ಸಿದ್ದರಾಮಯ್ಯ ಮುಸಲ್ಮಾನರೇ, ವಿವಾದತ್ಮಕ ಹೇಳಿಕೆ ನೀಡಿದ ಈಶ್ವರಪ್ಪ!

ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದು ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇನ್ನು ಈ ಬಗ್ಗೆ ಕೆಎಸ್ ಈಶ್ವರಪ್ಪ ಮಾತನಾಡಿ ಸಿದ್ದರಾಮಯ್ಯ ಮುಸಲ್ಮಾನರೇ ಎಂದು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಮುಸಲ್ಮಾನರೇ, ವಿವಾದತ್ಮಕ ಹೇಳಿಕೆ ನೀಡಿದ ಈಶ್ವರಪ್ಪ!
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 13, 2023 | 6:40 PM

ಹುಬ್ಬಳ್ಳಿ, (ಡಿಸೆಂಬರ್ 13): ಮುಸ್ಲಿಮರ (Muslim) ಜೊತೆಗೆ ನಿಲ್ಲುತ್ತೇನೆ ಎನ್ನುವುದಲ್ಲ ಸಿದ್ದರಾಮಯ್ಯ(Siddaramaiah) ಮುಸಲ್ಮಾನರೇ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ(KS Eshwarappa)  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಡಿಕೆ ಶಿವಕುಮಾರ್ ಮುಸಲ್ಮಾನರನ್ನು ಮೈ ಬ್ರದರ್ ಎಂದು ಕರೆದರು. ಇದರ ಅರ್ಥ ಏನು? ಮುಸ್ಲಿಂರನ್ನ ತೃಪ್ತಿ ಪಡಿಸಲು ಯಾವ ಮಟ್ಟಕ್ಕೆ ಹೋಗಲು ಅವರು ಸಿದ್ದರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಬ್ರದರ್ ಎನ್ನುವುದು ಏನಣ್ಣ ಚೆನ್ನಾಗಿದೀವಿ ಅನ್ನೋ ಅರ್ಥದಲ್ಲಿ. ವಯಸ್ಸದಾವರನ್ನು ಬ್ರದರ್ ಅಂತಾರೆ. ಸಿದ್ದರಾಮಯ್ಯರದ್ದು ಸ್ವಾರ್ಥ. ಅಧಿಕಾರಕ್ಕಾಗಿ ರಾಷ್ಟದ್ರೋಹಿಯನ್ನು ಬ್ರದರ್ ಎಂದು ಕರೆಯುತ್ತಾರೆ. ಎಷ್ಟರ ಮಟ್ಟಿಗೆ ಸೊಕ್ಕು ಇರಬೇಕು ಎಂದು ಕಿಡಿಕಾರಿದರು.

ತೆಲಂಗಾಣದಲ್ಲಿ ಎಲ್ಲ ಮುಸ್ಲಿಮರು ಒಗ್ಗಟ್ಟಾಗಿ ಇರಿ ಎಂದರು. ಸೊಕ್ಕಿನ ಮಾತನ್ನು ಕಾಂಗ್ರೆಸ್ನವರು ‌ಮಾತಾಡಿದ್ದಾರೆ. ಇದನ್ನು ಸಿದ್ದರಾಮಯ್ಯ ಏನು ಮಾತನಾಡಿದ್ದೇನೆಂದು ಸಮರ್ಥನೆ ಮಾಡಿಕೊಂಡರು‌. ಸಿದ್ದರಾಮಯ್ಯ ಹಿಂದೆ ಹೀಗೆ ಮಾಡಿ ಅಧಿಕಾರ ಕಳೆದುಕೊಂಡರು. ಆದರೂ ಅವರಿಗೆ ಬುದ್ದಿ ಬಂದಿಲ್ಲ. ಸಿದ್ದರಾಮಯ್ಯ ಎಲ್ಲ ಸಮಾಜವನ್ನು ಮೈಮೇಲೆ ಎಳೆದುಕೊಂಡರು. ಜಾತಿ ಒಡೆದ ನಂತರ ಮುಸ್ಲಿಮರು ಮಾತ್ರ ಗತಿ ಎಂದು 10 ಸಾವಿರ ಕೋಟಿ ರೂಪಾಯಿ ಕೊಡುತ್ತೇನೆ ಎಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಂ ಸಮಾವೇಶದಲ್ಲಿ ಭಯೋತ್ಪಾದಕ ನಂಟು ಇರುವ ವ್ಯಕ್ತಿ ಜೊತ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿರುವ ವಿಚಾರದ ಬಗ್ಗೆ ಮಾತನಾಡಿ. ಅದು ಪ್ರೂವ್ ಆಗಬೇಕು,ಅದು ಅವರ ವಯಕ್ತಿಕ ವಿಚಾರ. ನಾವು ಮುಸ್ಲಿಮರ ವಿರೋಧಿ‌ ಅಲ್ಲ. ನಾವು ರಾಷ್ಟ್ರದ್ರೋಹಿ ಮುಸ್ಲಿಮರ ವಿರೋಧಿ ಎಂದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ