ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭೂತಪೂರ್ವ ಗೆಲುವು ಸಾಧಿಸಿದೆ. ಅದರಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಸ್ವ ಕ್ಷೇತ್ರ ವರುಣಾ(Varuna)ದಿಂದ ಸ್ಪರ್ಧಿಸಿ ಬಿಜೆಪಿಯ ವಿ.ಸೋಮಣ್ಣ ಅವರನ್ನ ಸೋಲಿಸಿ, ಮುಖ್ಯಮಂತ್ರಿ ಸ್ಥಾನವನ್ನ ಅಲಕಂರಿಸಿದ್ದಾರೆ. ಇದೀಗ ಸಿದ್ದರಾಮಯ್ಯನವರು ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಇಂದು (ಜೂ.10) ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿಳಿಗೆರೆ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯರಿಂದ ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಇಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಸಿದ್ದರಾಮಯ್ಯನವರು ಹೊರಡಲಿದ್ದು, ಮಧ್ಯಾಹ್ನ 12.20ಕ್ಕೆ ಸುತ್ತೂರು ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ಬಳಿಕ 12.35ಕ್ಕೆ ಕೃತಜ್ಞತಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಧ್ಯಾಹ್ನ 2.35ರವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ನಂತರ ಮಧ್ಯಾಹ್ನ 2.45ಕ್ಕೆ ಸುತ್ತೂರು ಮಠಕ್ಕೆ ಆಗಮಿಸಲಿದ್ದಾರೆ. ಅಲ್ಲಿ ಸುತ್ತೂರು ಶ್ರಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದು, ಬಳಿಕ ಹೆಲಿಕ್ಯಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ, ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ, ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ (ಜೂ.11) ಬೆಳಗ್ಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.
ಇದನ್ನೂ ಓದಿ:CM Siddaramaiah: ವರುಣಾ ಕ್ಷೇತ್ರದ ಜನರಿಗೆ ತಮ್ಮ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಿದ ಸಿದ್ದರಾಮಯ್ಯ
ಸ್ವಕ್ಷೇತ್ರ ವರುಣಾಕ್ಕೆ ಸಿಎಂ ಸಿದ್ದರಾಮಯ್ಯನವರು ಭೇಟಿ ನೀಡುತ್ತಿದ್ದು, ಈ ಹಿನ್ನಲೆ ವರುಣ ಕ್ಷೇತ್ರದ ಜನರು ಬಂಪರ್ ಕೊಡುಗೆ ನಿರೀಕ್ಷೆಯಲ್ಲಿದ್ದಾರೆ. ಇಂದೇ ವರುಣ ಕ್ಷೇತ್ರದಲ್ಲಿ ತಾಲೂಕು ಕೇಂದ್ರ ಘೋಷಣೆ ಮಾಡುತ್ತಾರಾ ಸಿಎಂ ಸಿದ್ದರಾಮಯ್ಯ? ಹೌದು ಚುನಾವಣೆ ವೇಳೆ ನಂಜನಗೂಡು, ಟಿ.ನರಸೀಪುರ ಹಾಗೂ ಮೈಸೂರು ತಾಲೂಕಗಳಿಗೆ ಹಂಚಿ ಹೋಗಿರುವ ವರುಣಾ ಕ್ಷೇತ್ರವನ್ನ ತಾಲೂಕು ಕೇಂದ್ರ ಮಾಡುವ ಬಗ್ಗೆ ಚರ್ಚೆಯಾಗಿತ್ತು. ಇದೀಗ ಜನರಿಗೆ ಕೃತಜ್ಞತೆ ಸಲ್ಲಿಸಲು ಆಗಮಿಸುತ್ತಿರುವ ಸಿಎಂ ಸಿದ್ದಾಮಯ್ಯ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ತಾಲೂಕು ಕೇಂದ್ರ ಘೋಷಣೆ ಮಾಡುತ್ತಾರ ? ಕಾದು ನೋಡಬೇಕಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:16 am, Sat, 10 June 23