಾ
ಈಗ ಮೈಂಡ್ ಶೇರ್ ಅನಾಲಿಟಿಕ್ಸ್ ಎಂಬ ಸಂಸ್ಥೆ ಸ್ಥಾಪಿಸಿಕೊಳ್ಳುವ ಮೂಲಕ ಕಾಂಗ್ರೆಸ್‌ಗೆ 2024ರ ಲೋಕಸಭಾ ಚುನಾವಣೆಗೆ ತಂತ್ರಗಳನ್ನು ಎಣೆಯಲು ಪ್ರಾರಂಭಿಸಿದ್ದಾರೆ. ಸದ್ಯ ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಗೂ ಕೆಲಸ ಮಾಡಲಿದ್ದು, ಅದರ ಒಂದು ತುಣುಕು ಈಗ ‘ಪೇಸಿಎಂ’ ಎಂಬ ಪೋಸ್ಟರ್ ಮೂಲಕ ಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಒಳಗಿನ ಮೂಲಗಳು ತಿಳಿಸಿವೆ.
ಮುಂದಿನ ವಿಧಾನಸಭಾ ಚುನಾವಣೆಗೆ ರೆಡಿ ಆಗುತ್ತಿರುವ ಕಾಂಗ್ರೆಸ್ ನ ತಂತ್ರಗಾರಿಕೆಯನ್ನು ಸುನಿಲ್ ಕನಗೋಳು ಹಾಗೂ ಅವರ ಟೀಮ್ ರೂಪಿಸಲಿದೆ. ಮುಂದಿನ ಹೋರಾಟಗಳು, ಚುನಾವಣಾ ತಂತ್ರಗಾರಿಕೆ ಕುರಿತು ಈಗಾಗಲೇ ಸಭೆಯಲ್ಲಿ ಚರ್ಚೆ ಮಾಡಿತ್ತು, 2017 ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜೊತೆ ಸುನಿಲ್ ಕನಗೋಳು ಕೆಲಸ ಮಾಡಿದ್ದರು. ಇತ್ತೀಚೆಗಷ್ಟೇ ಕಾಂಗ್ರೆಸ್ ಟಾಸ್ಕ್ ಫೋರ್ಸ್‌ಗೆ ಸುನಿಲ್ ಕನುಗೋಳು ಸೇರಿದ್ದರು. ಈಗಾಗೇ ಚುನಾವಣೆ ತಂತ್ರಗಾರಿಕೆಯ ಬ್ಲ್ಯೂ ಪ್ರಿಂಟ್ ಅನ್ನು ಕಾಂಗ್ರೆಸ್ ರೆಡಿ ಮಾಡಿದೆ.