AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತೀಂದ್ರ ವಿಡಿಯೋ ಆರೋಪಕ್ಕೆ ಸಾಕ್ಷಿ ಸಮೇತ ಹೆಚ್​ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಮಾಜಿ ಶಾಸಕ ಯತೀಂದ್ರ ವಿಡಿಯೋ ವೈರಲ್​ ಆಗುತ್ತಿದ್ದಂತೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದರು. ಇದೀಗ ದಾಖಲೆ ಬಿಡುಗಡೆ ಮಾಡುವ ಮೂಲಕ ಹೆಚ್‌ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಿಎಸ್‌ಆರ್ ಪಂಢ್‌ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. 

ಯತೀಂದ್ರ ವಿಡಿಯೋ ಆರೋಪಕ್ಕೆ ಸಾಕ್ಷಿ ಸಮೇತ ಹೆಚ್​ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
ಗಂಗಾಧರ​ ಬ. ಸಾಬೋಜಿ
|

Updated on:Nov 16, 2023 | 4:55 PM

Share

ಬೆಂಗಳೂರು, ನವೆಂಬರ್​​​ 16: ಸಿಎಂ ಸಿದ್ದರಾಮಯ್ಯ (Siddaramaiah) ಮಾಜಿ ಶಾಸಕ ಪುತ್ರ ಯತೀಂದ್ರ ವಿಡಿಯೋ ವೈರಲ್​ ಆಗುತ್ತಿದ್ದಂತೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದರು. ಇದೀಗ ದಾಖಲೆ ಬಿಡುಗಡೆ ಮಾಡುವ ಮೂಲಕ ಹೆಚ್‌ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಯತೀಂದ್ರ ಮಾತನಾಡಿದ್ದು ಸಿಎಸ್‌ಆರ್ ಫಂಡ್‌ ಬಗ್ಗೆ ಎಂದಿದ್ದ ಸಿಎಂ, ಇದೀಗ ಸಿಎಸ್‌ಆರ್ ಪಂಢ್‌ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಹೆಚ್‌ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ತಾ ಕಳ್ಳ ಇತರರ ನಂಬ’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಪೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಹೆಚ್​ಡಿ ಕುಮಾರಸ್ವಾಮಿ  ಅವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

ಪೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು. ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಕಮಿಷನ್​ನಲ್ಲಿ ಮುಳುಗೇಳುತ್ತಿದ್ದ ಹೆಚ್​ಡಿಕೆಗೆ ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಲಂಚದ ವ್ಯವಹಾರಗಳೇ: ಸಿದ್ದರಾಮಯ್ಯ ತಿರುಗೇಟು

ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ. ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:46 pm, Thu, 16 November 23

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ