AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಅಬ್ಬರಿಸಿದ ಸಿದ್ದರಾಮಯ್ಯ; ಭಾಷಣದುದ್ದಕ್ಕೂ ಮೋದಿ, ಬಿಜೆಪಿ ವಿರುದ್ಧ ಟೀಕಾ ಪ್ರಹಾರ

ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ವತಿಯಿಂದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಿತು, ಈ ಕಾರ್ಯಕ್ರಮದಲ್ಲಿ ಅಬ್ಬರದ ಭಾಷಣ ಮಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಕೊಪ್ಪಳದಲ್ಲಿ ಅಬ್ಬರಿಸಿದ ಸಿದ್ದರಾಮಯ್ಯ; ಭಾಷಣದುದ್ದಕ್ಕೂ ಮೋದಿ, ಬಿಜೆಪಿ ವಿರುದ್ಧ ಟೀಕಾ ಪ್ರಹಾರ
ಸಿದ್ದರಾಮಯ್ಯImage Credit source: PTI
TV9 Web
| Updated By: Rakesh Nayak Manchi|

Updated on:Jan 17, 2023 | 9:31 PM

Share

ಕೊಪ್ಪಳ: ನಮ್ಮ ಸರ್ಕಾರದ ಅವಧಿಯಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ನಾನು ಅಧಿಕಾರದಿಂದ ಇಳಿಯುವಾಗ ನಮ್ಮ ರಾಜ್ಯದ ಸಾಲ 2 ಲಕ್ಷದ 42 ಸಾವಿರ ಕೋಟಿ ಇತ್ತು. ಬಿಜೆಪಿ ಸರ್ಕಾರ (BJP Govt) ಬಂದ ನಂತರ ಈ ಸಾಲದ ಪ್ರಮಾಣ ಎರಡು ಪಟ್ಟು ಹೆಚ್ಚಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು. ಜಿಲ್ಲೆಯಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅಬ್ಬರದ ಭಾಷಣ ಮಾಡಿದ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಸ್ತುತ ರಾಜ್ಯದ ಪ್ರತಿ ಪ್ರಜೆಯ ಮೇಲೂ 86 ಸಾವಿರ ಸಾಲ ಇದೆ. ರಾಜ್ಯವನ್ನ ಬಿಜೆಪಿ ದಿವಾಳಿ ಮಾಡುತ್ತಿದೆ ಎಂದು ಟೀಕಿಸಿದರು.

ರಾಜ್ಯ ಬಿಜೆಪಿ ರಾಜ್ಯವನ್ನು ದಿವಾಳಿ ಮಾಡಿದ ರೀತಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳಿ‌ ಯುವಕರನ್ನ ದಾರಿ ತಪ್ಪಿಸಿ ಯುವ ಸಮೂಹವನ್ನ ನಾಶ ಮಾಡಿದ್ದಾರೆ. ಉದ್ಯೋಗ ಕೇಳಿದರೆ ಪಕೋಡ ಮಾಡಿ ಅಂತ ಹೇಳಿದ್ದಾರೆ. ಇಷ್ಟೆಲ್ಲಾ ಆದಮೇಲೂ ಮೋದಿ ಅವರು ಯುವಜನೋತ್ಸವಕ್ಕೆ ಬಂದಿದ್ದರು. ಅದು ಯುವಜನೋತ್ಸವ ಅಲ್ಲ, ಯುವಜನ ವಿನಾಶೋತ್ಸವ ಎಂದು ಟೀಕಿಸಿದರು.

ದೇಶದಲ್ಲಿ ದ್ವೇಶದ ಸ್ಥೀತಿ ಹೆಚ್ಚಾಗಿದೆ. ಅದನ್ನ ಸರಿಪಡಿಸಲು‌ ನಮ್ಮ ರಾಹುಲ್ ಗಾಂಧಿ‌ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಈ ದೇಶಕ್ಕೆ ಮಾರಕವಾಗಿದ್ದು, ಅದನ್ನ ಬೇರು ಸಮೇತ ಕಿತ್ತು ಹಾಕಬೇಕಿದೆ. ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕೂಡ ಅಷ್ಟೇ ಸತ್ಯ ಎಂದರು.

ಇದನ್ನೂ ಓದಿ: ಮಹಿಳೆ ನೋಡಿ ಟ್ರೋಲ್ ಆದ ಸಿದ್ದು; ಬಾಗಲಕೋಟೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕಾಧ್ಯಕ್ಷೆ ರಿಯಾಕ್ಷನ್ ಇಲ್ಲಿದೆ

ಬಿಜೆಪಿಯವರು ಏನೇ ಆಟ ಆಡಿದರೂ ಕೊಪ್ಪಳ ಜಿಲ್ಲೆಯಲ್ಲಿ ಒಂದೇ ಒಂದು ಸ್ಥಾನ ಬಿಜೆಪಿಗೆ ಗೆಲ್ಲಲು ಸಾಧ್ಯವಿಲ್ಲ. ಮತ್ತೊಮ್ಮೆ ನಮ್ಮ ಎಲ್ಲಾ ಭರವಸೆ ಈಡೇರಿಸುತ್ತೇವೆ. ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುತ್ತೇವೆ. ರಾಜ್ಯವನ್ನ ಹಸಿವು ಮುಕ್ತ ರಾಜ್ಯ ಮಾಡುವುದೇ ನಮ್ಮ ಉದ್ದೇಶವಾಗಿದೆ ಎಂದು ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಹೇಳಿದರು.

ನಾನು ನಿಮ್ಮವನೆ ಎಂದ ಸಿದ್ದರಾಮಯ್ಯ

ಬಸವೇಶ್ವರ ವೃತ್ತದಿಂದ ಅದ್ದೂರಿ ಮೆರವಣಿಗೆ ಹಾಗೂ ಪ್ರೀತಿ ತೋರಿಸಿದ್ದೀರಿ. ನಾನು ಸದಾ ನಿಮ್ಮ ಚಿರಋಣಿಯಾಗಿರುತ್ತೇನೆ. ನಾನು ನಿಮ್ಮವನೆ ನಾನು 1991 ಲೋಕಸಭೆ ಚುನಾವಣೆಗೆ ನಿಂತಿದ್ದೆ. ಮೈಸೂರಿನಿಂದ ಬಂದು ಇಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಅಂದು ರಾಜೀವ್ ಗಾಂಧಿ ಹತ್ಯೆ ಆಗದೆ ಹೋಗಿದ್ದಿದ್ದರೆ ನಾನು ಗೆಲ್ಲುತ್ತಿದ್ದೆ. ಆದರೆ ನಾನು 10 ಸಾವಿರ ಮತಗಳಿಂದ ಸೋತಿದ್ದೆ. ನಾನು ಯಾವತ್ತು ಬಂದರೂ ನಿಮ್ಮ ಪ್ರೀತಿ ಅಭಿಮನಾ ಕಡಿಮೆ ಯಾಗಿಲ್ಲ. ನಾನು ಮುಂದಿನ ದಿನಗಳಲ್ಲಿ ನಿಮ್ಮ ಋಣವನ್ನು ತೀರಿಸುವ ಕೆಲಸ ಮಾಡುತ್ತೇನೆ ಎಂದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಕೊಪ್ಪಳಕ್ಕೆ ಸಾಕಷ್ಟು ಅನುದಾನ ನೀಡಿದ್ದೇನೆ. ಕೊಪ್ಪಳದ ಎಲ್ಲಾ ಕ್ಷೇತ್ರಗಳಿಗೂ 2 ರಿಂದ 3 ಸಾವಿರ ಕೋಟಿ ನೀಡಿದ್ದೇನೆ. ಕೊಪ್ಪಳ ಕಾಲೇಜು ಅಡಿಗಲ್ಲು ಮಾಡಿದ್ದು, ಅದನ್ನು ಉದ್ಘಾಟನೆ ಮಾಡಿದ್ದು ನಾನೆ. ನಾನು ಕೃಷಿಹೊಂಡ ಯೋಜನೆ ಭಾಗ್ಯ ನೀಡಿದ್ದೆ. ಇದರಡಿ 2 ಲಕ್ಷ ಕೃಷಿ ಹೊಂಡಗಳನ್ನು ತೊಡಿಸಿದ್ದೆ. ಆದರೆ ಈ ದರಿದ್ರ ಬಿಜೆಪಿ ಸರ್ಕಾರ ಆ ಯೋಜನೆಯನ್ನು ನಿಲ್ಲಿಸಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಕೇವಲ 400 ದಿನಗಳು ಬಾಕಿ ಉಳಿದಿವೆ‌, ಎಲ್ಲ ಮತದಾರರನ್ನು ತಲುಪಿ: ಪ್ರಧಾನಿ ಮೋದಿ

ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಬಿಜೆಪಿ ಸರ್ಕಾರ ಹೇಳಿತ್ತು. ಆದರೆ ರೈತರ ಖರ್ಚು ಮೂರುಪಟ್ಟು ಜಾಸ್ತಿಯಾಗಿದೆ. ನರೇಂದ್ರ ಮೋದಿ ಈ ರಾಜ್ಯದ ರೈತರಿಗೆ ಟೋಪಿ ಹಾಕಿ ಮೋಸ ಮಾಡಿದ್ದಾರೆ. 2018ರಲ್ಲಿ ಬಿಜೆಪಿ ಅಧಿಕಾರಿಕ್ಕೆ ಬಂದರೆ 1 ಲಕ್ಷ ಸಾಲಮನ್ನ ಮಾಡುತ್ತೇವೆ ಅಂತ ಹೇಳಿದ್ದರು. ಆದರೆ ಒಂದು ರೂಪಾಯಿ ಸಾಲ ಮನ್ನ ಆಗಲಿಲ್ಲ ಎಂದು ಟೀಕಿಸಿದರು.

ಮತ್ತೆ ಮೊಳಗಿದ ಹೌದ್ದ ಹುಲಿಯಾ ಘೋಷಣೆ

ಸಿದ್ದರಾಮಯ್ಯ ಅವರು ವೇದಿಕೆ ಮೇಲೆ ನಿಂತುಕೊಂಡು ವಿರೋಧ ಪಕ್ಷದ ವಿರುದ್ಧ ಕಿಡಿಕಾರುತ್ತಾ ಕಾರ್ಯಕರ್ತರನ್ನು ಹುರಿದುಂಬಿಸುತ್ತಾ ಭಾಷಣ ಮಾಡುತ್ತಿದ್ದಾರೆ. ಈ ವೇಳೆ ಅಂದು ಸಿದ್ದು ಭಾಷಣ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬ ಕೂಗಿದ್ದ ಹೌದೋ ಹುಲಿಯಾ ಘೋಷಣೆ ಇಂದು ಮತ್ತೆ ಮರುಕಳಿಸಿದೆ. ಸಿದ್ದರಾಮಯ್ಯ ಭಾಷಣ ಮಧ್ಯೆ ವ್ಯಕ್ತಿಯೊಬ್ಬ ಹೌದೋ ಹುಲಿಯಾ ಎಂದು ಹೇಳಿದ್ದು, ಕೂಡಲೇ ಪೊಲೀಸರು ಆ ವ್ಯಕ್ತಿಯನ್ನ ವೇದಿಕೆ‌ ಮುಂಭಾಗದಿಂದ ಹಿಂದಕ್ಕೆ ಕರೆದುಕೊಂಡು ಹೋದರು.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:31 pm, Tue, 17 January 23

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?