ಮೈಸೂರು ಕಾಂಗ್ರೆಸ್​​ನಲ್ಲಿ ಅಂತರಿಕ ಜಗಳ ಬಹಿರಂಗ: ಸಿದ್ದರಾಮಯ್ಯಗೆ ಬೆಂಬಲ ನೀಡದ ಮಾಜಿ ಶಾಸಕಗೆ ಪಕ್ಷದಿಂದ ಗೇಟ್ ಪಾಸ್‌?

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರಿದೆ. ಆದ್ರೆ, ಸಿಎಂ ತವರು ಜಿಲ್ಲೆ ಮೈಸೂರು ಕಾಂಗ್ರೆಸ್​ನಲ್ಲಿ ನಾಯಕರ ಆತಂರಿಕೆ ಕಚ್ಚಾಟ ಬಹಿರಂಗವಾಗಿದೆ.

ಮೈಸೂರು ಕಾಂಗ್ರೆಸ್​​ನಲ್ಲಿ ಅಂತರಿಕ ಜಗಳ ಬಹಿರಂಗ: ಸಿದ್ದರಾಮಯ್ಯಗೆ ಬೆಂಬಲ ನೀಡದ ಮಾಜಿ ಶಾಸಕಗೆ ಪಕ್ಷದಿಂದ ಗೇಟ್ ಪಾಸ್‌?
ಪಿ ವಾಸು
Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on: Jul 18, 2023 | 11:10 AM

ಮೈಸೂರು, (ಜುಲೈ 18): ಮುಖ್ಯಮಂತ್ರಿ ಸಿದ್ದರಾಮಯ್ಯನವರ(Siddaramaiah) ತವರು ಜಿಲ್ಲೆ ಮೈಸೂರು(Mysuru) ಕಾಂಗ್ರೆಸ್​​ನಲ್ಲಿ (Congress) ಅಂತರಿಕ ಜಗಳ ತಾರಕಕ್ಕೇರಿದ್ದು, ಇದೀಗ ಬಯಲಿಗೆ ಬಿದ್ದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡಲಿಲ್ಲವೆಂದು ಮಾಜಿ ಶಾಸಕ ಪಿ ವಾಸು(p vasu) ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದು, ವಾಸು ವಿರುದ್ಧ ತಮ್ಮ ಬೆಂಬಲಿಗರನ್ನು ಛೂ ಬಿಟ್ಟಿದ್ದಾರೆ. ಮಾಜಿ ನಗರಸಭೆ ಸದಸ್ಯ, ಸಿದ್ದರಾಮಯ್ಯನವರ ಬೆಂಬಲಿಗ ಆರ್.ಸುನಂದಕುಮಾರ್ ಅವರು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆಂಬ ಆರೋಪ ಹಿನ್ನೆಲೆ ವಾಸು ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಮೂರ್ತಿಗೆ ಪತ್ರ ಬರೆದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದುಕೊಂಡು ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಬಿಜೆಪಿಯಲ್ಲಿ ತಮ್ಮ ಮಗ ಸ್ಪರ್ಧಿಸಿರುವ ಕಾರಣ ಅವರ ಪರ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವು ಕೆಲಸ ಮಾಡಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ವಿರುದ್ಧವೂ ವಾಸು ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸುನಂದಕುಮಾರ್ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಪಿ ವಾಸು ವಿರುದ್ಧ ಸಿದ್ದರಾಮಯ್ಯನವರೇ ಸುನಂದಕುಮಾರ್ ಅವರನ್ನು ಛೂ ಬಿಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದು, ವಾಸು ವಿರುದ್ಧ ಪಕ್ಷ ಏನು ಕ್ರಮಕೈಗೊಳ್ಳುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ವಾಸು ಅವರ ಪುತ್ರ ಕವೀಶ್‌ಗೌಡ ಅವರು ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆಯಾಗಿದ್ದರು. ಮಗ ಬಿಜೆಪಿ ಸೇರಿದ್ದೆ ತಡ ಮಾಜಿ ಶಾಸಕ ವಾಸು ವಿಚಲಿತರಾಗಿದ್ದರು. ಅಲ್ಲದೇ ಅಪ್ಪ ಕಾಂಗ್ರೆಸ್, ಮಗ ಬಿಜೆಪಿ ಅಂತೆಲ್ಲ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಬಿಜೆಪಿ ಸೇರಿದ್ದ ವಾಸು ಪುತ್ರ ಕವೀಶ್‌ಗೌಡ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್