ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಾಲಿನ ಬೆಂಬಲ ಬೆಲೆ ಹೆಚ್ಚಳ, ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ‌ ರೂ. ಅನುದಾನ: ಸಿದ್ಧರಾಮಯ್ಯ ಘೋಷಣೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 29, 2023 | 3:49 PM

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಬೆಂಬಲ ಬೆಲೆ 5-6 ರೂಪಾಯಿ ಹೆಚ್ಚಳ ಮಾಡಲಾಗುವುದು. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ‌ ರೂ. ಅನುದಾನ ಕೊಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಾಲಿನ ಬೆಂಬಲ ಬೆಲೆ ಹೆಚ್ಚಳ, ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ‌ ರೂ. ಅನುದಾನ: ಸಿದ್ಧರಾಮಯ್ಯ ಘೋಷಣೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Image Credit source: .thehansindia.com
Follow us on

ರಾಮನಗರ: ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಹಾಲಿನ ದರ ಹೆಚ್ಚಿಸುತ್ತೇವೆ. ರೈತರಿಗೆ ಬೆಂಬಲ ಬೆಲೆ 5-6 ರೂಪಾಯಿ ಹೆಚ್ಚಳ ಮಾಡಲಾಗುವುದು. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ‌ ರೂ. ಅನುದಾನ ಕೊಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು. ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಶಾದಿ‌ಮಹಲ್ ಉದ್ಘಾಟಿಸಿ ಅವರು ಮಾತನಾಡಿ, ಬಿಜೆಪಿ ಆಡಳಿತದಲ್ಲಿ ಜನರು ಜೀವನ ಮಾಡುವುದೇ ಕಷ್ಟವಾಗಿದೆ. ಸಾರ್ವಜನಿಕರ ತೆರಿಗೆ ಹಣದಿಂದಲೇ ನಾವು ನಿಮಗೆ ಕೊಡುವುದು. ನಾವು ನಮ್ಮಪ್ಪನ‌ ಮನೆಯಿಂದ ತಂದು ನಿಮಗೆ ಹಣ ಕೊಡುವುದಿಲ್ಲ. ನೆಂಟಸ್ತನ ಮಾಡುವಾಗ ಮಾತ್ರ ಜಾತಿ ಇರಬೇಕು. ಚುನಾವಣೆಯಲ್ಲಿ ಮತದಾನ ಮಾಡುವಾಗ ಜಾತಿ‌ ಇರಬಾರದು. ನಾವು ಅಧಿಕಾರಕ್ಕೆ ಬಂದರೆ ಮಾಗಡಿ ಕೈಗಾರಿಕಾ ಪ್ರದೇಶ ನಿರ್ಮಾಣದ ನೋಟಿಫಿಕೇಷನ್ ರದ್ದು ಮಾಡುತ್ತೇವೆ. ಅಚ್ಛೇ ದಿನ್ ಆಯೇಗಾ ಅಂತಿದ್ರು, ಯಾವುದೇ ಅಚ್ಛೆ ದಿನ್ ಬರಲಿಲ್ಲ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ಮಾಡಿದರು.

ಬಡವರಿಗೆ ಅನುಕೂಲವಾಗಲಿ ಅಂತಾ ಶಾದಿಮಹಲ್ ನಿರ್ಮಾಣ 

ವೋಟಿಗಾಗಿ ಶಾದಿಮಹಲ್ ನಿರ್ಮಾಣ ಮಾಡಿಲ್ಲ. ಬಡವರಿಗೆ ಅನುಕೂಲವಾಗಲಿ ಅಂತಾ ನಿರ್ಮಾಣ ಮಾಡಿದ್ದೇವೆ. ನಾನು ಸಿಎಂ ಆಗಿದ್ದಾಗ ಶಾದಿಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಆದರೆ ಇದೀಗ ಬಿಜೆಪಿ ಸರ್ಕಾರ ನಿಲ್ಲಿಸಿದೆ. ಆಗ ಶಾದಿಭಾಗ್ಯ ವಿರೋಧಿಸಿ ಬಿಜೆಪಿಯವರು ಪ್ರತಿಭಟನೆ ಮಾಡಿದ್ರು. ಯಾಕೆ ಕಲ್ಲು ಹಾಕುವ ಕೆಲಸ ಮಾಡ್ತೀರಾ ಅಂತಾ ಬಿ.ಎಸ್ ಯಡಿಯೂರಪ್ಪಗೆ ಹೇಳಿದ್ದೆ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿಯಲ್ಲಿ ಯಾರ ಮನೆ ಕಾಯಬೇಕಿಲ್ಲ, ಭವಾನಿ ರೇವಣ್ಣ ಪಕ್ಷ ಸೇರುವುದಾದರೆ ಸ್ವಾಗತ: ಅಶ್ವತ್ಥ್ ನಾರಾಯಣ

ಹೆಚ್.​ಡಿ. ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ 

ಇನ್ನು ಸಿದ್ದರಾಮಯ್ಯ ಪಕ್ಷ ಕಟ್ಟಿ 5 ಸ್ಥಾನ ಗೆಲ್ಲಲಿ ಎಂಬ ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಾನು ಯಾಕೆ ಹೊಸ ಪಕ್ಷ ಕಟ್ಟಲಿ ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಹೇಳಿದ ಅಂತಾ ಹೊಸ ಪಕ್ಷ ಕಟ್ಟಲು ಹೋಗಲಾ? ಬಿಜೆಪಿ ಸೋಲಿಸಲು ಕಾಂಗ್ರೆಸ್​ನಿಂದ ಮಾತ್ರ ಸಾಧ್ಯ. ಬಿಜೆಪಿ ಜತೆ ಹೋದವರ್ಯಾರು?, JDSಗೆ ಯಾವುದೇ ತತ್ವ ಸಿದ್ಧಾಂತ ಇಲ್ಲ. ಜೆಡಿಎಸ್​​ ಪಕ್ಷ ಕಾಂಗ್ರೆಸ್​ನ ವೋಟ್​ ವಿಭಜಿಸಲು ಪ್ರಯತ್ನಿಸುತ್ತಿದೆ. ನಮ್ಮ ವೋಟ್ ಒಡೆದು ಬಿಜೆಪಿಗೆ ಅನುಕೂಲ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕರ್ನಾಟಕದ ಅಮ್ಮ ಭವಾನಿ ರೇವಣ್ಣ​​: ಸೋಶಿಯಲ್​ ಮೀಡಿಯಾದಲ್ಲಿ ಕಾರ್ಯಕರ್ತರ ಫೈಟ್​​

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ

ಸಿ.ಟಿ.ರವಿ ನನ್ನನ್ನು ಸಿದ್ರಾಮುಲ್ಲಾಖಾನ್ ಎಂದು ಹೇಳುತ್ತಾನೆ. ನಾನು ಹಿಂದೂ ವಿರೋಧಿ ಅಲ್ಲ, ನಾನು ಕೂಡ ಅಪ್ಪಟ ಹಿಂದೂ.
ನಾನು ಮುಖ್ಯಮಂತ್ರಿ ಆಗಿದ್ದಾಗ ಯಾವುದೇ ಜಾತಿ ನೋಡ್ತಿರಲಿಲ್ಲ. ಹಸಿವು ಒಂದೊಂದು ಜಾತಿಗೆ ಒಂದೊಂದು ರೀತಿ ಇರುವುದಿಲ್ಲ. ಸಿಎಂ ಆದ ತಕ್ಷಣ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೆ. ಬಿಜೆಪಿಯವರು ‘ಅನ್ನಭಾಗ್ಯ’ ಯೋಜನೆಯಡಿ 5 ಕೆಜಿ ಕೊಡ್ತಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಿದ್ಧರಾಮಯ್ಯ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:42 pm, Sun, 29 January 23