AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Row: ದೇಶದಲ್ಲಿ ಷರಿಯಾ ಕಾನೂನು ತರಲು ಕಾಂಗ್ರೆಸ್ ಯತ್ನ; ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಾಗ್ದಾಳಿ

ಸಿದ್ದರಾಮಯ್ಯ ಸರ್ಕಾರದ ಉದ್ದೇಶ ಕೇವಲ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧ ವಾಪಸ್ ಪಡೆಯುವುದಲ್ಲ. ಬದಲಿಗೆ ಷರಿಯಾ ಕಾನೂನನ್ನು ಜಾರಿಗೆ ತರುವುದಾಗಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Hijab Row: ದೇಶದಲ್ಲಿ ಷರಿಯಾ ಕಾನೂನು ತರಲು ಕಾಂಗ್ರೆಸ್ ಯತ್ನ; ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಾಗ್ದಾಳಿ
ಸಿದ್ದರಾಮಯ್ಯ & ಗಿರಿರಾಜ್ ಸಿಂಗ್
Ganapathi Sharma
|

Updated on: Dec 23, 2023 | 1:20 PM

Share

ನವದೆಹಲಿ, ಡಿಸೆಂಬರ್ 23: ಕರ್ನಾಟಕ ಕಾಂಗ್ರೆಸ್ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ (Hijab Row) ಆದೇಶವನ್ನು ಹಿಂಪಡೆಯವುದಾಗಿ ಘೋಷಣೆ ಮಾಡಿರುವ ಬಗ್ಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ (Giriraj Singh) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಉದ್ದೇಶ ಕೇವಲ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧ ವಾಪಸ್ ಪಡೆಯುವುದಲ್ಲ. ಬದಲಿಗೆ ಷರಿಯಾ ಕಾನೂನನ್ನು ಜಾರಿಗೆ ತರುವುದಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಷರಿಯಾ ಕಾನೂನು ಜಾರಿಯಾಗಲಿದೆ ಎಂದು ಅವರು ಟೀಕಿಸಿದ್ದಾರೆ.

‘ಇದು ಕೇವಲ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕುವುದಲ್ಲ. ರಾಜ್ಯದಲ್ಲಿ ಷರಿಯಾ ಕಾನೂನನ್ನು ಸ್ಥಾಪಿಸುವ ಸಂಚು ಈ ನಿರ್ಧಾರದ ಹಿಂದಿದೆ. ರಾಹುಲ್ ಗಾಂಧಿ, ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟ ದೇಶದಲ್ಲಿ ಸರ್ಕಾರ ರಚಿಸಿದರೆ, ನಂತರ ಇಸ್ಲಾಮಿಕ್ ಷರಿಯಾ ಕಾನೂನು ಜಾರಿಗೆ ಬರಲಿದೆ’ ಎಂದು ಗಿರಿರಾಜ್ ಸಿಂಗ್ ‘ಎಎನ್​ಐ’ ಸುದ್ದಿಸಂಸ್ಥೆಗೆ ಹೇಳಿಕೆ ನೀಡಿದ್ದಾರೆ.

ಮುಸ್ಲಿಮರನ್ನು ಮೆಚ್ಚಿಸಲು ನಿಷೇಧ ತೆರವು: ಯಡಿಯೂರಪ್ಪ

ಕರ್ನಾಟಕದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಮುಸ್ಲಿಂ ಸಮುದಾಯವನ್ನು ಮೆಚ್ಚಿಸಲು ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ, ಇದನ್ನು ಕೂಡಲೇ ಹಿಂಪಡೆಯಬೇಕು. ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸಾರ್ವಜನಿಕರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಟಿಪ್ಪುವಿನ ಅವತಾರವೇ ಸಿದ್ದರಾಮಯ್ಯ: ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ ಸೇರಿದಂತೆ ಬಿಜೆಪಿಯ ಅನೇಕ ನಾಯಕರು ಸಿದ್ದರಾಮಯ್ಯ ಅವರ ನಿರ್ಧಾರವನ್ನು ಖಂಡಿಸಿದ್ದಾರೆ. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಂತೂ ಸಿದ್ದರಾಮಯ್ಯ ಅವರನ್ನು ಎರಡನೇ ಟಿಪ್ಪು ಸುಲ್ತಾನ್ ಎಂದು ಟೀಕಿಸಿದ್ದು, ಟಿಪ್ಪುವಿನ ಅವತಾರವೇ ಸಿದ್ದರಾಮಯ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ