ಸಂಪುಟದಲ್ಲಿ ಬೆಂಬಲಿಗರ ಸೇರ್ಪಡೆಗೆ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಸರ್ಕಸ್

ಕರ್ನಾಟಕ ಕಾಂಗ್ರೆಸ್​ನ ಬಣ ರಾಜಕಾರಣ ಸಚಿವ ಸಂಪುಟ ರಚನೆಯಲ್ಲೂ ಮುಂದುವರಿದಿದೆ. ತಮ್ಮ ಬೆಂಬಲಿಗರನ್ನು ಸಂಪುಟದಲ್ಲಿ ಸೇರಿಸಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸರ್ಕಸ್ ನಡೆಸುತ್ತಿದ್ದಾರೆ.

ಸಂಪುಟದಲ್ಲಿ ಬೆಂಬಲಿಗರ ಸೇರ್ಪಡೆಗೆ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಸರ್ಕಸ್
ಸಂಪುಟದಲ್ಲಿ ಬೆಂಬಲಿಗರ ಸೇರ್ಪಡೆಗೆ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಸರ್ಕಸ್
Image Credit source: PTI
Rakesh Nayak Manchi

Updated on: May 22, 2023 | 9:55 PM

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ನ (Karnataka Congress) ಬಣ ರಾಜಕಾರಣ ಸಚಿವ ಸಂಪುಟ ರಚನೆಯಲ್ಲೂ ಮುಂದುವರಿದಿದೆ. ತಮ್ಮ ಬೆಂಬಲಿಗರನ್ನು ಸಂಪುಟದಲ್ಲಿ ಸೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸರ್ಕಸ್ ನಡೆಸುತ್ತಿದ್ದು, ಯಾರಿಗೆ ಸಚಿವ ಸ್ಥಾನ ನೀಡೋದಪ್ಪಾ ಅಂತ ಹೈಕಮಾಂಡ್​ಗ್ ತಲೆ ಬಿಸಿಯಾಗಿದೆ. ಸದ್ಯ ಇಂದು ವಿಧಾನಸಭೆ ಅಧಿಕವೇಶ ಆರಂಭಗೊಂಡಿದ್ದು, ಮೇ 24ರಂದು ಮುಕ್ತಾಯವಾಗಲಿದೆ. ನಂತರ ಸಿಎಂ ಮತ್ತು ಡಿಸಿಎಂ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.

ಡಿಕೆ ಶಿವಕುಮಾರ್ ಅವರಿಗೆ ಸೆಡ್ಡು ಹೊಡೆದು ತಮ್ಮ ಬೆಂಬಲಿಗರನ್ನು ಸಂಪುಟಕ್ಕೆ ಸೇರಿಸಲು ಕಸರತ್ತು ನಡೆಸುತ್ತಿರುವ ಸಿದ್ದರಾಮಯ್ಯ ಅವರು, ರಣತಂತ್ರ ರೂಪಿಸಲು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಸಚಿವ ಕೆ.ಜೆ.ಜಾರ್ಜ್‌ ಹಾಗೂ ಶಾಸಕ ಭೈರತಿ ಸುರೇಶ್ ಅವರ ಜೊತೆ ಗೌಪ್ಯ ಸ್ಥಳದಲ್ಲಿ ಆಪ್ತರ ಜೊತೆ ಮಾತುಕತೆ ನಡೆಸಿದ್ದಾರೆ. ನಾಯಕರ ನಡುವೆ ಮುಂದಿನ ನಡೆ ಬಗ್ಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರ; ನಾಳೆ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಭಾರೀ ಪೈಪೋಟಿ ನಡೆದಿತ್ತು. ಕೊನೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿತ್ತು. ಅದರಂತೆ ಸಿಎಂ ಸ್ಥಾನ ಸಿದ್ದರಾಮಯ್ಯ ಪಾಲಾಗಿದ್ದು, ಡಿಕೆ ಶಿವಕುಮಾರ್ ಅವರು ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಡುವಂತಾಯಿತು. ಹೈಕಮಾಂಡ್ ಇಬ್ಬರ ನಡುವೆ ಅಧಿಕಾರ ಹಂಚಿಕೆ ಸೂತ್ರ ರಚಿಸಿರುವ ಸಾಧ್ಯತೆ ಇದೆ ಎಂದು ಕೆಲವು ಮೂಲಗಳು ಅಭಿಪ್ರಾಯಪಟ್ಟಿದ್ದವು. ಆದರೆ, ಈ ವಿಚಾರವಾಗಿ ಎಐಸಿಸಿ ಅಧಿಕೃತ ಹೇಳಿಕೆಯನ್ನೇನೂ ನೀಡಿಲ್ಲ. ಈ ಬಗ್ಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲವಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಎಂಬಿ ಪಾಟೀಲ್ ಅಧಿಕಾರ ಹಂಚಿಕೆ ಮಾತುಕತೆಯಾಗಿಲ್ಲ ಎಂದು ಹೇಳಿದ್ದಾರೆ.

ಇನ್ನು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಜೊತೆ ಎಂಟು ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಪೈಕಿ ಹೆಚ್ಚಿನವರು ಸಿದ್ದರಾಮಯ್ಯ ಅವರ ಬಣಕ್ಕೆ ಸೇರಿದವರಾಗಿದ್ದಾರೆ. ಸದ್ಯ ಸಂಪೂರ್ಣ ಸಂಪುಟ ರಚನೆಗೆ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದು, ಮೇ 24ರ ಒಳಗಾಗಿ ಪೂರ್ಣಗೊಳಿಸುವುದಾಗಿ ಹೈಕಮಾಂಡ್ ಸೂಚಿಸಿದೆ. ಆದರೆ ಯಾರಿಗೆಲ್ಲ ಮಂತ್ರಿಗಿರಿ ಸಿಗಲಿದೆ ಎಂಬದನ್ನು ಕಾದುನೋಡಬೇಕಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 pm, Mon, 22 May 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us