ಪ್ರತಿಭಟನೆಗೆಂದು ದಿಲ್ಲಿಗೆ ಹೊರಟಿದ್ದ ಹುಬ್ಬಳ್ಳಿ ರೈತರ ಸೆರೆ: ಮಧ್ಯಪ್ರದೇಶ ಸರ್ಕಾರದ ಕ್ರಮಕ್ಕೆ ಸಿದ್ದರಾಮಯ್ಯ ಕಿಡಿ

|

Updated on: Feb 12, 2024 | 2:52 PM

ವಿವಿಧ ಬೇಡಿಕೆ ಈಡೇರಿಸುವಂತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಕರ್ನಾಟಕದದಿಂದ ಹೊರಟ್ಟಿದ್ದ ಹುಬ್ಬಳ್ಳಿಯ ರೈತರನ್ನು ಭೂಪಾಲ್‌ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ಜಿಲ್ಲೆಯ 16 ರೈತರು ಸೇರಿ ರಾಜ್ಯದ 70 ಜನರನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಪಾಲ್ ಸರ್ಕಾರದ ನಡೆಗೆ ಕಿಡಿಕಾರಿದ್ದಾರೆ.

ಪ್ರತಿಭಟನೆಗೆಂದು ದಿಲ್ಲಿಗೆ ಹೊರಟಿದ್ದ ಹುಬ್ಬಳ್ಳಿ ರೈತರ ಸೆರೆ: ಮಧ್ಯಪ್ರದೇಶ ಸರ್ಕಾರದ ಕ್ರಮಕ್ಕೆ ಸಿದ್ದರಾಮಯ್ಯ ಕಿಡಿ
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು, (ಫೆಬ್ರವರಿ 12): ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆಂದು ದೆಹಲಿಗೆ (new Delhi) ಹೊರಟ್ಟಿದ್ದ ಹುಬ್ಬಳ್ಳಿಯ(Hubballi) ರೈತರನ್ನು (farmers) ಭೂಪಾಲ್ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಧ್ಯಪ್ರದೇಶ  ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಭೂಪಾಲ್ ಪೊಲೀಸರ ನಡೆಯನ್ನು ಖಂಡಿಸಿದ್ದಾರೆ.

ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಕಳಿಸಿಕೊಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೆಹಲಿಗೆ ಪ್ರತಿಭಟನೆಗೆ ತೆರಳುತ್ತಿದ್ದ ಕರ್ನಾಟಕದ 70 ರೈತರು ಭೋಪಾಲ್​ನಲ್ಲಿ ಪೊಲೀಸ್ ವಶಕ್ಕೆ

ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.


ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರ ಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು ಎಂದು ಕಿಡಿಕಾರಿದ್ದಾರೆ.

ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ. ಜೈ ಕಿಸಾನ್” ಎಂದು ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ