ಪ್ರಜ್ವಲ್​ ಪೆನ್​ಡ್ರೈವ್​ ಪ್ರಕರಣ: ಅನಗತ್ಯ ಹೇಳಿಕೆ ನೀಡದಂತೆ ಸಚಿವರಿಗೆ ಸಿದ್ದರಾಮಯ್ಯ ಸೂಚನೆ

| Updated By: ವಿವೇಕ ಬಿರಾದಾರ

Updated on: May 21, 2024 | 12:49 PM

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ವಿರುದ್ಧ ​ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದರೆ ಪ್ರಜ್ವಲ್​ ರೇವಣ್ಣ ಮಾತ್ರ ವಿದೇಶದಲ್ಲಿದ್ದು, ಎಸ್​ಐಟಿ ವಿಚಾರಣೆಗೆ ಹಾಜರಾಗುತ್ತಿಲ್ಲ. ಈ ಪ್ರಕರಣ ಕುರಿತಾಗಿ ಅನಗತ್ಯವಾಗಿ ಪ್ರತಿಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಸೂಚನೆ ನೀಡಿದ್ದಾರೆ.

ಪ್ರಜ್ವಲ್​ ಪೆನ್​ಡ್ರೈವ್​ ಪ್ರಕರಣ: ಅನಗತ್ಯ ಹೇಳಿಕೆ ನೀಡದಂತೆ ಸಚಿವರಿಗೆ ಸಿದ್ದರಾಮಯ್ಯ ಸೂಚನೆ
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು ಮೇ 21: ಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿರುವ ಪೆನ್​ಡ್ರೈವ್ (Pen Drive)​ ಪ್ರಕರಣ ರಾಜ್ಯದಲ್ಲಿ ಹಲ್​ಚಲ್​ ಸೃಷ್ಟಿಸಿದೆ. ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ನಡೆಸುತ್ತಿದೆ. ಪ್ರಕರಣದ ಕುರಿತು ಕೆಲ ಸಚಿವರ ಹೇಳಿಕೆಗಳು ತನಿಖೆಯ ತಪ್ಪಿಸುವ ಸಾಧ್ಯತೆ ಇದೆ. ಹೇಳಿಕೆಗಳಿಂದ ಪಕ್ಷಕ್ಕೂ ಕೂಡ ಡ್ಯಾಮೆಜ್ ಆಗುವ ಸಾಧ್ಯತೆ ಇದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಚಿವರಿಗೆ ಕೆಲ ಸೂಚನೆ ನೀಡಿದ್ದಾರೆ.

ಪೆನ್​ಡ್ರೈವ್ ಪ್ರಕರಣದಲ್ಲಿ ಅನಗತ್ಯವಾಗಿ ಪ್ರತಿಕ್ರಿಯೆ ಕೊಡಬೇಡಿ. ಮಾತು ಹೆಚ್ಚಾದರೆ ಇಡೀ ಪ್ರಕರಣದ ದಿಕ್ಕೇ ತಪ್ಪಿ ಹೋಗಬಹುದು. ಹೀಗಾಗಿ ಪ್ರತಿಕ್ರಿಯೆ ಕೊಡುವಾಗ ಎಚ್ಚರಿಕೆ ವಹಿಸಿ ಎಂದು ಮುಖಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಈ ಸಲಹೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಮತ್ತು ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದತಿಗೆ ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ

ಒಕ್ಕಲಿಗ ನಾಯಕರಿಂದ ಡಿಕೆ ಶಿವಕುಮಾರ್​ಗೆ ಸಲಹೆ

ಇನ್ನು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಒಕ್ಕಲಿಗ ನಾಯಕರಾಗಿ ಗುರುತಿಸಿಕೊಂಡಿದೆ. ಇದೀಗ, ಹೆಚ್​ಡಿ ದೇವೇಗೌಡರ ಮಗ ಮತ್ತು ಮೊಮ್ಮಗ ಇಂತಹ ಪ್ರಕರಣದಲ್ಲಿ ಸಿಲುಕಿಕೊಂಡಿದ್ದು, ಸಹಜವಾಗಿ ಒಕ್ಕಲಿಗ ಸಮಾಜ ಕೂಡ ಮುಜುಗುರ ಪಡುವಂತಾಗಿದೆ. ಅಲ್ಲದೆ, ಹೆಚ್​ಡಿ ರೇವಣ್ಣ ಮತ್ತು ಪ್ರಜ್ವಲ್​ ರೇವಣ್ಣ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸುವಲ್ಲಿ ಡಿಕೆ ಶಿವಕುಮಾರ್​ ಅವರ ಪಾತ್ರವೂ ಇದೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಒಕ್ಕಲಿಗರು ಡಿಕೆ ಶಿವಕುಮಾರ್​ ಮೇಲೆ ಮುನಿಸಿಕೊಳ್ಳಲು ಸಾಧ್ಯತೆ ಇದೆ. ಒಂದು ವೇಳೆ ಒಕ್ಕಲಿಗರು ಮುನಿಸಿಕೊಂಡರೆ ಕಾಂಗ್ರೆಸ್​ಗೆ ಹಳೇ ಮೈಸೂರು ಭಾಗದಲ್ಲಿ ನಷ್ಟವಾಗಲಿದೆ.

ಹೀಗಾಗಿ ಪ್ರಕರಣದಿಂದ ಅಂತರ ಕಾಯ್ದುಕೊಳ್ಳವಂತೆ ಡಿಕೆ ಶಿವಕುಮಾರ್​ ಅವರಿಗೆ ಒಕ್ಕಲಿಗ ನಾಯಕರು ಸಲಹೆ ನೀಡಿದ್ದಾರೆ. ಪೆನ್​ಡ್ರೈವ್​ ಕೇಸ್​ನಲ್ಲಿ ಮಾತನಾಡದಂತೆ ಸಲಹೆ ನೀಡಿದ್ದಾರೆ ಎಂದು ಟಿವಿ9ಗೆ ಮೂಲಗಳಿಂದ ಮಾಹಿತಿ ದೊರೆತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ