ಒಬಿಸಿ ಸಮಿತಿಗೆ ನೇಮಕ: ಸಿದ್ದರಾಮಯ್ಯ ಬಗ್ಗೆ ಭವಿಷ್ಯ ನುಡಿದ ವಿಪಕ್ಷ ನಾಯಕರು

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ನಿರ್ಧಾರ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನವನ್ನು ಉಂಟುಮಾಡಿದ್ದು, ವಿಪಕ್ಷ ನಾಯಕರು ತೀವ್ರ ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ನಿವೃತ್ತಿ ಸಮೀಪಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಒಬಿಸಿ ಸಮಿತಿಗೆ ನೇಮಕ: ಸಿದ್ದರಾಮಯ್ಯ ಬಗ್ಗೆ ಭವಿಷ್ಯ ನುಡಿದ ವಿಪಕ್ಷ ನಾಯಕರು
ಸಿಎಂ ಸಿದ್ದರಾಮಯ್ಯ, ಸಚಿವ ಪ್ರಲ್ಹಾದ್​ ಜೋಶಿ
Updated By: ಗಂಗಾಧರ​ ಬ. ಸಾಬೋಜಿ

Updated on: Jul 06, 2025 | 2:54 PM

ಬೆಂಗಳೂರು, ಜುಲೈ 06: ಕಾಂಗ್ರೆಸ್ ಪಾಳೆಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಭುಗಿಲೆದ್ದಿರುವಾಗಲೇ ಸಿಎಂ ಸಿದ್ದರಾಮಯ್ಯರನ್ನು (Siddaramaiah) ದಿಢೀರ್ ಆಗಿ ಎಐಸಿಸಿ ಒಬಿಸಿ ಸಲಹಾ ಮಂಡಳಿ (AICC OBC Advisory Council) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸದ್ಯ ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿದ್ದು, ವಿಪಕ್ಷ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿವೃತ್ತಿ ಸಮಯ ಹತ್ತಿರ ಬಂದಿದೆ: ಆರ್.‌ಅಶೋಕ್

ಎಐಸಿಸಿ ಒಬಿಸಿ ಸಲಹಾ ಮಂಡಳಿಗೆ ಸಿದ್ದರಾಮಯ್ಯ ನೇಮಕ ವಿಚಾರವಾಗಿ ವಿಪಕ್ಷ ನಾಯಕ ಆರ್.‌ಅಶೋಕ್ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯ ನಿವೃತ್ತಿ ಸಮಯ ಹತ್ತಿರ ಬಂದಿದೆ. ನಿವೃತ್ತಿ ಸಮಯ ಹತ್ತಿರ ಬಂದಿದೆ‌ ಎನ್ನುವುದಕ್ಕೆ ಹೈಕಮಾಂಡ್ ರಚನೆ ಮಾಡಿರುವ ಎಐಸಿಸಿ ಓಬಿಸಿ ಸಮಿತಿ ಸಾಕ್ಷಿ ಎಂದಿದ್ದಾರೆ.

ಇದನ್ನೂ ಓದಿ: ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ: ಇದು ಸೆಪ್ಟೆಂಬರ್ ಕ್ರಾಂತಿ ಮುನ್ನುಡಿ ನಾ?

ಇದನ್ನೂ ಓದಿ
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಎಐಸಿಸಿ ಓಬಿಸಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ: ಸೆಪ್ಟೆಂಬರ್ ಕ್ರಾಂತಿ?
ಮೇಕೆದಾಟು: ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಮ್ಮೆ ಕುಮಾರಸ್ವಾಮಿ ಸವಾಲು
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ

ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ಸೇವೆ ಸಾಕು ರಾಜೀನಾಮೆ ಕೊಟ್ಟು ನಿವೃತ್ತರಾಗಿ ಎಂದು ಸೋನಿಯಾ ಗಾಂಧಿ ಹಾಗೂ ರಾಹುವ್ ಗಾಂಧಿ ಪರೋಕ್ಷವಾಗಿ ಹೇಳುತ್ತಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ಈ ರಬ್ಬರ್ ಸ್ಟ್ಯಾಂಪ್ ಕುರ್ಚಿ ಇದ್ದರೆಷ್ಟು, ಬಿಟ್ಟರೆಷ್ಟು. ನಿಮಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುತ್ತಿರಲಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಸಿದ್ದರಾಮಯ್ಯ ಹಠಾವೋ ಪ್ರಾರಂಭ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯ ನವೆಂಬರ್​ನಲ್ಲಿ ರಾಜೀನಾಮೆ ಕೊಡುವುದು ಖಾತ್ರಿ. ಇನ್ನೊಂದು ಬಜೆಟ್ ಮಂಡನೆಗೆ ಅವಕಾಶ ಕೊಡಿ ಎಂದು ಕೇಳಿದ್ದಾರೆ. ರಾಜ್ಯದಿಂದ ಸಿದ್ದರಾಮಯ್ಯರನ್ನ ಹೇಗೆ ಹೊರಗಡೆ ಕಳಿಸಬೇಕು ಅನ್ನೋದು ಶುರುವಾಗಿದೆ. ಖರ್ಗೆರನ್ನು ಹೇಗೆ ಕಳುಹಿಸಿದರೋ ಅದೇ ರೀತಿ ಕಳುಹಿಸುತ್ತಿದ್ದಾರೆ. ಖರ್ಗೆಗೆ ಶೆಡ್ ರೆಡಿ ಮಾಡಿದ್ದರು, ಈಗ ಸಿದ್ದರಾಮಯ್ಯಗೂ ಶೆಡ್​ ರೆಡಿ ಮಾಡಿದ್ದಾರೆ. ಒಂದು ಹೆಜ್ಜೆ ತೆಗೆದು ಇಟ್ಟರೆ ಶೆಡ್​ಗೆ ಹೋದಂತೆ ಎಂದು ಕಿಡಿಕಾರಿದ್ದಾರೆ.

ಕೇಂದ್ರಕ್ಕೆ ಹೋಗಿ ಏನು ಮಾಡುತ್ತಾರೆ: ಸಚಿವ ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ, ಸಿಎಂ ಸ್ಥಾನ ತ್ಯಜಿಸಿ ದೆಹಲಿಗೆ ಬನ್ನಿ ಎಂಬ ಸಂದೇಶ ರವಾನಿಸಿದಂತಿದೆ. ಸಿದ್ದರಾಮಯ್ಯಗೆ ಒಳ್ಳೆಯದಾಗಲಿ. ಇಲ್ಲೇ ಸಂಭಾಳಿಸಲು ಸಾಧ್ಯವಾಗ್ತಿಲ್ಲ, ಕೇಂದ್ರಕ್ಕೆ ಹೋಗಿ ಏನು ಮಾಡುತ್ತಾರೆ. ರಾಷ್ಟ್ರೀಯ ಹಿಂದುಳಿದ ವರ್ಗಕ್ಕೆ ಈಗ ನೇಮಿಸುವ ಉದ್ದೇಶ ಏನಿತ್ತು? ಡಿ.ಕೆ.ಶಿವಕುಮಾರ್​ ಇಂಟರ್ನಲ್ ಆಗಿ ನಾನೇ ಮುಂದಿನ ಸಿಎಂ ಅಂತಾ ಸಾಕಷ್ಟು ಜನರಿಗೆ ಹೇಳುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಹೇಳದೇ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿದ ಎಐಸಿಸಿ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಇನ್ನು ಈ ವಿಚಾರವಾಗಿ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಕಾಂಗ್ರೆಸ್​ ಪಕ್ಷದ ನಿರ್ಧಾರದ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:07 pm, Sun, 6 July 25